LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

 ಲಕ್ಷ್ಮೀಪುತ್ರನಾದ ಚಿಕ್ಕಣ್ಣ

      ಅಂಬಾರಿ, ಅದ್ಧೂರಿ, ಐರಾವತ, ರಾಟೆಯಂತಹ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರುವ ಎ.ಪಿ.ಅರ್ಜುನ್ ತಮ್ಮದೇ ಎಪಿ ಅರ್ಜುನ್ ಫಿಲ್ಮಂಸ್ ನಡಿ ಕಿಸ್, ಅದ್ಧೂರಿ ಲವರ್ಸ್ ನಂತಹ ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ಕೊಡುಗೆಯಾಗಿ ಕೊಟ್ಟಿದ್ದಾರೆ. ಇದೇ ಎಪಿ ಅರ್ಜುನ್ ಫಿಲ್ಮಂಸ್ ನ ಮೂರನೇ ಸಿನಿಮಾ ಅನೌನ್ಸ್ ಆಗಿದೆ.


     'ಲಕ್ಷ್ಮೀಪುತ್ರ' ಎಂಬ ಟೈಟಲ್ ಇಡಲಾಗಿದ್ದು, ಚಿತ್ರಕ್ಕೆ ಅರ್ಜುನ್ ಕಥೆ ಹಾಗೂ ಸಾಹಿತ್ಯ ಬರೆಯುತ್ತಿದ್ದಾರೆ. ಲಕ್ಷ್ಮೀಪುತ್ರನಾಗಿ ಸ್ಯಾಂಡಲ್ ವುಡ್ ಉಪಾಧ್ಯಕ್ಷ ಚಿಕ್ಕಣ್ಣ ಅಭಿನಯಿಸುತ್ತಿದ್ದಾರೆ.      ಎಪಿ ಅರ್ಜುನ್ ಗರಡಿಯಲ್ಲಿ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ವಿಜಯ್ ಎಸ್ ಸ್ವಾಮಿ ಈ ಸಿನಿಮಾ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸುತ್ತಿದ್ದಾರೆ. ಅರ್ಜುನ್ ಅವರಿಂದ ನಿರ್ದೇಶನದ ಪಟ್ಟುಗಳನ್ನು ಕಲಿತಿರುವ ವಿಜಯ್ ಅವರೀಗ ಪೂರ್ಣಪ್ರಮಾಣದ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.


    ನ್ಯಾಚುರಲ್ ಸ್ಟಾರ್ ಚಿಕ್ಕಣ್ಣ ಹಾಗೂ ಸ್ಟಾರ್ ಡೈರೆಕ್ಟರ್ ಎಪಿ ಅರ್ಜುನ್ ಕಾಂಬೋದ ಮೊದಲ ಸಿನಿಮಾವನ್ನು ಅರ್ಜುನ್ ಮಡದಿ ಅನ್ನಪೂರ್ಣ ಎಪಿ ಅರ್ಜುನ್ ನಿರ್ಮಾಣ ಮಾಡುತ್ತಿದ್ದಾರೆ. ಸಚಿವ ಸಂತೋಷ್ ಲಾಡ್ ಲಕ್ಷ್ಮೀಪುತ್ರ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ರವಿಕಿರಣ್ ಗೌಡ  ಸಹ ನಿರ್ಮಾಪಕರಾಗಿ ಸಾಥ್ ಕೊಡುತ್ತಿದ್ದಾರೆ. ಗಿರೀಶ್ ಆರ್ ಗೌಡ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ, ದೀಪು ಎಸ್ ಕುಮಾರ್ ಸಂಕಲನ, ಡಾ.ಕೆ.ರವಿ ವರ್ಮಾ ಸಾಹಸ ನಿರ್ದೇಶನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಲಕ್ಷ್ಮೀಪುತ್ರ ಚಿತ್ರಕ್ಕಿದೆ. ಎಪಿ ಅರ್ಜುನ್, ಪ್ರಶಾಂತ್ ರಾಜಪ್ಪ ಹಾಗೂ ವಿಜಯ್ ಈಶ್ವರ್ ಸಂಭಾಷಣೆ, ರಾಜೇಶ್ ರಾವ್ ಸಹ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದೆ. ಇದೇ ತಿಂಗಳ 24ಕ್ಕೆ ಚಿತ್ರದ ಮುಹೂರ್ತ ನೆರವೇರಿಸಲು ಚಿತ್ರತಂಡ ಸಜ್ಜಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್