LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ರಾಯಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ನಡುವೆ ಡಿಕ್ಕಿ; 13 ಮಂದಿ ಸಾವು

ರಾಯಪುರ (ಛತ್ತೀಸ್‌ಗಢ): ಛತ್ತೀಸ್‌ಗಢದ ರಾಯಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಭೀಕರ ಅಪಘಾತ ಸಂಭವಿಸಿದ್ದು, 13 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

ರಾಯ್ಪುರ ಜಿಲ್ಲೆಯ ರಾಯ್ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ ನಾಲ್ಕು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಸಾವನ್ನಪ್ಪಿದ್ದಾರೆ.

ಚಟೌಡ್ ಗ್ರಾಮದ ಕುಟುಂಬವೊಂದು ಕುಟುಂಬದ ಸಮಾರಂಭದಲ್ಲಿ ಭಾಗವಹಿಸಲು ಬನ್ಸಾರಿ ಗ್ರಾಮಕ್ಕೆ ತೆರಳಿತ್ತು. ಕಾರ್ಯಕ್ರಮ ಮುಗಿಸಿ ವಾಪಸ್ ತಡರಾತ್ರಿ ಟ್ರಕ್​​ನಲ್ಲಿ ಹಿಂತಿರುಗುವಾಗ ಖರೋರಾ ಪೊಲೀಸ್ ಠಾಣೆ ಪ್ರದೇಶದ ಸರಗಾಂವ್ ಬಳಿ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಬಗ್ಗೆ ಮಾಹಿತಿ ಬಂದ ನಂತರ, ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು ಮತ್ತು ಗಾಯಾಳುಗಳನ್ನು ರಾಯ್ಪುರದ ಡಾ. ಭೀಮರಾವ್ ಅಂಬೇಡ್ಕರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಜಿಲ್ಲಾಡಳಿತದ ಅಧಿಕಾರಿಗಳು ಸಹ ಸ್ಥಳಕ್ಕೆ ಆಗಮಸಿದ್ದಾರೆ ಎಂದು ರಾಯ್ಪುರ ಜಿಲ್ಲಾಧಿಕಾರಿ ಗೌರವ್ ಸಿಂಗ್ ಹೇಳಿದರು.

ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತತಿದ್ದಾರೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ