LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

 ಮುಡಾ ಹಗರಣದಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಜಾತಿ ಗಣತಿ: ಕುಮಾರಸ್ವಾಮಿ ಕಿಡಿ

ಬೆಂಗಳೂರು: ಮುಡಾ ಹಗರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿ ಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.


ಜೆಪಿ ನಗರದ ತಮ್ಮ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆಗೆ ಹೊರಳಿಸಲು ತಂತ್ರಗಾರಿಕೆ ಮಾಡುತ್ತಿದ್ದಾರೆ. ಈಗ ಮುಡಾ ಹಗರಣದ ಮೂಲಕ ಜನರ ದಿಕ್ಕು ತಪ್ಪಿಸಲು ಜಾತಿ ಗಣತಿಯ ವಿಚಾರವನ್ನು ಮುಂದಕ್ಕೆ ತಂದಿದ್ದಾರೆ ಎಂದು ಆರೋಪಿಸಿದರು.


ಕಾಂತರಾಜು ಆಯೋಗ ರಚನೆ ಮಾಡಿದ್ದು 10 ವರ್ಷಗಳ ಹಿಂದೆ. ಈಗ ಅ ವರದಿಗೆ 10 ವರ್ಷ ಆಗಿ ಹೋಗಿದೆ. 10 ವರ್ಷಗಳಲ್ಲಿ ಅನೇಕ ಬೆಳವಣಿಗೆಗಳು ಆಗಿವೆ. ಹಳೆಯ ಜಾತಿ ಗಣತಿ ವರದಿಯನ್ನು ಇಷ್ಟು ದಿನ ಯಾಕೆ ಬಿಡುಗಡೆ ಮಾಡಿರಲಿಲ್ಲ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.


ಕುಮಾರಸ್ವಾಮಿ ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಲು ಬಿಡಲಿಲ್ಲ ಎಂದು ನನ್ನ ಮೇಲೆ ಆರೋಪ ಮಾಡುತ್ತಲೇ ಇದ್ದಾರೆ. ಲೋಕಸಭೆ ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರ ಕೈಗೆ ಜಾತಿಗಣತಿ ವರದಿ ಕೊಡಲಾಗಿದೆ ಅಲ್ಲವೇ? ಲೋಕಸಭೆ ‌ಚುನಾವಣೆ ಮೊದಲೇ ವರದಿ ಪಡೆದರೂ ಇಷ್ಟು ದಿನಗಳವರೆಗೂ ಅದರ ಬಗ್ಗೆ ಸದ್ದೇ ಇರಲಿಲ್ಲ, ಯಾಕೆ? ಎಂದು ಪ್ರಶ್ನಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್