Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ, ಬೆದರಿಕೆ ಒಡ್ಡಿರುವ ಇಬ್ಬರು ಉಪನ್ಯಾಸಕರ ಹೇಯ ಕೃತ್ಯವನ್ನು ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಬಳ್ಳಾರಿ:  ಬೆಂಗಳೂರಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ, ಬೆದರಿಕೆ ಒಡ್ಡಿರುವ ಇಬ್ಬರು ಉಪನ್ಯಾಸಕರ ಹೇಯ ಕೃತ್ಯವನ್ನು ಖಂಡಿಸಿ ಇಂದು ಜಿಲ್ಲಾ ಆಸ್ಪತ್ರೆ ಕಾಂಪೌಂಡ್ ಬಳಿ AIDSO ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು.


ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಅವರು ಮಾತನಾಡಿ, ಬೆಂಗಳೂರಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ, ಬೆದರಿಕೆ ಒಡ್ಡಿರುವ ಇಬ್ಬರು ಶಿಕ್ಷಕರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಅಗ್ರಹಿಸಿದರು.

ಹೆಣ್ಣು ಮಕ್ಕಳಿನ ಮೇಲಿನ ದೌರ್ಜನ್ಯ ದಿನೇ ದಿನೇ ಹೆಚ್ಚುತ್ತಿದೆ, ಒರಿಸ್ಸಾದಲ್ಲಿ ಕಾಲೇಜಿನ ಉಪನ್ಯಾಸಕರು ನೀಡಿರುವ ಲೈಂಗಿಕ ಕಿರುಕುಳದಿಂದ ಬೇಸತ್ತು, ಒಬ್ಬ ವಿದ್ಯಾರ್ಥಿನಿ ಬೆಂಕಿ ಹಾಕಿಕೊಂಡು, ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡದಿದ್ದರೆ, ಇಂತಹ ಪ್ರಕರಣಗಳು ಹೆಚ್ಚಾಗುತ್ತವೆ,

ಈ ಘೋರ ಘಟನೆಯು ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಪಕವಾಗಿರುವ ಲೈಂಗಿಕ ದೌರ್ಜನ್ಯ ಸಮಸ್ಯೆಗಳಿಗೆ ಹಿಡಿದ ಕನ್ನಡಿಯಾಗಿದೆ. ಯುವ ಮನಸ್ಸುಗಳನ್ನು ಸ್ವಚ್ಛದ ಗೊಳಿಸಿ ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕಾದ ಪ್ರಾಧ್ಯಾಪಕರು ಇಂತಹ ಹೇಯ ಕೃತ್ಯಗಳಲ್ಲಿ ಭಾಗಿಯಾಗಿರುವುದು ದುರಂತವೇ ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಘಟನೆಯ ಬಗ್ಗೆ ತ್ವರಿತ, ನಿಷ್ಪಕ್ಷಪಾತ ಮತ್ತು ಸಂಪೂರ್ಣ ತನಿಖೆ ನಡೆಸಿ, ಎಲ್ಲಾ ಅಪರಾಧಿಗಳನ್ನು ಕೂಡಲೇ ಕಾನೂನಿನ ಮುಂದೆ ತರಬೇಕು. ಆರೋಪಿ ಉಪನ್ಯಾಸಕರನ್ನು ತಕ್ಷಣವೇ ಅಮಾನತುಗೊಳಿಸಬೇಕು. ಇದರಲ್ಲಿ ಪ್ರಬಲ ಕುಂದುಕೊರತೆ ನಿವಾರಣಾ ಕಾರ್ಯಸಮಿತಿ ಸ್ಥಾಪಿಸುವುದು ಸೇರಿದಂತೆ, ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯದಿಂದ ವಿದ್ಯಾರ್ಥಿಗಳನ್ನು ರಕ್ಷಿಸಲು ಶಿಕ್ಷಣ ಸಂಸ್ಥೆಗಳಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸಬೇಕು. ಸಂತ್ರಸ್ತೆಗೆ ಸಂಪೂರ್ಣ ಬೆಂಬಲ ನೀಡಬೇಕು ಎಂದು ಆಗ್ರಹಿಸಿದರು. ಸರ್ಕಾರ ಕೂಡ ವಿದ್ಯಾರ್ಥಿ ಯುವಜನರಲ್ಲಿ ಉನ್ನತ ಆದರ್ಶ ಮೌಲ್ಯಗಳನ್ನು ಬಿತ್ತುವ ನಿಟ್ಟಿನಲ್ಲಿ ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಸಂಘಟಿಸಬೇಕೆಂದು ಹೇಳಿದರು.


ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಕೆ.ಈರಣ್ಣ, ಜಿಲ್ಲಾ ಉಪಾಧ್ಯಕ್ಷರಾದ ಎಂ.ಶಾಂತಿ, ಪದಾಧಿಕಾರಿಗಳಾದ ಹೊನ್ನರಸ್ವಾಮಿ, ಗೀರೀಶ್ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ