Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಸ್ಪತ್ರೆಯಲ್ಲಿ  ನೌಕರಿ ಕೊಡಿಸುವುದಾಗಿ 110 ಜನರಿಗೆ ವಂಚನೆ

ಕಲಬುರಗಿ, ಆಗಸ್ಟ್​ 23: ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ  ಡಿ ದರ್ಜೆ ನೌಕರಿ ಕೊಡಿಸುವುದಾಗಿ ಹೇಳಿ ಬರೋಬ್ಬರಿ 110 ಜನರಿಂದ ಹಣ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಕಲಬುರಗಿಯಲ್ಲಿ ನಿರ್ಮಾಣವಾಗಿರುವ ಜಯದೇವ ಹೃದ್ರೋಗ ಆಸ್ಪತ್ರೆ ಸೆಪ್ಟೆಂಬರ್​​ನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಆಸ್ಪತ್ರೆಯಲ್ಲಿ ಡಿ ದರ್ಜೆಯ ನೌಕರಿ ಕೊಡಿಸುವುದಾಗಿ ಐವರು 110 ಜನರಿಂದ 70 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾರೆ.

ಕಿರಾಣಿ ಅಂಗಡಿ ವ್ಯಾಪಾರಿ ಸಂತೋಷ್, ರಾಜಶೇಖರ್ ಸೇರಿದಂತೆ ಐವರನ್ನು ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ. ಕಲಬುರಗಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಇನ್ನಷ್ಟು ಜನ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಯುತ್ತಿದೆ.

ಕಲಬುರಗಿ ಜಯದೇವ ಆಸ್ಪತ್ರೆ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಮುಗಿದಿದ್ದು, ಸೆಪ್ಟೆಂಬರ್​​ನಲ್ಲಿ ಉದ್ಘಾಟನೆಯಾಗಲಿದೆ. ಆಸ್ಪತ್ರೆಯಲ್ಲಿ ಈಗಾಗಲೆ ಚಿಕಿತ್ಸ ನೀಡಲಾಗುತ್ತಿದೆ. 371 ಹಾಸಿಗೆಗಳ ಆಸ್ಪತ್ರೆ ಇದೇ ವರ್ಷ ಫೆಬ್ರವರಿಯಲ್ಲಿ ತನ್ನ ತಾತ್ಕಾಲಿಕ ಕಾರ್ಯ ಆರಂಭಿಸಿದೆ. 371 ಹಾಸಿಗೆಗಳ ಆಸ್ಪತ್ರೆಯಲ್ಲಿ 100 ತೀವ್ರ ನಿಗಾ ಘಟಕದ ಹಾಸಿಗೆಗಳು, ಸಾಮಾನ್ಯ ವಾರ್ಡ್‌ಗಳಿಗೆ 250 ಹಾಸಿಗೆಗಳು ಮತ್ತು ವಿಶೇಷ ಮತ್ತು ಡೀಲಕ್ಸ್ ಕೋಣೆಗಳಿಗಾಗಿ 25 ಹಾಸಿಗೆಗಳು. ಇದು ಮೂರು ಆಪರೇಷನ್ ಥಿಯೇಟರ್‌ಗಳು ಮತ್ತು ಮೂರು ಕ್ಯಾಥ್ ಲ್ಯಾಬ್‌ಗಳನ್ನು ಹೊಂದಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ 180 ರೂ. ಕೋಟಿ ಮಂಜೂರು ಮಾಡಿದ್ದು, ಆಸ್ಪತ್ರೆಯನ್ನು ಸುಧಾರಿತ ಸಾಧನಗಳೊಂದಿಗೆ ಮೇಲ್ದರ್ಜೆಗೇರಿಸಲು 56 ಕೋಟಿ ರೂ. ವೆಚ್ಚವಾಗಿದೆ ಎಂದು ವರದಿಯಾಗಿದೆ.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*