ಬೆಳಗಾವಿ, ಡಿಸೆಂಬರ್ 18: ಜಮ್ಮು-ಕಾಶ್ಮೀರದ ಲಡಾಖ್ನಲ್ಲಿ ಗುಡ್ಡ ಕುಸಿದು ಬೆಳಗಾವಿ ಮೂಲದ ಯೋಧರೊಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಮಹೇಶ್ ಅವರು ಡಿಸೆಂಬರ್ 14ರಂದು ಲಡಾಖ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗುಡ್ಡ ಕುಸಿದು ಮೃತಪಟ್ಟಿದ್ದಾರೆ. ಸೇನಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವ ಹೊರತೆಗೆದಿದ್ದರು.
ಸೈನಿಕ ಮಹೇಶ್ ಅವರ ಪಾರ್ಥಿವ ಶರೀರ ಮಂಗಳವಾರ (ಡಿಸೆಂಬರ್ 17) ಸಂಜೆ ಇರಣಟ್ಟಿ ಗ್ರಾಮಕ್ಕೆ ಆಗಮಿಸಿತು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಗೌರವ ಸಮರ್ಪಿಸಿದರು. ಸಕಲ ಸರ್ಕಾರಿ ಗೌರವದೊಂದಿಗೆ ಹುಟ್ಟೂರಿನಲ್ಲಿ ಮಹೇಶ್ ಅವರ ಅಂತ್ಯಸಂಸ್ಕಾರ ನೆರವೇರಿತು. ಎರಡು ತಿಂಗಳ ಹಿಂದೆಯಷ್ಟೇ ಸೈನಿಕ ಮಹೇಶ್ ಅವರ ನಿಶ್ಚಿತಾರ್ಥ ಕೂಡ ಆಗಿದ್ದು, ಮದುವೆ ದಿನಾಂಕ ಕೂಡ ನಿಗದಿಯಾಗಿತ್ತು. ಆದರೆ ಲಡಾಖ್ನಲ್ಲಿ ನಡೆದ ದುರಂತದಲ್ಲಿ ಮಹೇಶ್ ಪ್ರಾಣ ತೆತ್ತಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.