LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಮಹಾತ್ಮಾ ಗಾಂಧೀಜಿ ಅವರ ಜೀವನವೇ ನಮಗೆ ಆದರ್ಶ:ದಲಿತ ಸೇನೆ ಅಧ್ಯಕ್ಷ ಸಚಿನ್ ಕಾಂಬ್ಳೆ

ಕಾಗವಾಡ:ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗುತ್ತವೆ ಎಂದು ಮಹಾತ್ಮಾ ಗಾಂಧೀಜಿಯವರು ಆಶಯ ವ್ಯಕ್ತಪಡಿಸಿದ್ದರು ಆದ್ದರಿಂದ ಅವರ ಜೀವನವೇ ನಮಗೆ ಆದರ್ಶಪ್ರಾಯವಾಗಿದೆ ಎಂದು ದಲಿತ ಸೇನೆ ತಾಲ್ಲೂಕಾಧ್ಯಕ್ಷ ಸಚಿನ್ ಕಾಂಬ್ಳೆ ಹೇಳಿದರು.
ಅವರು ಅ.02 ರಂದು ಸಮೀಪದ ಸಪ್ತಸಾಗರ ಗ್ರಾಮದಲ್ಲಿ ಗಾಂಧೀಜಿ ಅವರ ಜಯಂತಿ ಪ್ರಯುಕ್ತ ವಿಶೇಷ ಗ್ರಾಮಸಭೆಯ ಅಧ್ಯಕ್ಷತೆಯನ್ನು ಉದ್ದೇಶಿಸಿ ಮಾತನಾಡುತ್ತಾ,ಗ್ರಾಮದ ಅಭಿವೃದ್ಧಿ, ಮೂಲಸೌಕರ್ಯ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಸಭೆಯಲ್ಲಿ ಅವಕಾಶ ಕಲ್ಪಿಸಿದ್ದು ಗ್ರಾಮದ ಅಭಿವೃದ್ಧಿಗಾಗಿ ಎಲ್ಲರೂ ಸಹಕರಿಸಬೇಕೆಂದು ಹೇಳಿದರು.
ಗ್ರಾಮದ ಪಂಚಾಯಿತಿ ವತಿಯಿಂದ ವಿಶೇಷ ಗ್ರಾಮ ಸಭೆಯನ್ನು ಆಯೋಜಿಸಿದ್ದಯ,ಗ್ರಾಮಕ್ಕೆ ಬೇಕಾದ ಎಲ್ಲ ರೀತಿಯ ಅಭಿವೃದ್ಧಿ ಕಾರ್ಯಗಳಿಗೆ ಗ್ರಾಮದ ಜನರ ಸಹಕಾರ ಅಗತ್ಯವಿದ್ದು, ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗ್ರಾಮಸ್ಥರೆಲ್ಲರೂ ಸಲಹೆ ನೀಡಬೇಕು.ನಿಮ್ಮ ಸಹಕಾರದೊಂದಿಗೆ ಗ್ರಾಮದ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು
ವೇಳೆ ಕುಡಿಯುವ ನೀರು, ರಸ್ತೆ, ಚರಂಡಿ, ಸ್ವಚ್ಛತೆ, ವಿದ್ಯುತ್ ಹಾಗೂ ಸಾರ್ವಜನಿಕರಿಗೆ ಅಗತ್ಯವಿರುವ ಮೂಲಸೌಕರ್ಯಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಗ್ರಾಮದಲ್ಲಿನ ಕುಂದುಕೊರತೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸುವಂತೆ ಗ್ರಾಮಸ್ಥರು ಮನವಿ ಮಾಡಿದರು. ಸರ್ಕಾರದ ವಿವಿಧ ಯೋಜನೆಗಳ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಲಾಯಿತು. ಸಭೆಯಲ್ಲಿ ಗ್ರಾಮಸ್ಥರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವನ್ಯಜೀವಿಗಳಿಗೂ ಮಾನವರಂತೆ ಮನಸ್ಸಿದೆ, ಅವುಗಳನ್ನು ಪ್ರೀತಿಸೋಣ: ಡಿಎಫ್‌ಒ ಮಲ್ಲಿನಾಥ ಕುಸನಾಳದೈನಂದಿನ ಜೀವನದಲ್ಲಿ ಪ್ರಾಣಾಯಾಮದಿಂದ ಆರೋಗ್ಯ ಮತ್ತು ಮನಃಶಾಂತಿ: ಅಮೃತಾಂನಂದ ಮಹಾಸ್ವಾಮಿಗಳ ಬೋಧನೆಇಂಡಿ: ಶಾಸಕ ಯಶವಂತರಾಯಗೌಡ ಪಾಟೀಲ ಅವರ 59ನೇ ಜನ್ಮದಿನದ ನಿಮಿತ್ತ ಉಚಿತ ಆರೋಗ್ಯ ತಪಾಸಣಾ ಶಿಬಿರಕೊಪ್ಪಳದಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಸಾಮೂಹಿಕ ಪಿಂಡ ಪ್ರದಾನ ಹಾಗೂ ಪಿತೃ ತರ್ಪಣಬಳ್ಳಾರಿಯ ಶ್ರೀ ಸಣ್ಣದುರ್ಗಮ್ಮ ದೇವಸ್ಥಾನದಲ್ಲಿ  11ನೇ ವರ್ಷದ ಶರನ್ನವರಾತ್ರಿ ಉತ್ಸವ ಇಂದು ಹನುಮಾನ್ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮಮೂಳೆಯ ಗುಣಮಟ್ಟ ಕಡಿಮೆ ಇರುವ ರೋಗಿಗಳಲ್ಲಿ ಆಂಕರ್‌ರಹಿತ ರಿಪೇರ್‌ಗೆ ನೆರವಾಗುವ ಸಾಧನ ಅಭಿವೃದ್ಧಿಹೊಸಪೇಟೆಯಲ್ಲಿ ಪಂಡಿತ್ ಪುಟ್ಟರಾಜ ಗವಾಯಿಗಳ ಪುಣ್ಯಸ್ಮರಣೆಗ್ರಾಮೀಣ ಕ್ರೀಡೆಗಳು ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಸಂಕೇತ: ಶಾಸಕ ವಿಶ್ವಾಸ ವೈದ್ಯಸಮಾಜದ ಓರೆಕೋರೆಗಳನ್ನು ತಿದ್ದುವ ವರದಿಗಾರರು ಶ್ರೇ?ರು: ಧರೆಪ್ಪ ಸಾಂಗ್ಲೀಕರ