Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಮೂಢನಂಬಿಕೆ, ತಪ್ಪು ಕಲ್ಪನೆ ಕುರಿತು ಅರಿವು ಇರಲಿ- ಡಾ.ವಸಂತ

ಬಳ್ಳಾರಿ,ಫೆ10 - ಅಪಸ್ಮಾರ ರೋಗದ ಬಗ್ಗೆ ಇರುವ ತಪ್ಪು ಕಲ್ಪನೆಗಳು ಮತ್ತು ಮೂಢನಂಬಿಕೆಗಳ ಬಗ್ಗೆ ಸಾರ್ವಜನಿಕರು ಅರಿವು ಹೊಂದಬೇಕು ಎಂದು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕ ಡಾ.ವಸಂತ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಿಮ್ಹಾನ್ಸ್ ಸಂಸ್ಥೆ, ಕರ್ನಾಟಕ ಮೆದುಳಿನ ಉಪಕ್ರಮ ಕಾರ್ಯಕ್ರಮ, ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟಿçÃಯ ಅಪಸ್ಮಾರ ದಿನಾಚರಣೆ ಜಿಲ್ಲಾ ಆಸ್ಪತ್ರೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಪಸ್ಮಾರ (ಮೂರ್ಛೆ ರೋಗ) ಖಾಯಿಲೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅಪಸ್ಮಾರ(ಮೂರ್ಛೆರೋಗ) ಎಂಬುದು ಮೆದುಳಿನ ನರಕೋಶಗಳ ಅಸಹಜ ಚಟುವಟಿಕೆಯಿಂದ ಉಂಟಾಗುವ ದೀರ್ಘಕಾಲದ ನರವೈಜ್ಞಾನಿಕ ಕಾಯಿಲೆಯಾಗಿದೆ. ಇದರಿಂದ ದೇಹದ ಚಲನೆ, ನಡವಳಿಕೆ ಮತ್ತು ಪ್ರಜ್ಞೆಯಲ್ಲಿ ತಾತ್ಕಾಲಿಕ ಅಡಚಣೆಯಾಗುತ್ತದೆ. ಇದು ಜನ್ಮಜಾತ ದೋಷಗಳು, ತಲೆಗೆ ಪೆಟ್ಟು, ಸೋಂಕು, ಗೆಡ್ಡೆ ಅಥವಾ ಸ್ಟೊçÃಕ್ ನಿಂದ ಬರಬಹುದು. ಆದರೆ ಶೇ.70 ರಷ್ಟು ಪ್ರಕರಣಗಳನ್ನು ಔಷಧಿಗಳಿಂದ ನಿಯಂತ್ರಿಸಬಹುದು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, ಅಪಸ್ಮಾರವು ಸಾಂಕ್ರಾಮಿಕ ರೋಗವಲ್ಲ ಮತ್ತು ಸರಿಯಾದ ವೈದ್ಯಕೀಯ ಚಿಕಿತ್ಸೆಯಿಂದ ರೋಗಿಗಳು ಸಾಮಾನ್ಯ ಜೀವನವನ್ನು ನಡೆಸಬಹುದು. ಹಾಗಾಗಿ ಸಾರ್ವಜನಿಕರು ಅಪಸ್ಮಾರ ರೋಗದ ಲಕ್ಷಣ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅರಿವು ಹೊಂದಬೇಕು ಎಂದರು.
ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಬಸರೆಡ್ಡಿ ಅವರು ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ಕೋಣೆ ಸಂ.05 ರಲ್ಲಿ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರವಿದ್ದು, ಇಲ್ಲಿ ಬಹುವಿಧದ ತಜ್ಞ ವೈದ್ಯರನ್ನೊಳಗೊಂಡ ತಂಡ ಕಾರ್ಯನಿರ್ವಹಿಸುತಿದ್ದು, ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡೆದುಕೊಳ್ಳಬೇಕು. ಇದು ಸಂಪೂರ್ಣವಾಗಿ ಉಚಿತವಾಗಿರುತ್ತದೆ ಎಂದು ತಿಳಿಸಿದರು.
ಜಿಲ್ಲಾ ಆಸ್ಪತ್ರೆಯ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದ ಮೆದುಳಿನ ಆರೋಗ್ಯ ಉಪಕ್ರಮದ ಜಿಲ್ಲಾ ಸಂಯೋಜಕ ಸಣ್ಣ ಕೇಶವ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ವೇಳೆ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಕೆ.ಜಿ.ವೀರೇಂದ್ರ ಕುಮಾರ್, ಸ್ಥಾನಿಕ ವೈದ್ಯಾಧಿಕಾರಿ ಡಾ.ವಿಶ್ವನಾಥ ಕೆ., ವಿಭಾಗದ ಮುಖ್ಯಸ್ಥರು ಹಾಗೂ ತಜ್ಞ ವೈದ್ಯ ಡಾ.ಶ್ರೀಧರ ಮದ್ದಿನೇನಿ, ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದ ನೋಡೆಲ್ ಅಧಿಕಾರಿ ಡಾ.ರಾಕೇಶ್, ಸಾಮಾನ್ಯ ಕರ್ತವ್ಯ ನಿರತ ವೈದ್ಯಾಧಿಕಾರಿ ಡಾ.ಪ್ರಿಯಾಂಕ ಪ್ರಸಾದ್, ಶುಶ್ರೂಷಕ ಅಧೀಕ್ಷಕಿ ವಿಮಲಾಕ್ಷಿ ಸೇರಿದಂತೆ ಅಧಿಕಾರಿ-ಸಿಬ್ಬಂದಿ ವರ್ಗ ಮತ್ತು ಸಾರ್ವಜನಿಕರು ಭಾಗವಹಿಸಿದ್ದರು

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*