LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ಸ್ವಾಸ್ಥ್ಯ ಸಂಕಲ್ಪಕ್ಕೆ ಬದ್ಧರಾಗಿ, ದುಶ್ಚಟಗಳಿಂದ ದೂರವಿರಿ: ಕೆ.ಎ. ಧಡೂತಿ

 

ರನ್ನ ಬೆಳಗಲಿ, ಆ.೨೯: ವಿದ್ಯಾರ್ಥಿಗಳು ಹಾಗೂ ಯುವಜನರು ಸ್ವಾಸ್ಥ್ಯ ಸಂಕಲ್ಪಕ್ಕೆ ಬದ್ಧರಾಗಿ, ಯಾವುದೇ ಕಾರಣಕ್ಕೂ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಬೆಳಗಲಿ ವಿದ್ಯಾವರ್ಧಕ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಕಾರ್ಯಕ್ರಮದ ಅಧ್ಯಕ್ಷ ಕೆ.ಎ. ಧಡೂತಿ ಹೇಳಿದರು.

ಪಟ್ಟಣದ ಬೆಳಗಲಿ ವಿದ್ಯಾವರ್ಧಕ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಮುಧೋಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ, ಬಾಗಲಕೋಟೆ ಹಾಗೂ ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ, ಬೆಂಗಳೂರು ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ’ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯೋಗ ಶಿಕ್ಷಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ನೀಲಣ್ಣವರ ಮಾತನಾಡಿ, ಡ್ರಗ್ಸ್, ಮದ್ಯ, ತಂಬಾಕು ಸೇರಿದಂತೆ ವಿವಿಧ ಮಾದಕ ವಸ್ತುಗಳ ವ್ಯಸನವು ವ್ಯಕ್ತಿಯ ಆರೋಗ್ಯದ ಮೇಲೆ ಮಾತ್ರವಲ್ಲದೆ ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿತಿ, ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ಜೀವನದ ಮೇಲೂ ಗಂಭೀರ ಪರಿಣಾಮ ಬೀರುತ್ತದೆ ಎಂದರು.ಶಾಲಾ ಮಕ್ಕಳು, ಯುವಕರು, ವಿದ್ಯಾವಂತರು, ಸಾಧಕರು ಹಾಗೂ ಮಹಿಳೆಯರೂ ವಿವಿಧ ರೀತಿಯ ವ್ಯಸನಗಳಿಗೆ ಒಳಗಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಾದಕ ವಸ್ತುಗಳಿಗೆ ಆಕರ್ಷಿತರಾಗುವುದು ಇಂದಿನ ಸಮಾಜ ಎದುರಿಸುತ್ತಿರುವ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ ಯೋಗ, ಧ್ಯಾನ, ಪ್ರಾಣಾಯಾಮ ಹಾಗೂ ಸಕಾರಾತ್ಮಕ ಚಿಂತನೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಪ್ರತಿನಿತ್ಯ ಯೋಗಾಭ್ಯಾಸಕ್ಕೆ ಸಮಯ ಮೀಸಲಿಟ್ಟು, ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.ವಲಯ ಮೇಲ್ವಿಚಾರಕಿ ಚಂದ್ರಕಲಾ ರೇಶ್ಮಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆಯುತ್ತಿರುವ ವಿವಿಧ ಜನಪರ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಶಿಕ್ಷಕರಾದ ಎ. ಎಂ ಕಂಬಾರ, ವಿನಾಯಕ ಬಕರೆ, ಎಸ್.ಬಿ. ರಡರಟ್ಟಿ, ಸೇವಾ ಪ್ರತಿನಿಧಿಗಳಾದ ಸಾವಿತ್ರಿ ಜೈನಾಪುರ, ಸುಧಾ ಜೈನಾಪುರ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್