Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಚಂದನ್  ಫ್ಲರ್ಟ್ ಗೆ  ಗೆಳೆತನದ ಹಾಡು ಹಾಡಿದ ಕಿಚ್ಚ  ಸುದೀಪ್ 








     ಸಾಮಾನ್ಯವಾಗಿ ಹುಡುಗಿಯರನ್ನು ಚುಡಾಯಿಸಿಕೊಂಡು ಓಡಾಡುವ ಹುಡುಗರನ್ನು

ಫ್ಲರ್ಟ್ ಎನ್ನುತ್ತಾರೆ. ಇದೀಗ ಇದೇ ಹೆಸರಿನಲ್ಲಿ ಚಲನಚಿತ್ರವೊಂದು ನಿರ್ಮಾಣವಾಗಿದೆ. ಕಿಚ್ಚ ಸುದೀಪ್ ಗರಡಿಯ ಹುಡುಗ, ಸಿಸಿಎಲ್ ಸಹಪಾಠಿಯೂ ಆದ  ಚಂದನ್ ಕುಮಾರ್ ನಾಯಕನಾಗಿ ಅಭಿನಯಿಸಿರುವ ಈ ಚಿತ್ರದ  ಹಾಡೊಂದಕ್ಕೆ ಸುದೀಪ್ ಅವರೇ ದನಿಯಾಗಿದ್ದಾರೆ. ಈ ಹಾಡಿನ ಬಿಡುಗಡೆಯಾಗಿದೆ.

     ‌‌‌‌ಫ್ಲರ್ಟ್ ಚಿತ್ರದಲ್ಲಿ ನಟಿಸುವ ಜತೆಗೆ ಚಿತ್ರದ ನಿರ್ದೇಶನದ ಜವಾಬ್ದಾರಿಯನ್ನೂ ಸಹ ಚಂದನ್ ಕುಮಾರ್ ಅವರೇ ಹೊತ್ತಿದ್ದಾರೆ. ಅಲ್ಲದೆ  ಎವರೆಸ್ಟ್ ಪಿಕ್ಚರ್ಸ್ ಬ್ಯಾನರ್ ಅಡಿ ಚಂದನ್ ಅವರ ಪತ್ನಿ ಕವಿತಾಗೌಡ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಎ ಪ್ಯೂರ್ ಡವ್ ಸ್ಟೋರಿ ಎಂಬ ಅಡಿಬರಹ 'ಫ್ಲರ್ಟ್' ಚಿತ್ರಕ್ಕಿದ್ದು, ಇದಕ್ಕೆ ವಿವರಣೆಯನ್ನೂ ಚಂದನ್ ನೀಡಿದ್ದಾರೆ.

     ವಿಶೇಷವಾಗಿ  ಸುದೀಪ್ ಅವರ ಹಾಡಿಗೆ ನಕುಲ್ ಅಭಯಂಕರ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ಹಾಡಿನ ಬಿಡುಗಡೆ ಸಂದರ್ಭದಲ್ಲಿ‌ ‌ಸುದೀಪ್‌ ಅವರು ಚಂದನ್ ಗೆ ವಿಡಿಯೋ ಮೂಲಕ ಶುಭ ಹಾರೈಸಿದರು.

      "ಇದೊಂದು ರೋಮ್ ಕಾಮ್ ಸಿನಿಮಾ ಆದರೂ ಫ್ರೆಂಡ್ ಶಿಪ್, ಲವ್, ಹೀಗೆ ಎಲ್ಲಾ ಥರದ ಎಂಟರ್ ಟೈನಿಂಗ್ ಎಲಿಮೆಂಟ್ಸ್ ಒಳಗೊಂಡಿದೆ.  ಫ್ಲರ್ಟ್ ಎಂದರೆ ಬರೀ ಚುಡಾಯಿಸುವುದು ಎಂದರ್ಥವಲ್ಲ. ಗಾಢವಾದ ಪ್ರೀತಿಯನ್ನೂ ಸಹ ಫ್ಲರ್ಟ್ ಎಂದೇ ಕರೆಯುತ್ತಾರೆ" ಎಂದು ಮಾತು ಆರಂಭಿಸಿದ ಚಂದನ್ "ಎಲ್ಲರ ಡವ್ ನಲ್ಲೂ ಒಂದೊಂದು ಲವ್ ಇದೆ. ಈ ಚಿತ್ರದಲ್ಲಿ  ರೋಮ್ ಕಾಮ್ ಜತೆಗೆ ಸೈಕೋ ಕ್ಯಾರೆಕ್ಟರ್ ಕೂಡ ಇದೆ. ಇಡೀ ಚಿತ್ರ ಎಲ್ಲೂ ಬೋರಾಗದಂತೆ ಫಾಸ್ಟ್ ಆಗಿ ಸಾಗುತ್ತದೆ.  ಈಗ ರಿಲೀಸ್ ಆಗಿರುವ ಫ್ರೆಂಡ್ ಶಿಪ್ ಆಂಥೆಮ್ ಸಾಂಗನ್ನು ಸುದೀಪ್ ಹಾಡಿದ್ದಾರೆ".

      "ಹಿರಿಯ ನಟಿ ಶೃತಿ, ಸಾಧು ಕೋಕಿಲ ಉತ್ತಮ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗಿರಿ ನನ್ನ ಸ್ನೇಹಿತನಾಗಿ ನಟಿಸಿದ್ದಾರೆ. ಇಬ್ಬರು ನಾಯಕಿಯರಾಗಿ ಅಕ್ಷತಾ ಬೋಪಣ್ಣ  ಹಾಗೂ ನಿಮಿಕಾ ರತ್ನಾಕರ್ ನಟಿಸಿದ್ದಾರೆ" ಎಂದು ವಿವರಿಸಿದರು.

    ನಟ ಸಾಧು ಕೋಕಿಲ "ನಾನು ಸಾಮಾನ್ಯವಾಗಿ ಕಾರ್ಯಕ್ರಮಗಳಿಗೆ ಕೈಕೊಡೋದೇ ಜಾಸ್ತಿ. ಆದರೆ ಈತ ಸಬ್ಜೆಕ್ಟ್ ಮಾಡಿಕೊಂಡಿರುವ ರೀತಿ ನನಗೆ ತುಂಬಾ ಇಷ್ಟವಾಯಿತು. ನಿರ್ದೇಶಕನೇ ನಿರ್ಮಾಪಕನಾದಾಗ ಜವಾಬ್ದಾರಿ ಜಾಸ್ತಿ ಇರುತ್ತದೆ. ಒಂದೊಳ್ಳೇ ಥಾಟ್ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ. ನನ್ನದೂ ಸಹ ನಾನು ಈವರೆಗೆ ಮಾಡಿರದಂಥ ರೋಲ್,ಅವರ ನಿರ್ದೇಶನದ ಶೈಲಿ ಇಷ್ಟವಾಯಿತು. ನಾನಿಷ್ಟೊತ್ತು ಮಾತಾಡ್ತಿದ್ದೇನೆಂದರೆ ಅದಕ್ಕೆ ಕಾರಣ ಚಂದನ್" ಎಂದು ನಾಯಕ, ನಿರ್ದೇಶಕನನ್ನು  ಹಾಡಿ ಹೊಗಳಿದರು.

      ನಾಯಕಿಯರಾದ ನಿಮಿಕಾ ರತ್ನಾಕರ್ ಅಕ್ಷತಾ ಬೋಪಣ್ಣ "ಈ ಚಿತ್ರದ  ಕಥೆ, ನಿರೂಪಣೆಯೇ ವಿಭಿನ್ನವಾಗಿದೆ. ಇಂಥ ಒಂದು ಚಿತ್ರದ ಭಾಗವಾಗಿರುವುದಕ್ಕೆ ತುಂಬಾ ಖುಷಿಯಾಯ್ತು" ಎಂದು ಹೇಳಿದರು. ಕಲಾವಿದರಾದ ಗಿರಿ, ಮೂಗು ಸುರೇಶ್, ತಂತಮ್ಮ ಕ್ಯಾರೆಕ್ಟರ್ ಬಗ್ಗೆ ಮಾತಾಡಿದರು. ಜಸ್ಸಿ ಗಿಫ್ಟ್ ಈ ಚಿತ್ರದ ಸಂಗೀತ ನಿರ್ದೇಶಕರಾಗಿದ್ದು ಉಳಿದ 3  ಹಾಡುಗಳ ಜತೆಗೆ ಹಿನ್ನೆಲೆ ಸಂಗೀತವನ್ನೂ ಅವರೇ ಒದಗಿಸಿದ್ದಾರೆ.



























Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*