LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಮಲೇಷ್ಯಾದಲ್ಲಿ 2 ಸೇನಾ ಹೆಲಿಕಾಪ್ಟರ್ ಗಳು ಢಿಕ್ಕಿಯಾದ ಪರಿಣಾಮ 10 ಮಂದಿ ದಾರುಣ ಸಾವು

ಕೌಲಾಲಂಪುರ,23: ಅಭ್ಯಾಸದ ವೇಳೆ 2 ಹೆಲಿಕಾಪ್ಟರ್ ಗಳು ಢಿಕಿಯಾದ ಪರಿಣಾಮ ಅದರೊಳಗಿದ್ದ 10 ಮಂದಿ ಸಾವಿಗೀಡಾಗಿರುವ ಘಟನೆ ಮಲೇಷ್ಯಾದಲ್ಲಿ ನಡೆದಿದೆ.

ಮುಂದಿನ ತಿಂಗಳು ನಡೆಯಲಿರುವ ಮಲೇಷ್ಯಾ ನೌಕಾಪಡೆಯ 90ನೇ ವಾರ್ಷಿಕೋತ್ಸವದ ಅಂಗವಾಗಿ ಹೆಲಿಕಾಪ್ಟರ್‌ಗಳು ನಾರ್ತ್ ಪೆರಾಕ್ ಸ್ಟೇಟ್‌ನ ನೌಕಾ ನೆಲೆಯಲ್ಲಿ ಕಸರತ್ತು ನಡೆಸುತ್ತಿದ್ದ ಸಂದರ್ಭದಲ್ಲಿ ದುರಂತ ಸಂಭವಿಸಿದೆ. ರಾಯಲ್ ಮಲೇಷ್ಯಾ ನೇವಿ ಹೆಲಿಕಾಪ್ಟರ್ ಗಳು ಪರಸ್ಪರ ಢಿಕ್ಕಿಯಾಗಿದ್ದು, ವೈಮಾನಿಕ ಕಸರತ್ತು ನಡೆಸುತ್ತಿದ್ದ ಎಲ್ಲ 10 ಸಿಬ್ಬಂದಿ ಮೃತಪಟ್ಟಿದ್ದಾರೆ.

ಅಂತೆಯೇ ಘಟನೆಗೆ ಸಂಬಂಧಿಸಿದಂತೆ ಮಲೇಷ್ಯಾ ತನಿಖೆಗೆ ಆದೇಶಿಸಿದ್ದು, ಮೃತರ ದೇಹಗಳನ್ನು ಮಲೇಷ್ಯಾ ನೌಕಾಪಡೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಲೇಷ್ಯಾದ ವಸತಿ ಮತ್ತು ಸ್ಥಳೀಯ ಸರ್ಕಾರದ ಸಚಿವಾಲಯದ ಪ್ರಕಾರ, ಎರಡು ಹೆಲಿಕಾಪ್ಟರ್‌ಗಳು ಯುರೋಕಾಪ್ಟರ್ AS555SN ಫೆನೆಕ್ ಮತ್ತು ಅಗಸ್ಟಾ-ವೆಸ್ಟ್‌ಲ್ಯಾಂಡ್ ಸಂಸ್ಥೆ ನಿರ್ಮಿಸಿದ AW-1 ಚಾಪರ್ ಮೇ ತಿಂಗಳಲ್ಲಿ ಬೇಸ್‌ನಲ್ಲಿ ನಿಗದಿಪಡಿಸಲಾದ TLDM ಫ್ಲೀಟ್ ಓಪನ್ ಡೇಗಾಗಿ ಫ್ಲೈಪಾಸ್ಟ್ ರಿಹರ್ಸಲ್‌ ಮಾಡುತ್ತಿದ್ದವು.

ಈ ವೇಳೆ ಹೆಲಿಕಾಪ್ಟರ್ ಗಳ ರೆಕ್ಕೆಗಳು ಪರಸ್ಪರ ಬಡಿದಿದ್ದು, ಈ ವೇಳೆ ಕಾಪ್ಟರ್ ಗಳನು ಪತನವಾಗಿದೆ ಎಂದು ಹೇಳಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ