LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

 ಜಿಲ್ಲೆಯ 10.20 ಲಕ್ಷಕ್ಕೂ ಹೆಚ್ಚು ಅಸಂಘಟಿತ ಕಾರ್ಮಿಕರು ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿ: ಸಂಸದ ಈರಣ್ಣ ಕಡಾಡಿ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಶ್ರಮಿಕ ವರ್ಗದ ಕಲ್ಯಾಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಬೆಳಗಾವಿ ಜಿಲ್ಲೆಯ ಅಸಂಘಟಿತ ವಲಯದ ಸುಮಾರು 10.20 ಲಕ್ಷಕ್ಕೂ ಹೆಚ್ಚು  ಕಾರ್ಮಿಕರು 'ಇ-ಶ್ರಮ್' ಪೋರ್ಟಲ್ ಅಡಿಯಲ್ಲಿ ನೋಂದಾಯಿಸಿಕೊಂಡು  ಸರ್ಕಾರದ ವಿವಿಧ ಸೌಲಭ್ಯಗಳಿಗೆ ಅರ್ಹರಾಗಿದ್ದಾರೆ ಎಂದು ರಾಜ್ಯಸಭಾ ಸಂಸದ  ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ.

ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಬೆಳಗಾವಿ ಜಿಲ್ಲೆಯ ಅಸಂಘಟಿತ ವಲಯದ ಕಾರ್ಮಿಕರ ಅಭಿವೃದ್ಧಿ ಮತ್ತು ಸಾಮಾಜಿಕ ಭದ್ರತೆಗೆ ಸಂಬoದಿಸಿದಂತೆ  ಕೇಳಿದ ಪ್ರಶ್ನೆಗೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ನೀಡಿರುವ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ.

ಇ-ಶ್ರಮ್ ಪೋರ್ಟಲ್ ಅಡಿಯಲ್ಲಿ ಬೆಳಗಾವಿ ಜಿಲ್ಲೆಯ ಕಾರ್ಮಿಕರು ವಿವಿಧ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದು, ಪ್ರಮುಖವಾಗಿ ಆಯುಷ್ಮಾನ್ ಭಾರತ್ 3,77,920 ಫಲಾನುಭವಿಗಳು, ವಿಬಿ ಜಿ- ರಾಮ್ ಜಿ ಗ್ರಾಮೀಣ್ 2,72,136 ಫಲಾನುಭವಿಗಳು, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ  1,58,333 ಫಲಾನುಭವಿಗಳು, ಒನ್ ನೇಷನ್ ಒನ್ ರೇಷನ್ ಕಾರ್ಡ್ 73,381 ಫಲಾನುಭವಿಗಳು ನೋಂದಾಯಿಸಿಕೊಂಡು  ಸರ್ಕಾರದ ವಿವಿಧ ಸೌಲಭ್ಯಗಳಿಗೆ ಅರ್ಹರಾಗಿದ್ದಾರೆ ಎಂದರು.

ಕಟ್ಟಡ ನಿರ್ಮಾಣ ಕಾರ್ಮಿಕರು, ಕಬ್ಬು ಕಟಾವು ಮಾಡುವವರು ಮತ್ತು ಮನೆ ಕೆಲಸದವರ ಶ್ರಮಕ್ಕೆ ಗೌರವ ನೀಡುವುದು ಸರ್ಕಾರದ ಆದ್ಯತೆಯಾಗಿದೆ. ಇ-ಶ್ರಮ್ ಪೋರ್ಟಲ್ ಮೂಲಕ ಅವರಿಗೆ ಕೇವಲ ಆರ್ಥಿಕ ಭದ್ರತೆಯಷ್ಟೇ ಅಲ್ಲದೆ, 'ಸ್ಕಿಲ್ ಇಂಡಿಯಾ' ಮೂಲಕ ಕೌಶಲ್ಯಾಭಿವೃದ್ಧಿ ಮತ್ತು 'ನ್ಯಾಷನಲ್ ಕರಿಯರ್ ಸರ್ವಿಸ್' ಮೂಲಕ ಹೊಸ ಉದ್ಯೋಗಾವಕಾಶಗಳನ್ನು ಒದಗಿಸಲಾಗುತ್ತಿದೆ, ಎಂದು ಸಚಿವರು ಮಾಹಿತಿ ನೀಡಿದ್ದಾರೆಂದು ಸಂಸದ ಈರಣ್ಣ ಕಡಾಡಿ  ಅವರು ವಿವರಿಸಿದ್ದಾರೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್