ಬಳ್ಳಾರಿ. ಜೂ. 13: ಕಾಂಗ್ರೆಸ್ ಪಕ್ಷದ ಯುವ ಶಾಸಕ ರಿಜ್ವಾನ್ ಹರ್ಷದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ನಗರದ ಕಾಂಗ್ರೆಸ್ ಮುಖಂಡ ಫರಾನ್ ಅಹಮದ್ ಅವರು ಇಂದು ನಗರದ ಅಧಿದೇವತೆ ದುರ್ಗಮ್ಮ ದೇವಸ್ಥಾನದಲ್ಲಿ ಇಂದು ಮುಂಜಾನೆ 11 ಗಂಟೆಗೆ ದೇವಸ್ಥಾನದ ಆವರಣದಲ್ಲಿ 101 ತೆಂಗಿನ ಕಾಯಿಗಳನ್ನು ಒಡೆಯುವ ಮೂಲಕ ವಿಶೇಷ ಪೂಜೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಫರಾನ್ ಅಹಮದ್, ರಿಜ್ವಾನ್ ಹರ್ಷದ್ ಅವರು ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದು ಅವರು ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ, ಅಷ್ಟೇ ಅಲ್ಲದೆ ಅವರು ಪಕ್ಷದ ಪ್ರತಿ ಚುನಾವಣೆಯಲ್ಲೂ ಕೆಲವೊಂದು ಪ್ರದೇಶಗಳ ಉಸ್ತುವಾರಿಯನ್ನು ತೆಗೆದುಕೊಂಡು ಪಕ್ಷಕ್ಕಾಗಿ ಕೆಲಸ ಮಾಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕಾರಣರಾಗಿದ್ದಾರೆ, ಇಂತಹ ಪಕ್ಷ ನಿಷ್ಠ ಕಾರ್ಯಕರ್ತರಿಗೆ ಮತ್ತು ಶಾಸಕರಾದ ರಿಜ್ವಾನ್ ಹರ್ಷದ್ ಅವರಿಗೆ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸ್ಥಾನಮಾನ ಹೊಂದಿರುವ ಸಚಿವ ಸ್ಥಾನವನ್ನು ನೀಡಬೇಕೆಂದು ಸಿಎಂ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಅನ್ನು ಒತ್ತಾಯಿಸಿದರು.
ರಿಜ್ವಾನ್ ಅರ್ಶದ್ ಅವರಿಗೆ ಇಲ್ಲಿಯವರಿಗೆ ಪಕ್ಷವೂ ಅವರ ಸೇವೆಯನ್ನು ಗುರುತಿಸಿರುವುದಿಲ್ಲ ಈಗಲಾದರೂ ಅವರು ಸೇವೆಯನ್ನು ಗುರುತಿಸಿ ಸಚಿವ ಸ್ಥಾನವನ್ನು ನೀಡಬೇಕೆಂದು ಆಗ್ರಹಿಸಿದರು.
