Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಎಸ್ಎಸ್ ಮಹಿಳಾ ಘಟಕದ ವತಿಯಿಂದ 135ನೇ  ಅಂಬೇಡ್ಕರ್  ಜಯಂತಿ



 ಬಳ್ಳಾರಿ. ಏ. 16:  ರಾಜ್ಯಾಧ್ಯಕ್ಷ ಆರ್ ಗುರುಮೂರ್ತಿ ಇವರ ನೇತೃತ್ವದ ದಲಿತ ಸಂಘರ್ಷ ಸಮಿತಿ ಮಹಿಳಾ ಘಟಕದ ವತಿಯಿಂದ ಡಾ. ಬಿಆರ್ ಅಂಬೇಡ್ಕರ್ ಅವರ 135 ನೇ ಜಯಂತಿಯನ್ನು ಆಚರಿಸಲಾಯಿತು.

 ರಾಜ್ಯ  ಮಹಿಳಾ ಘಟಕದ ಅಧ್ಯಕ್ಷರಾದ ಎಂ  ಶಾಂತ ಇವರ ನೇತೃತ್ವದಲ್ಲಿ ಮೋತಿ ಸರ್ಕಲ್ ಸಮೀಪದ ಏಳು  ಮಕ್ಕಳ ತಾಯಮ್ಮ ದೇವಸ್ಥಾನದಿಂದ  ಮಹಿಳಾ ಸಂಘದವರೆಲ್ಲರೂ  ಪಾದಯಾತ್ರೆಯ ಮೂಲಕ ಫಸ್ಟ್ ಗೇಟ್ ಹತ್ತಿರದ ಅಂಬೇಡ್ಕರ್ ಭವನದಲ್ಲಿನ ಭಾರತ ರತ್ನ  ಬಾಬಾ ಸಾಹೇಬ್ ಡಾ. ಬಿ ಆರ್  ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಎಮ್ ಶಾಂತ, ಬಾಬಾ ಸಾಹೇಬ್ ಅಂಬೇಡ್ಕರ್ ರಚಿತಾ ಸಂವಿಧಾನದಿಂದ ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಭಾಗವಹಿಸಿ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.  ಪ್ರತಿಮೆಯ ಮುಂಭಾಗದಲ್ಲಿ  ಪಿ. ಯು. ಸಿ. 2ನೇ ವರ್ಷದಲ್ಲಿ ಅತಿ ಹೆಚ್ಚಿನ ಶ್ರೇಣಿಯಲ್ಲಿ ಅಂಕ ಗಳಿಸಿದ ವಿದ್ಯಾರ್ಥಿ  ವಿದ್ಯಾರ್ಥಿನಿಯರಿಗೆ ಶ್ಯಾಲು ಹೊದಿಸಿ ಸನ್ಮಾನಿಸಿ  ಬಹುಮಾನ ವಿತರಿಸಲಾಯಿತು.


ಈ ಸಂದರ್ಭದಲ್ಲಿ ರಾಜ್ಯದ ಮಹಿಳಾ ಕಾರ್ಯದರ್ಶಿ  ದ್ರಾಕ್ಷಾಯಿನಿ, ಸೀತಮ್ಮ,,  ಭಾಗ್ಯಮ್ಮ :ಜಿಲ್ಲಾ ಘಟಕದ ಅಧ್ಯಕ್ಷರಾದ ಎಂಪಿ ಕಮಲ,   ಜಿಲ್ಲಾ ಉಪಾಧ್ಯಕ್ಷರಾದ   ಉಮಾ, ಮಂಜುಳಾ  :ಜಿಲ್ಲಾ ಕಾರ್ಯದರ್ಶಿ  ಉಮಾ ಆರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ  ಸುಜಾತ , ಮತ್ತು  ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾದ  ಮೀನಾಕ್ಷಿ  ಪ್ರಧಾನ ಕಾರ್ಯದರ್ಶಿ   ವನ್ನೂರಮ್ಮ  ಕಾರ್ಯದರ್ಶಿ  ಲಕ್ಷ್ಮಿ   ದುರುಗಮ್ಮ, ಉಪಾಧ್ಯಕ್ಷರಾದ   ರೇಣುಕಮ್ಮ  ಕಾರ್ಯದರ್ಶಿ   ವಸಂತ ಸೇರಿದಂತೆ ಇನ್ನೂ ಹಲವಾರು ಜನ ಡಿಎಸ್ಎಸ್ ಮಹಿಳಾ ಕಾರ್ಯಕರ್ತರು ಇದ್ದರು. ಕಾರ್ಯಕ್ರಮಕ್ಕೆ ಪ್ರತ್ಯಕ್ಷವಾಗಿ ಮತ್ತು  ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ  ನಿವೃತ್ತ ಶಿಕ್ಷಕರು ಹಾಗೂ ಜಿಲ್ಲಾ ಕಾರ್ಯದರ್ಶಿ ಪಿ ಅಂಜಿನಪ್ಪ  ವಂದನೆಗಳನ್ನು ಸಲ್ಲಿಸಿದರು.

ನಂತರ ಕಾರ್ಯಮದಲ್ಲಿ ನೆರದವರಿಗೆ  ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ