Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಶ್ರೀ ಧರ್ಮಸ್ಥಳ ಸಂಘದಿಂದ ವನ್ನೂರ ಗ್ರಾಮದಲ್ಲಿ ಪೌಷ್ಟಿಕ ಆಹಾರ ಮಾಹಿತಿ ಶಿಬಿರ

ನೇಸರಗಿ.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ  ವನ್ನೂರ ಗ್ರಾಮದಲ್ಲಿ ಸಂಕಲ್ಪ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ  ಮಾಹಿತಿ ಕಾರ್ಯಕ್ರಮ ಬುಧವಾರದಂದು   ಆಯೋಜಿಸಲಾಗಿತ್ತು.
    ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಅಭಿವೃದ್ಧಿ ಅಧಿಕಾರಿ  ಶಿವಾನಂದ ಕೊಳದೂರ,   ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಾದ  ಶ್ರೀನಿವಾಸ್  ಕುಲಕರ್ಣಿ, ಎಸ್ ಬಿ  ಹುದ್ದಾರ, ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷರಾದ   ಶ್ರೀಮತಿ ಮಂಜುಳಾ ಪಾಟೀಲ, ಈಶ್ವರ್ ಹೊಸಮನಿ, ರುದ್ರಪ್ಪ ಪಾಟೀಲ,   ತಾಲೂಕಿನ ಜ್ಞಾನವಿಕಾಸ ಸಮನ್ವೇಧಿಕಾರಿ ಶೈಲಾ ಜೆ  ಅವರುಗಳು  ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

  ಶಾಲಾ ಮುಖ್ಯೋಪಾಧ್ಯಾಯರಾದ  ಶ್ರೀನಿವಾಸ ಕುಲಕರ್ಣಿ ಮಾತನಾಡಿ  ಪೌಷ್ಟಿಕ ಆಹಾರ ಸೇವನೆ, ಸಿರಿಧಾನ್ಯಗಳ ಬಳಕೆ, ಸಿರಿಧಾನ್ಯಗಳನ್ನು ಉಪಯೋಗಿಸುವುದರಿಂದ ಆಗುವ ಅನುಕೂಲಗಳ ಬಗ್ಗೆ ಮಾಹಿತಿ ನೀಡಿದರು.ಪೌಷ್ಟಿಕ ಆಹಾರ ಸೇವನೆ, ನಿತ್ಯ ಜೀವನದಲ್ಲಿ ಸಿರಿಧಾನ್ಯ,  ಹಸಿರು ತರಕಾರಿ ಸೊಪ್ಪು, ಇದರಲ್ಲಿ ಸಿಗುವಂತ ವಿಟಮಿನ್  ಪೌಷ್ಠಿಕವಾಗಿ, ಪರಿಸರ ಮತ್ತು ನೈತಿಕವಾಗಿ ಒಳ್ಳೆಯದು. ಸಿರಿಧಾನ್ಯಗಳ ವಿಧಗಳು, ಅವುಗಳಿಂದ ಆರೋಗ್ಯಕ್ಕೆ ಇರುವ ಪ್ರಯೋಜನಗಳ ಬಗ್ಗೆ ಗರ್ಭಿಣಿಯರಿಗೆ ವಯಸ್ಕರರಿಗೆ  ವೃದ್ಧರಿಗೆ ಬಳಕೆ ಮಾಡುವ ಸಿರಿಧಾನ್ಯವು ಪೌಷ್ಟಿಕಾಂಶದ ಧಾನ್ಯಗಳಲ್ಲಿ ಒಂದಾಗಿದೆ, ಏಕೆಂದರೆ ಇದು ಕಬ್ಬಿಣ, ಪ್ರೋಟೀನ್, ಉತ್ಕರ್ಷಣ ನಿರೋಧಕಗಳು, ಆಹಾರದ ಫೈಬರ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಫೋಲೇಟ್ - ಗರ್ಭಾವಸ್ಥೆಯಲ್ಲಿ ಹೆಚ್ಚು ಅಗತ್ಯವಿರುವ ಎಲ್ಲಾ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಇದರ ಹೆಚ್ಚಿನ ಕಬ್ಬಿಣದ ಅಂಶವು ಹಿಮೋಗ್ಲೋಬಿನ್ ಮಟ್ಟವನ್ನು ಸುಧಾರಿಸುತ್ತದೆ ಎಂದು ಮಾಹಿತಿ ನೀಡಿದರು.
  ಈ ಸಂದರ್ಭದಲ್ಲಿ   ಪೌಷ್ಟಿಕ ಆಹಾರ  ತಯಾರಿಯನ್ನು ಪ್ರಾತ್ಯಕ್ಷಿತೆ ಮೂಲಕ ಮಾಡಲಾಯಿತು.
ಕಾರ್ಯಕ್ರಮದ ನಿರೂಪಣೆ , ಜ್ಞಾನವಿಕಾಸ ಸಮನ್ವಯಾಧಿಕಾರಿ ಶೈಲಾ ಜೆ, ಸ್ವಾಗತ ಆಶಾ ಸೇವಾಪ್ರತಿನಿಧಿ  ನೆರವೇರಿಸಿದರು. ಮೀನಾಕ್ಷಿ ವಂದಿಸಿದರು. ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ