Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕು: ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹ



ಮೈಸೂರು: "ಮುಡಾ ಕಚೇರಿಯಲ್ಲಿ ನಡೆದಿರುವ ಹಗರಣವನ್ನು ಸಿಬಿಐಗೆ ವಹಿಸಬೇಕು" ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದ್ದಾರೆ.


ಭಾನುವಾರ ಬಿಜೆಪಿ ಕಚೇರಿಗೆ ಆಗಮಿಸಿದ ವೇಳೆ, ಮುಡಾ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಬ್ರಹ್ಮಾಂಡ ಭ್ರಷ್ಟಾಚಾರ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, "ಸಿಎಂ ಸಿದ್ದರಾಮಯ್ಯನವರ ಮೂಗಿನ‌ಡಿ ಎರಡೂವರೆ ಸಾವಿರ ಕೋಟಿಯಷ್ಟು ಸರ್ಕಾರಿ ಆಸ್ತಿ ದುರುಪಯೋಗವಾಗಿದೆ ಎಂಬ ವಿಚಾರ ಕೇಳಿ ದಿಗ್ಬ್ರಮೆಯಾಯಿತು" ಎಂದರು.


"ಬಡವರಿಗೆ, ದಲಿತರಿಗೆ ಕೊಡಲು ಇವರ ಬಳಿ ನಿವೇಶನಗಳಿಲ್ಲ. ಕಳ್ಳ-ಕಾಕರಿಗೆ ಬೇನಾಮಿಯಾಗಿ ಕೊಡಲು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು. ತಪ್ಪಿತಸ್ಥರ ತಲೆದಂಡವಾಗಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸುತ್ತೇವೆ" ಎಂದು ಎಚ್ಚರಿಸಿದರು.





"ಇದೊಂದು ಮಹಾ ಮೋಸ. ಇದರಲ್ಲಿ ದೊಡ್ಡವರ ಕೃಪಾಕಟಾಕ್ಷ ಇದೆ. ಹಾಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ. ಇಂತಹ ಹಗರಣಗಳು ಮೈಸೂರು ಒಂದರಲ್ಲೋ ಅಥವಾ ರಾಜ್ಯದ ಎಲ್ಲಾ ಕಡೆ ನಡೆದಿದೆಯೋ ಎನ್ನುವುದನ್ನೂ ತಿಳಿಯಬೇಕು" ಎಂದು ಹೇಳಿದರು.


ಚಂದ್ರಶೇಖರನಾಥ ಸ್ವಾಮೀಜಿ ಬಗ್ಗೆ ಸಚಿವ ರಾಜಣ್ಣ ಹಗುರ ಹೇಳಿಕೆ ಕುರಿತು ಮಾತನಾಡಿ, "ನಾನು ಆ ವಿವಾದದ ಬಗ್ಗೆ ಪ್ರತಿಕ್ರಿಯಿಸಲು ಬಯಸಲ್ಲ. ಇದು ಕಾಂಗ್ರೆಸ್​ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದನ್ನು ಸೂಚಿಸುತ್ತದೆ" ಎಂದರು.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ