LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ವಿಜಯ್ ದೇವರಕೊಂಡ ಹೊಸ ಸಿನಿಮಾ

ಟಾಲಿವುಡ್ ರೌಡಿಬಾಯ್ ವಿಜಯ್ ದೇವರಕೊಂಡ ಹೊಸ ಚಿತ್ರ ಘೋಷಣೆಯಾಗಿದೆ. ಹಾಯ್ ನಾನ್ನ ಸಿನಿಮಾ ಖ್ಯಾತಿಯ ಶೌರ್ಯುವ್ ಜೊತೆ ವಿಜಯ್ ಕೈ ಜೋಡಿಸಿದ್ದಾರೆ. ಸಿನಿಮಾದ ಅನೌನ್ಸ್‌ಮೆಂಟ್ ಪೋಸ್ಟರ್ ಆಕರ್ಷಕವಾಗಿದೆ. ಈ ಪೋಸ್ಟರ್‌ನಲ್ಲಿ ವಿಜಯ್ ದೇವರಕೊಂಡ ನಾಲ್ಕು ಶ್ವಾನಗಳನ್ನು ಹಿಡಿದು ಗತ್ತಿನಿಂದ ನಡೆದು ಬರುತ್ತಿದ್ದಾರೆ. ಅವರ ಬೆನ್ನ ಹಿಂದೆ ಏಳು ಜನರು ವಿವಿಧ ಆಯುಧಗಳನ್ನು ಹಿಡಿದು ನಿಂತಿದ್ದಾರೆ‌.
ಹೆಸರಿಡದ ಚಿತ್ರದಲ್ಲಿ ಜಾಗತಿಕ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಹಾಲಿವುಡ್‌ನ ಖ್ಯಾತ ಸರಣಿಗಳಾದ ‘ಹೌಸ್ ಆಫ್ ದಿ ಡ್ರ್ಯಾಗನ್’ ಮತ್ತು ‘ಫಾಲ್ಔಟ್‌’ಗೆ ಕೆಲಸ ಮಾಡಿದ ಅಲೆಜಾಂಡ್ರೊ ಮಾರ್ಟಿನೆಜ್ ಅವರು ಈ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಇನ್ನು ಬ್ಯಾಟ್‌ಮ್ಯಾನ್ ಫಾರೆವರ್ ಹಾಗೂ ಗಾಡ್ಸ್ ಆಫ್ ಈಜಿಪ್ಟ್ ನಂತಹ ಬೃಹತ್ ಸಿನಿಮಾಗಳ ವಿಎಫ್‌ಎಕ್ಸ್ ಮೇಲ್ವಿಚಾರಣೆ ಮಾಡಿದ್ದ ಎರಿಕ್ ಡಸ್ಟರ್ ಅವರು ವಿಷ್ಯುವಲ್ ಎಫೆಕ್ಟ್ಸ್ ನೋಡಿಕೊಳ್ಳಲಿದ್ದಾರೆ.
ಅನಿಮಲ್ ಮತ್ತು ಓಂ ಶಾಂತಿ ಓಂ ಚಿತ್ರಗಳಿಗೆ ಕೆಲಸ ಮಾಡಿದ ಸುರೇಶ್ ಸೆಲ್ವರಾಜನ್ ಕಲಾ ನಿರ್ದೇಶನ ಹಾಗೂ ಹೇಷಮ್ ಅಬ್ದುಲ್ ವಹಾಬ್ ಅವರ ಸಂಗೀತ ಈ ಚಿತ್ರಕ್ಕಿದೆ. ವೀರಾ ಬ್ಯಾನರ್ ಅಡಿಯಲ್ಲಿ ಅತ್ಯಂತ ಅದ್ಧೂರಿಯಾಗಿ ಮೂಡಿಬರುತ್ತಿರುವ ಈ ಸಿನಿಮಾ, ವಿಜಯ್ ದೇವರಕೊಂಡ ಕೆರಿಯರ್‌ನಲ್ಲಿ ಮತ್ತೊಂದು ಮೈಲಿಗಲ್ಲಾಗಲಿದೆ. ಸದ್ಯಕ್ಕೆ ಸಿನಿಮಾಗೆ ‘VDxShouryuv’ ಎಂದು ಕರೆಯಲಾಗಿದೆ. ಅಂದಹಾಗೇ ಇದು ಪೌರಾಣಿಕ ಹಿನ್ನೆಲೆಯುಳ್ಳ ಚಿತ್ರವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್