LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

 ಚುನಾವಣಾ ಬಾಂಡ್​ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣ; ಕಟೀಲ್ ವಿರುದ್ದದ ಅರ್ಜಿ ವಜಾ

ನವದೆಹಲಿ: ಚುನಾವಣಾ ಬಾಂಡ್​ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆಯನ್ನು ಮುಂದುವರಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್​ ಇಂದು ಹೇಳಿದೆ. ಈ ಮೂಲಕ ಕಟೀಲ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.


ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಜನಾಧಿಕಾರ ಸಂಘರ್ಷ ಪರಿಷತ್​ನ ಆದರ್ಶ್ ಆರ್.ಅಯ್ಯರ್ ಅವರು ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆ ಮಾಡಿದ್ದು, ಅಸ್ಪಷ್ಟ ಹಾಗೂ ಸಂಪೂರ್ಣ ಊಹೆಯ ದೂರು ಎಂದು ಹೇಳಿದೆ. ಈ ಮೂಲಕ ಮೇಲ್ಮನವಿಯನ್ನು ವಜಾಗೊಳಿಸಿದೆ.


ಸೂಕ್ತ ಸಾಕ್ಷ್ಯಾಧಾರವಿಲ್ಲದೆ ನಾವು ತನಿಖೆಗೆ ಅವಕಾಶ ನೀಡಲು ಸಾಧ್ಯವಿಲ್ಲ. ಹೈಕೋಟ್ ಆದೇಶದ ಮಧ್ಯೆ ನಾವು ಮಧ್ಯ ಪ್ರವೇಶಿಸಲು ಬಯಸುವುದಿಲ್ಲ ಎಂದು ಹೇಳಿತು.


ಅದಕ್ಕೆ ಪ್ರತಿಯಾಗಿ ವಕೀಲ ಪ್ರಶಾಂತ್ ಭೂಷಣ್​, ಕ್ರಿಮಿನಲ್ ಪ್ರಕರಣವನ್ನು ಈ ರೀತಿಯಾಗಿ ಕುಗ್ಗಿಸಲು ಸಾಧ್ಯವಿಲ್ಲ ಎಂದು ಅರ್ಜಿದಾರರ ಪರ ವಾದಿಸಿದರು. ಆದರೆ, ಭವಿಷ್ಯದಲ್ಲಿ ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಎಫ್​ಐಆರ್​ ದಾಖಲಿಸಬಾರದು ಎಂದು ಪೀಠ ಆದೇಶಿಸಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್