LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಆಗಸ್ಟ್ 20 ರಂದು ದಿವಂಗತ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಸಮಾರಂಭ


ಬಳ್ಳಾರಿ,ಆ.18 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 20 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಸಮಾರಂಭ ಆಯೋಜಿಸಲಾಗಿದೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ (ಕಾವೇರಿ ಹ್ಯಾಂಡ್ ಲ್ಯೂಮ್ಸ್)ದ ಅಧ್ಯಕ್ಷರು ಹಾಗೂ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಸಂಡೂರು ಶಾಸಕರಾದ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಹಾಗೂ ವಿಶೇಷ ಆಹ್ವಾನಿತರಾಗಿ ಡಿ.ದೇವರಾಜ ಅರಸು ವೇದಿಕೆಯ ಜಿಲ್ಲಾಧ್ಯಕ್ಷ ಕಲ್ಲುಕಂಭ ಪಂಪಾಪತಿ ಸೇರಿದಂತೆ ಇನ್ನಿತರೆ ಗಣ್ಯರು ಪಾಲ್ಗೊಳ್ಳುವರು.
ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಆಲಂಭಾಷ ಅವರು, ದಿವಂಗತ ಡಿ.ದೇವರಾಜ ಅರಸು ಅವರ ಕುರಿತು ವಿಶೇಷ ಉಪನ್ಯಾಸ ನೀಡುವರು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಹಿಂದುಳಿದ ವರ್ಗಗಳ ವಿವಿಧ ಸಂಘ- ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ- ಸಿಬ್ಬಂದಿ ವರ್ಗ, ಸಾರ್ವಜನಿಕರು ಉಪಸ್ಥಿತರಿರುವರು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಎ.ಕೆ ಅವರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಬಿ.ನಾಗೇಂದ್ರ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಕರ್ನಾಟಕದ ಅವಿಭಾಜ್ಯ ಅಂಗ ಬೆಳಗಾವಿ : ಗೊತ್ತುವಳಿ  ಸ್ವೀಕಾರಕ್ಕೆ ಕಾಂಗ್ರೆಸ್ ಪಟ್ಟು; ಪಾಲಿಕೆ ಸಭೆಯಲ್ಲಿ ಗದ್ದಲದ ಕೋಲಾಹಲ. ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರಹ್ಲಾದ ಆಚಾರ್ಯ ಯಜುರ್ವೇದಿ ಅವರಿಗೆ ಪಿಎಚ್ ಡಿಭಾರತ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಮನಸ್ಸನ್ನ ನಿಗ್ರಹಿಸಿಕೊಂಡರೆ ಮಾದಕ ವ್ಯಸನಗಳಿಂದ ಮುಕ್ತಿ - ಕವಿಯತ್ರಿ ಅಂಜಲಿ ಬೆಳಗಲ್ಹೆಚ್ ಎಲ್ ಸಿ ಮತ್ತು ಎಲ್ ಎಲ್ ಸಿ ಕಾಲುವೆ ನೀರಿನ ಹರಿವು ಹೆಚ್ಚಿಸಲು ಮನವಿಬಾಲ್ಯ ವಿವಾಹ ಕಾನೂನುಬಾಹಿರ: ರೇಣುಕಾ ಜಡಗಣ್ಣನವರ್ಆಗಸ್ಟ್ 27 ರಂದು ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ಚಿತ್ರದುರ್ಗದಲ್ಲಿ ‘ನಿಧಿ ಆಪ್ಕೆ ನಿಕಟ್' ಕಾರ್ಯಕ್ರಮಆಗಸ್ಟ್ 20 ರಂದು ದಿವಂಗತ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಸಮಾರಂಭಬಳ್ಳಾರಿ: ಗಾಂಧಿನಗರದಲ್ಲಿ ಸ್ವಚ್ಛತಾ ಕಾರ್ಯದೊಂದಿಗೆ 80ನೇ ಸ್ವಾತಂತ್ರö್ಯ ದಿನಾಚರಣೆ