LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

 ಬಂಡೀಪುರ-ವಯನಾಡ್ ನಡುವೆ ಸಂಚಾರಕ್ಕೆ ಯಾವುದೇ ತೊಡಕಿಲ್ಲ: ಸಚಿವ ಈಶ್ವರ್​ ಖಂಡ್ರೆ

ಬೆಂಗಳೂರು: ಬಂಡೀಪುರ-ವಯನಾಡ್ ನಡುವೆ ಸಂಚಾರಕ್ಕೆ ಯಾವುದೇ ತೊಡಕಿಲ್ಲ ಎಂದು ಸಚಿವ ಈಶ್ವರ್​ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.


ವಿಕಾಸಸೌಧದಲ್ಲಿ ಕರ್ನಾಟಕ ಮತ್ತು ಕೇರಳ ರಾಜ್ಯಗಳನ್ನು ಸಂಪರ್ಕಿಸುವ ಬಂಡೀಪುರ ಮತ್ತು ವಯನಾಡ್ ರಸ್ತೆಗಳ ನಡುವೆ ರಾತ್ರಿ ಸಂಚಾರದ ಕುರಿತ ಪ್ರಶ್ನೆಗೆ ಉತ್ತರಿಸಿ, "ಪ್ರಸ್ತುತ ರಾತ್ರಿ 9ರವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದರ ಹೊರತಾಗಿಯೂ ಎರಡೂ ಕಡೆಯಿಂದ 2 ಬಸ್​ಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ವೈದ್ಯಕೀಯ ತುರ್ತು ಸಂದರ್ಭದಲ್ಲಿ ವಾಹನಗಳನ್ನು ಪರಿಶೀಲಿಸಿ ಬಿಡಲಾಗುತ್ತಿದೆ" ಎಂದರು.


"ಅರಣ್ಯದೊಳಗೆ ಅಳವಡಿಸಲಾಗಿರುವ ವಿದ್ಯುತ್ ತಂತಿಗಳು ಕೆಲವೆಡೆ ಜೋತು ಬಿದ್ದಿದ್ದು, ಆನೆಗಳು ಸಾವಿಗೀಡಾಗುತ್ತಿವೆ. ವಿದ್ಯುತ್ ತಂತಿ ತೂಗಾಡದಂತೆ ಕ್ರಮ ವಹಿಸಲು ಮತ್ತು ಅಂತರ್ಗತ ಕೇಬಲ್ ಅಳವಡಿಸಿಲು ವಿದ್ಯುತ್​ ಕಂಪನಿಗಳಿಗೆ ತಿಳಿಸಲಾಗಿದೆ" ಎಂದು ಹೇಳಿದರು.


"ಆನೆಗಳಿಂದ ಬೆಳೆಹಾನಿ ಮತ್ತು ಜೀವಹಾನಿ ಆಗುತ್ತಿದ್ದು, ಇದನ್ನು ತಪ್ಪಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್​ ಸಾಫ್ಟ್ ರಿಲೀಸ್​ ಸೆಂಟರ್​) ನಿರ್ಮಿಸಲು ಯೋಜನೆ ರೂಪಿಸಲಾಗತ್ತಿದೆ. ಇದಕ್ಕೆ 100 ಕೋಟಿ ರೂ. ಅಗತ್ಯವಿದ್ದು, ಬಜೆಟ್​ನಲ್ಲಿ ಅನುದಾನ ನೀಡುವಂತೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು" ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ