Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದ ಗ್ರಾ.ಪಂಗಳಿಗೆ ಕೇಂದ್ರದ 10175 ಕೋಟಿ ರೂ ಅನುದಾನ ಬಾಕಿ: ನಾಸಿರ್ ಹುಸೇನ್

ಬಳ್ಳಾರಿ:ಫೆ,07..- 'ಕರ್ನಾಟಕ ರಾಜ್ಯದ 6 ಸಾವಿರ ಗ್ರಾಮ ಪಂಚಾಯ್ತಿ ಗಳಿಗೆ ಕೇಂದ್ರ ಸರ್ಕಾರ10175 ಕೋಟಿ ಅನುದಾನ ನೀಡಬೇಕಾಗಿರುವುದು ಬಾಕಿ ಯಿದ್ದು. ಕೂಡಲೇ ಬಿಡುಗಡೆ ಮಾಡಬೇಕು ಎಂದು ರಾಜ್ಯ ಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಆಗ್ರಹಿಸಿದ್ದಾರೆ.

ಅವರು ಮೊನ್ನೆ ಶೂನ್ಯ ವೇಳೆ ರಾಜ್ಯಸಭೆಯಲ್ಲಿ ಮಾತನಾಡಿ, 'ಹಣಕಾಸು ಆಯೋಗದ ಎಲ್ಲ ಅರ್ಹತೆಗಳನ್ನು ರಾಜ್ಯ ಸರ್ಕಾರ ಪೂರೈಸಿದ್ದರೂ,

15ನೇ ಹಣಕಾಸು ಆಯೋಗದ ಅಡಿಯಲ್ಲಿ 6000 ಗ್ರಾಮಗಳಿಗೆ 2133 ಕೋಟಿ ರು. ಅನುದಾನವನ್ನು ಕೇಂದ್ರ ಇನ್ನು ಬಿಡುಗಡೆ ಮಾಡಿಲ್ಲ. ಇದರಿಂದಾಗಿ ಮೂಲಸೌಕರ್ಯಗಳಿಗೆ ತಡೆಯಾಗುತ್ತಿದೆ ಎಂದಿದ್ದಾರೆ.

ಮೊದಲ ಹಂತದ 1,092 ಕೋಟಿಯ ಅನುದಾನವೂ ಬಿಡುಗಡೆ ಆಗಿಲ್ಲ. ನಿಧಿಗಳನ್ನು ನಿರಂತರವಾಗಿ ತಡೆಹಿಡಿಯುವುದು ನ್ಯಾಯಸಮ್ಮತವಲ್ಲದೆ, ಗ್ರಾಮೀಣ ಆಡಳಿತಕ್ಕೆ ತೀವ ಹಾನಿಯನ್ನು ಉಂಟುಮಾಡುತ್ತಿದೆ. ಇದರಿಂದ ಸ್ವಚ್ಛತಾ ಕಾರ್ಮಿಕರು ಸೇರಿದಂತೆ ಅಗತ್ಯ ಸಿಬ್ಬಂದಿಗಳ ವೇತನ ಪಾವತಿಸಲು ಪಂಚಾಯತಿಗಳಿಗೆ ಸಾಧ್ಯವಾಗುತ್ತಿಲ್ಲ. ಕುಡಿಯುವ ನೀರು ವ್ಯವಸ್ಥೆ, ಒಳಚರಂಡಿ, ಸ್ವಚ್ಛತೆ ಮತ್ತು ಬೀದಿ ದೀಪಗಳ ನಿರ್ವಹಣೆ ಸಮಪರ್ಕವಾಗಿ ಆಗುತ್ತಿಲ್ಲ. ಹಲವಾರು ಪಂಚಾಯತಿಗಳ ಖಾತೆಗಳಲ್ಲಿ ಮೂಲಭೂತ ವೆಚ್ಚಗಳನ್ನು ಸಹ ಭರಿಸಲು ಹಣವಿಲ್ಲದ ಸ್ಥಿತಿ ಉಂಟಾಗಿದೆ.

15ನೇ ಹಣಕಾಸು ಆಯೋಗವನ್ನು ವಿಶೇಷವಾಗಿ ಸ್ಥಳೀಯ ಸಂಸ್ಥೆಗಳನ್ನು ಬಲಪಡಿಸಲು ಮತ್ತು ಗ್ರಾಮ ಪಂಚಾಯತಿಗಳಿಗೆ ಅಗತ್ಯ ಸಂಪನ್ಮೂಲಗಳನ್ನು ಒದಗಿಸುವ ಉದ್ದೇಶದಿಂದ ನೇಮಿಸಲಾಗಿತ್ತು. ಇದಲ್ಲದೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕರ್ನಾಟಕಕ್ಕೆ 1,066 ಕೋಟಿಗಳು ಹಾಗೂ ಜಲ ಜೀವನ್ ಮಿಷನ್ ಯೋಜನೆಯ ಅಡಿಯಲ್ಲಿ 6,976 ಕೋಟಿಗಳು ಬಾಕಿಯಿದೆ.

ಆದ್ದರಿಂದ, 15 ನೇ ಹಣಕಾಸು ಆಯೋಗ ಮತ್ತು ಇತರ ಯೋಜನೆಗಳ ಅಡಿಯಲ್ಲಿ ಕರ್ನಾಟಕದ ಗ್ರಾಮ ಪಂಚಾಯಿತಿಗಳಿಗೆ ಬಾಕಿ ಇರುವ 10175 ಕೋಟಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ