LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Dharwad

13.78 ಲಕ್ಷ ಮತದಾರರು; ಪುರುಷರಿಗಿಂತ ಮಹಿಳೆಯರೇ ಹೆಚ್ಚು: ಜಿಲ್ಲಾಧಿಕಾರಿ ಸ್ನೇಹಲ್. ಆರ್.

ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

ಧಾರವಾಡ :ಜಿಲ್ಲೆಯ ಏಳು ವಿಧಾನಸಭಾ ಮತಕ್ಷೇತ್ರವಾರು ಅಂತಿಮ ಮತದಾರರ ಪಟ್ಟಿಯಲ್ಲಿ 13,78,016 ಮತದಾರರು ಇದ್ದು, ಪುರುಷರು 687019, ಮಹಿಳೆಯರು 690931, ಇತರೆ 66 ಮತದಾರರು ಇದ್ದಾರೆ ಎಂದು ಚುನಾವಣಾಧಿಕಾರಿಯಾದ ಸ್ನೇಹಲ್. ಆರ್., ಅವರು ಹೇಳಿದರು. ಕೃಷಿ ವಿಶ್ವವಿದ್ಯಾಲಯದ ಮಾಧ್ಯಮ ಕೊಠಡಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕುರಿತು ಪತ್ರಿಕಾಗೋಷ್ಠಿ ಜರುಗಿಸಿ, ಮಾತನಾಡಿದರು. ಕರಡು ಮತದಾರರ ಪಟ್ಟಿಯ ಪ್ರಕಾರ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ 1,95,790 ಮತದಾರರು. ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ 1,79,005 ಮತದಾರರು. ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ 1,97,127 ಮತದಾರರು. ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ 1,85,022 ಮತದಾರರು. ಹುಬ್ಬಳ್ಳಿ-ಧಾರವಾಡ ಕೇಂದ್ರದಲ್ಲಿ 2,08,805 ಮತದಾರರು. ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ 2,22,477 ಮತದಾರರು. ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ 1,89,790 ಮತದಾರರು ಸೇರಿ ಒಟ್ಟು 13,78,016 ಮತದಾರರಿದ್ದಾರೆ ಎಂದು ಹೇಳಿದರು.
ಜಿಲ್ಲೆಯ ಏಳು ವಿಧಾನಸಭಾ ಮತಕ್ಷೇತ್ರವಾರು ಅಂತಿಮ ಮತದಾರರ ಪಟ್ಟಿಯಲ್ಲಿ 13,78,016 ಮತದಾರರು ಇದ್ದು, ಅದರಲ್ಲಿ ಪುರುಷರು 6,87,019 ಹಾಗೂ ಮಹಿಳೆಯರು 6,90,931 ಇತರೆ 66 ಮತದಾರರು ಇದ್ದಾರೆ ಎಂದು ಚುನಾವಣಾಧಿಕಾರಿಯಾದ ಸ್ನೇಹಲ್. ಆರ್ ಅವರು ತಿಳಿಸಿದರು.
ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಕರಡು ಮತದಾರರ ಪಟ್ಟಿಯಲ್ಲಿನ ವಿವರಗಳ ಪರಿಶೀಲನೆಗಾಗಿ ಒಟ್ಟು 47,937 ಮತದಾರರಿಗೆ ನೋಟಿಸ್ ನೀಡಲಾಗಿತ್ತು. ಇದರಲ್ಲಿ 47,978 ನೋಟಿಸ್‍ಗಳನ್ನು ವಿತರಿಸಲಾಗಿದ್ದು, 47,978 ವಿಚಾರಣೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ನವಲಗುಂದ, ಕುಂದಗೋಳ, ಧಾರವಾಡ, ಹುಬ್ಬಳ್ಳಿ-ಧಾರವಾಡ ಪೂರ್ವ, ಹುಬ್ಬಳ್ಳಿ-ಧಾರವಾಡ ಕೇಂದ್ರ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಹಾಗೂ ಕಲಘಟಗಿ ವಿಧಾನಸಭಾ ಕ್ಷೇತ್ರಗಳಲ್ಲಿ ವರದಿಯ ಪ್ರಕಾರ ಒಟ್ಟು 14,214 ಮತದಾರರ ವಿವರಗಳನ್ನು ಪರಿಶೀಲಿಸಲಾಗಿದ್ದು, 49 ಮತದಾರರು ಅನರ್ಹರೆಂದು ಗುರುತಿಸಲಾಗಿದೆ.
1,797 ಪ್ರಕರಣಗಳು ಅಂತಿಮ ಪ್ರಕಟಣೆಗಾಗಿ ಬಾಕಿ ಉಳಿದಿವೆ. ವಿಚಾರಣೆ ಪೂರ್ಣಗೊಂಡ ನಂತರದ ಪ್ರಕ್ರಿಯೆಯಲ್ಲಿ 43,064 ಪ್ರಕರಣಗಳನ್ನು ಅಂತಿಮ ಪ್ರಕಟಣೆಗಾಗಿ ಕಾಯ್ದಿರಿಸಲಾಗಿದೆ. ವಿಚಾರಣೆ ಇಲ್ಲದೆ ಅಂತಿಮ ಪ್ರಕಟಣೆಗಾಗಿ 3,118 ಪ್ರಕರಣಗಳನ್ನು ಕಾಯ್ದಿರಿಸಲಾಗಿದೆ.
ಜಿಲ್ಲೆಯ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 13,53,946 ಮತದಾರರಿದ್ದು, ವರದಿಯ ಪ್ರಕಾರ 13,05,967 ಮತದಾರರ ಪ್ರಕರಣಗಳನ್ನು ಅಂತಿಮ ಪ್ರಕಟಣೆಗೆ ಸಂಬಂಧಿಸಿದಂತೆ ದಾಖಲಿಸಲಾಗಿದೆ.
ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಅಕ್ಟೋಬರ್ 27 ರಂದು ಅಂತಿಮ ಮತದಾರರ ಪಟ್ಟಿಯನ್ನು ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗುತ್ತಿದೆ.  
ಜಿಲ್ಲೆಯಲ್ಲಿ 15,151 ಯುವ ಮತದಾರರು: ಜಿಲ್ಲೆಯಲ್ಲಿ ಒಟ್ಟು 15,151 ಯುವ ಮತದಾರರಿದ್ದು, ಅದರಲ್ಲಿ 8,321 ಪುರುಷರು ಹಾಗೂ 6,830 ಮಹಿಳೆಯರಿದ್ದಾರೆ. ನವಲಗುಂದದಲ್ಲಿ 2,024 ಮತದಾರರು, ಕುಂದಗೋಳದಲ್ಲಿ 1,638 ಮತದಾರರು, ಧಾರವಾಡದಲ್ಲಿ 2,343 ಮತದಾರರು, ಹುಬ್ಬಳ್ಳಿ-ಧಾರವಾಡ ಪೂರ್ವದಲ್ಲಿ 2,312 ಮತದಾರರು, ಕೇಂದ್ರದಲ್ಲಿ 2,062 ಮತದಾರರು, ಪಶ್ಚಿಮದಲ್ಲಿ 2,261 ಮತದಾರರು ಹಾಗೂ ಕಲಘಟಗಿಯಲ್ಲಿ 2,511 ಯುವ ಮತದಾರರಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 63 ಅನಿವಾಸಿ ಭಾರತೀಯ (ಎನ್‍ಆರ್‍ಐ) ಮತದಾರರು ನೋಂದಣಿಯಾಗಿದ್ದು, ಅವರಲ್ಲಿ 44 ಪುರುಷರು ಹಾಗೂ 19 ಮಹಿಳೆಯರಿದ್ದಾರೆ. ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಲ್ಲಿ 39, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ 13, ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದಲ್ಲಿ 9 ಹಾಗೂ ಧಾರವಾಡ ಕ್ಷೇತ್ರದಲ್ಲಿ 2 ಅನಿವಾಸಿ ಭಾರತೀಯ ಮತದಾರರಿದ್ದಾರೆ. ನವಲಗುಂದ, ಕುಂದಗೋಳ ಹಾಗೂ ಕಲಘಟಗಿ ಕ್ಷೇತ್ರಗಳಲ್ಲಿ ಅನಿವಾಸಿ ಭಾರತೀಯ ಮತದಾರರು ನೋಂದಣಿಯಾಗಿಲ್ಲ ಎಂದು ಅವರು ತಿಳಿಸಿದರು.
ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 13,78,016 ಮತದಾರರಲ್ಲಿ ಪುರುಷರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗಿದೆ. ಜಿಲ್ಲೆಯಲ್ಲಿ 6,87,019 ಪುರುಷ ಮತದಾರರು, 6,90,931 ಮಹಿಳಾ ಮತದಾರರು ಹಾಗೂ 66 ಇತರೆ ಮತದಾರರು ಇದ್ದಾರೆ. ಒಟ್ಟು ಮಹಿಳಾ ಮತ್ತು ಇತರೆ ಮತದಾರರ ಸಂಖ್ಯೆ 6,90,997 ಆಗಿದ್ದು, ಲಿಂಗಾನುಪಾತವು ಪ್ರತಿ 1,000 ಪುರುಷ ಮತದಾರರಿಗೆ 1,006 ಮಹಿಳಾ ಮತ್ತು ಇತರೆ ಮತದಾರರಷ್ಟಿದೆ ಎಂದು ಅವರು ಹೇಳಿದರು.
ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ 30,375 ಮತದಾರರನ್ನು ಸೇರ್ಪಡೆಗೊಳಿಸಲಾಗಿದ್ದು, 6,305 ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. 30,726 ಮತದಾರರ ವಿವರಗಳಲ್ಲಿ ತಿದ್ದುಪಡಿ ಮಾಡಲಾಗಿದೆ. ಒಟ್ಟಾರೆ 24,070 ಮತದಾರರ ನಿವ್ವಳ ಹೆಚ್ಚಳವಾಗಿದೆ ಎಂದು ತಿಳಿಸಿದರು. 
ಪಟ್ಟಿಯಿಂದ ಹೆಸರು ತೆಗೆದುಹಾಕಲು ಪ್ರಮುಖ ಕಾರಣಗಳು: 4,494 ಶಾಶ್ವತವಾಗಿ ಸ್ಥಳಾಂತರಗೊಂಡವರು, 1,787 ಮತದಾರರು ಇತರೆ ಕಾರಣಗಳಿಂದ, 14 ಮತದಾರರು ಈಗಾಗಲೇ ಬೇರೆಡೆ ನೋಂದಾಯಿಸಿಕೊಂಡವರು, 9 ಮತದಾರರು ಮೃತಪಟ್ಟವರು, 1 ಗೈರು ಹಾಜರಾದವರಾಗಿದ್ದಾರೆ. 
ಅಂತಿಮ ಮತದಾರರ ಪಟ್ಟಿಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳ ವೆಬ್‍ಸೈಟ್, ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಗಳು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗುವುದು. ಅಲ್ಲದೆ, ಮುಖ್ಯ ಚುನಾವಣಾಧಿಕಾರಿಗಳು, ಬೆಂಗಳೂರು ಅವರ ವೆಬ್‍ಸೈಟ್‍ನಲ್ಲಿಯೂ ಪಟ್ಟಿಗಳನ್ನು ಲಭ್ಯವಿರುತ್ತದೆ ಎಂದು ತಿಳಿಸಿದರು. 
ಜಿಲ್ಲೆಯ ಏಳು ವಿಧಾನಸಭಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ, ಜಿಲ್ಲಾ  ಚುನಾವಣಾಧಿಕಾರಿಗಳು https:dharwad.inc.in/en/elections/, ಮತದಾರರ ನೊಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಗಳು ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಸಿದ್ಧಿ ಪಡಿಸಲಾಗಿರುತ್ತದೆ. ಹಾಗೂ ಸಾರ್ವಜನಿಕರು, ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಲು  https://voters.eci.gov.in/download-eroll?stateCode=S10 ನಲ್ಲಿ ಪರಿಶೀಲಿಸಿಕೊಳ್ಳಬಹುದು ಎಂದು ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅಪರಜಿಲ್ಲಾಧಿಕಾರಿ ಗೀತಾ ಸಿ. ಡಿ ಅವರು ಉಪಸ್ಥಿತರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST