LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Gadag

*ಶ್ರೀಕ್ಷೇತ್ರ ವರವಿಯ ಸಮಗ್ರ ಅಭಿವೃದ್ಧಿ ಕ್ರಮ : ಎಚ್. ಕೆ. ಪಾಟೀಲ*

ಗದಗ, 16 : ಈ ಭಾಗದ ಸರ್ವ ಜನಪ್ರತಿನಿಧಿಗಳ ಸಹಕಾರದೊಂದಿಗೆ ಶ್ರೀಕ್ಷೇತ್ರ ವರವಿಯ ಸಮಸ್ತ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಎಚ್. ಕೆ. ಪಾಟೀಲ ಹೇಳಿದರು. 
ಅವರು ಶ್ರೀಕ್ಷೇತ್ರ ವರವಿಯ ಮೌನೇಶ್ವರರ ಜಾತ್ರಾಮಹೋತ್ಸವದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. 
ರಾಜ್ಯದ ಹಾಗೂ ಹೊರರಾಜ್ಯಗಳಿಂದ ಮೌನೇಶ್ವರರ ದರ್ಶನಕ್ಕೆ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಅವರಿಗೆ ತಂಗಲು ಎಲ್ಲ ಮೂಲಭೂತ ಸೌಲಭ್ಯಗಳುಳ್ಳ 25 ಕೊಠಡಿಗಳ ಅತಿಥಿಗೃಹ ನಿರ್ಮಾಣ, ಗಣೇಶ ಹಾಗೂ ವಿಠೋಭ ಮಂದಿರಗಳ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ್ದು, ಮೌನೇಶ್ವರ ಸಮುದಾಯ ಭವನ ಮತ್ತು ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಬೇಕಾಗುವ ಅನುದಾನ ಸರ್ಕಾರದಿಂದ ಬಿಡುಗಡೆಗೊಳಿಸಲು ಶ್ರಮಿಸುತ್ತೇನೆ ಎಂದರು. 
ವಿಶ್ವಕರ್ಮ ಮಹಾ ಒಕ್ಕೂಟದ ರಾಜ್ಯ ಅಧ್ಯಕ್ಷರಾದ ವಿಜಯಕುಮಾರ ಪತ್ತಾರ ಮಾತನಾಡಿ, ಸಮುದಾಯ ಭವನದ ಉಳಿದ ಕಾಮಗಾರಿಗಳಿಗಾಗಿ ಈಗಾಗಲೇ ಒಂದು ಕೋಟಿ ರೂಗಳ ಅನುದಾನ ಬಿಡುಗಡೆಯಾಗಿದೆ. ಸಚಿವರು, ಶಾಸಕರ ಸಹಕಾರದೊಂದಿಗೆ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸುವ ಮೂಲಕ ಹಾಗೂ ಟ್ರಸ್ಟಿನ ಮತ್ತು ಸಮಾಜದ ಸಹಕಾರದಲ್ಲಿ ವರವಿಯ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆವಹಿದ್ದ ಶ್ರೀಕ್ಷೇತ್ರ ವರವಿಯ ಮೌನೇಶ್ವರ ದೇವಸ್ಥಾನದ ಹಾಗೂ ಮಠದ ವಿಕಾಸ ಟ್ರಸ್ಟನ ಅಧ್ಯಕ್ಷರಾದ ಮೋಹನ ಸಿ. ನರಗುಂದ ಮಾತನಾಡಿದರು.  
ಶಹಾಪುರ ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮಿಗಳವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಮಾಜಿ ಶಾಸಕರಾದ ರಾಮಣ್ಣ ಲಮಾಣಿ, ಜಿಲ್ಲಾ ಕಾಂಗ್ರೆಸ ಅಧ್ಯಕ್ಷರಾದ ವಾಸಣ್ಣ ಕುರಡಗಿ, ಮುಖಂಡರಾದ ವಿಶ್ವನಾಥ ಕಪ್ಯತ್ತನವರ, ಹುಮಾಯೂನ ಮಾಗಡಿ, ಡಿ. ಕೆ. ಹೊನ್ನಪ್ಪನವರ, ರಾಜಗೋಪಾಲ ಕಡ್ಲಿಕೊಪ್ಪ, ತಿಪ್ಪಣ್ಣ ಕೊಂಚಿಗೇರಿ, ವೀರಯ್ಯ ಮಠಪತಿ, ದೇವಪ್ಪ ಲಮಾಣಿ, ಅಜ್ಜನಗೌಡ ಪಾಟೀಲ, ಮುತ್ತಣ್ಣ ಕಪ್ಯತ್ತನವರ, ಅಶೋಕ ಮಂದಾಲಿ, ನಾಗರಾಜ ಕಮ್ಮಾರ ಸೇರಿದಂತೆ ಟ್ರಸ್ಟಿನ ಸರ್ವ ಸದಸ್ಯರು ಉಪಸ್ಥಿತರಿದ್ದರು. ವಿಶ್ವನಾಥ ಕಮ್ಮಾರ ಕಾರ್ಯಕ್ರಮ ನಿರೂಪಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್