LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜಕೀಯ ಪ್ರಭಾವ ಬಳಸಿ ಐಪಿಎಲ್‌ ಫೈನಲ್ ಶಿಫ್ಟ್‌: ಬಿಸಿಸಿಐ ಹೇಳಿಕೆಯೇ ಬೋಗಸ್ ಎಂದ ಡಿಕೆಶಿ!

ಬೆಂಗಳೂರು;

ಐಪಿಎಲ್‌ ಫೈನಲ್‌ ಪಂದ್ಯ ಅಹಮದಾಬಾದ್‌ಗೆ ಸ್ಥಳಾಂತರಿಸಿರುವ ವಿಚಾರದಲ್ಲಿ ಬಿಸಿಸಿಐ ಸಂಪೂರ್ಣ ಮಾಹಿತಿ ನೀಡದೆ, ಸುಳ್ಳು ಹೇಳುತ್ತಿದೆ. ರಾಜಕೀಯ ಪ್ರಭಾವ ಬಳಸಿ ಐಪಿಎಲ್‌ ಫೈನಲ್‌ ಪಂದ್ಯವನ್ನು ಬೆಂಗಳೂರಿನಿಂದ ಅಹಮದಾಬಾದ್‌ಗೆ ಸ್ಥಳಾಂತರಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಸಿಸಿಐ ಕಾರ್ಯದರ್ಶಿ ಬೋಗಸ್‌ ಹೇಳಿಕೆ ನೀಡುತ್ತಿದ್ದು, ಸಂಪೂರ್ಣ ಮಾಹಿತಿ ನೀಡಿಲ್ಲ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಪಂದ್ಯಾವಳಿ ವೀಕ್ಷಿಸಲು ಶಾಸಕರಿಗೆ ತಲಾ 2 ಟಿಕೆಟ್‌ ನೀಡುತ್ತಿದ್ದರು. ಅದು ಹೆಚ್ಚಾಗುತ್ತದೆಯೇ? ನಮ್ಮ ಮೇಲೆ ಆರೋಪಿಸುತ್ತಿರುವ ಬಿಜೆಪಿ-ಜೆಡಿಎಸ್‌ ನಾಯಕರು, ತಾವು ಪಡೆದಿದ್ದ ಟಿಕೆಟ್‌ ವಾಪಸ್‌ ಕೊಡಬೇಕಿತ್ತು. ನಮ್ಮ ಶಾಸಕರಿಗೆ ಅವರದ್ದೇ ಸ್ಥಾನ, ಗೌರವವಿದೆ ಎಂದರು.

ಐಪಿಎಲ್‌ ಪಂದ್ಯ ಸ್ಥಳಾಂತರ ಬಿಜೆಪಿ ನಾಯಕತ್ವದಲ್ಲಿ ನಡೆಯುತ್ತಿದೆ. ಗುಜರಾತ್‌ಗೆ ದೊಡ್ಡ ಆರ್ಥಿಕ ಅನುಕೂಲ ಮಾಡಿಕೊಡಲು ಸ್ಥಳಾಂತರ ಮಾಡಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 30 ಸಾವಿರ ಆಸನ ಸಾಮರ್ಥ್ಯವಿದೆ. ಅಹಮದಾಬಾದ್‌ನಲ್ಲಿ 1 ಲಕ್ಷದವರೆಗೆ ಆಸನವಿದೆ. ಅದರಿಂದ ದೊಡ್ಡ ಲಾಭವಾಗುತ್ತದೆ ಎಂದು ಬಿಸಿಸಿಐ ಈ ಕ್ರಮ ಕೈಗೊಂಡಿದೆ. ಅದರ ಜತೆಗೆ ರಾಜಕೀಯ ಪ್ರಭಾವವೂ ಇದಕ್ಕೆ ಕಾರಣ. ಪ್ರತಿವರ್ಷ ಇದೇ ರೀತಿ ಐಪಿಎಲ್‌ ಫೈನಲ್‌ ಪಂದ್ಯ ಸ್ಥಳಾಂತರಿಸಲಾಗುತ್ತಿದೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್