Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

111 ನೇ ಕನ್ನಡ ಸಾಹಿತ್ಯ ಪರಿಷತ್ತ್ ಸಂಸ್ಥಾಪನಾ ದಿನಾಚರಣೆ



ಧಾರವಾಡ:  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಅಂಜುಮನ್ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆಯನ್ನು ಕರ್ನಾಟಕ ವಿಶ್ವವಿದ್ಯಾಲಯ ಕುಲಸಚಿವರಾದ (ಮೌಲ್ಯ ಮಾಪನ) ಡಾ. ನಿಜಲಿಂಗಪ್ಪ ಮಟ್ಟಿಹಾಳ ಅವರು ಸಸಿಗೆ ನೀರು ಹಾಕುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಅವರು ಮಾತನಾಡುತ್ತಾ, ಇಂದು 111ನೇ ಸಂಸ್ಥಾಪನ ದಿನಾಚರಣೆಯನ್ನು ಆಚರಿಸುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ.


ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಸಮಾಜದ ಬೇರೆ ಬೇರೆ ರಂಗಗಳಲ್ಲಿರುವ ಸಾಹಿತ್ಯಗಳನ್ನು ಗುರುತಿಸಿ ಅವರನ್ನು ಪ್ರಧಾನವಾಗಿ ತರುವ ಕೆಲಸ ಮಾಡಿದೆ. ಎಲ್ಲಾ ಅಧ್ಯಕ್ಷರುಗಳು ತಮ್ಮ ಮಿತಿಯಲ್ಲಿ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಸಮೃದ್ಧಗೊಳಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಬಂಡಾಯ ಲೇಖಕರಾದ ಡಾ. ಚಂದ್ರಶೇಖರ್ ಪಾಟೀಲ್ ಅವರು ಅಧಿಕಾರ ಶಾಹಿಯನ್ನು ಪ್ರತಿರೋಧಿಸಿ ಸಾಹಿತ್ಯ ಪರಿಷತ್ತನ್ನ ಬೆಳೆಸಿದ ಮಾದರಿ ನಮ್ಮ ಮುಂದಿದೆ. ಇಂದಿನ ಯುವತಲಿ ಮಾರಿನವರು ಇದನ್ನು ಮುಂದುವರೆಸಿಕೊಂಡು ಹೋಗಬೇಕಾದ ಅಗತ್ಯ ಇದೆ ಎಂದು ಮಾತನಾಡಿದರು. ಮುಖ್ಯ ಅತಿಥಿಗಳಾದ ಪ್ರೊ .ಶ್ಯಾಮಸುಂದರ ಬಿದರಗುಂದಿ ಅವರು ಮಾತನಾಡುತ್ತಾ- ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಒಗ್ಗಟ್ಟು ಮತ್ತು ಅಸ್ಮಿತಿಯ ಸಂಕೇತವಾಗಿದೆ. ನಾವೆಲ್ಲ ಒಂದಾಗಿ ಬಾಳಲು ನಮಗೆ ಸಾಹಿತ್ಯದ ಜ್ಞಾನ ಅಗತ್ಯವಾಗಿದೆ. ಇಂತಹ ಜ್ಞಾನ ನೀಡುವ ಸಂಸ್ಥೆಯಾಗಿ ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ  ಶ್ರಮಿಸುತ್ತಿದೆ. ಅಂತೆಯೇ ಧಾರವಾಡದಲ್ಲಿರುವ ವಿದ್ಯಾವರ್ಧಕ ಸಂಘವು ಕನ್ನಡ ನಾಡು ನುಡಿಯ ಪ್ರಸಾರಕ್ಕಾಗಿ ಕೆಲಸ ಮಾಡುತ್ತಿರುವುದನ್ನು ಕೊಂಡಾಡಿದರು.


 ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರನ್ನು ಒಂದುಗೂಡಿಸಿದ ಸಂಸ್ಥೆಯಾಗಿದೆ ಎಂದು ಸ್ಮರಿಸಿದರು. ಶ್ರೀಮತಿ ಸುನಂದಾ ನಿಂಬನಗೌಡರ ಹಾಗೂ ಸಂಗಡಿಗರು ಸಂಗೀತ ಕಾರ್ಯಕ್ರಮ ಪ್ರಸ್ತುತ ಪಡಿಸಿದರು. ಡಾ. ಲಿಂಗರಾಜ ಅಂಗಡಿ ಅಧ್ಯಕ್ಷತೆ ವಹಿಸಿ - ಇಂದಿನ ತಲೆಮಾರಿನ ಯುವಕರು ಕನ್ನಡ ಸಾಹಿತ್ಯ ಪರಿಷತ್ತಿನ  ಸದಸತ್ವವನ್ನು ಪಡೆದುಕೊಂಡು ಅದರ  ಬೆಳವಣಿಗೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಾಗುತ್ತದೆ ಎಂದು ಕಿವಿಮಾತು ಹೇಳಿದರು.


ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಐ. ಎ. ಮುಲ್ಲಾ ಹಾಗೂ ಡಾ. ಎನ್. ಬಿ. ನಾಲತವಾಡ ವೇದಿಕೆ ಮೇಲೆ ಉಪಸ್ಥಿತರಿದ್ದರು. ಡಾ. ಜಿನದತ್ತ ಹಡಗಲಿ ಸ್ವಾಗತಿಸಿದರು.‌ ಡಾ. ಮೇಟಿ ರುದ್ರೇಶ್ ನಿರೂಪಿಸಿದರು. ಕು. ಬಾನುಬಿ ವಂದಿಸಿದರು. ಇದೇ   ಸಂದರ್ಭದಲ್ಲಿ ಡಾ. ನಿಜಲಿಂಗಪ್ಪ ಮಟ್ಟಿಹಾಳ, ಡಾ.‌ ಶ್ಯಾಮಸುಂದರ ಬಿದರಕುಂದಿ ಹಾಗೂ ಶ್ರೀಮತಿ ಸುನಂದಾ ನಿಂಬನಗೌಡರ ಅವರನ್ನು ಸನ್ಮಾನಿಸಲಾಯಿತು.  ಪ್ರಾರಂಭದಲ್ಲಿ ಡಾ. ಅಬ್ದುಲ್ ಕರೀ ಆದೋನಿ -  ಖುರಾನ್ ಪಠಣ ಮಾಡಿದರು. ಶ್ವೇತಾ ವರಚಗಿ ಶ್ಲೋಕ ಪಠಣ ಹಾಗೂ ಶ್ರೀಮತಿ ಸುನಂದಾ ನಿಂಬನಗೌಡರ ನಾಡಗೀತೆ ಪ್ರಸ್ತುತ ಪಡಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ