LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮುಂಬೈ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್​ ಟೈಗರ್ ಮೆಮನ್​ನ 14 ಆಸ್ತಿ ಕೇಂದ್ರ ಸರ್ಕಾರಕ್ಕೆ ಹಸ್ತಾಂತರ


ಮುಂಬೈ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಟೈಗರ್ ಮೆಮನ್ ಮತ್ತು ಆತನ ಕುಟುಂಬಕ್ಕೆ ಸೇರಿದ 14 ಆಸ್ತಿಗಳನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸುವಂತೆ ಮುಂಬೈನ ವಿಶೇಷ ನ್ಯಾಯಾಲಯ ಆದೇಶಿಸಿದೆ. ಟಾಡಾ (ಭಯೋತ್ಪಾದಕ ಮತ್ತು ವಿಧ್ವಂಸಕ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ನ್ಯಾಯಾಲಯದ ಆದೇಶದ ಮೇರೆಗೆ ಈ ಆಸ್ತಿಗಳು 1994 ರಿಂದ ಬಾಂಬೆ ಹೈಕೋರ್ಟ್​ನ ರಿಸೀವರ್ ವಶದಲ್ಲಿದ್ದವು.


ಈ 14 ಆಸ್ತಿಗಳಲ್ಲಿ ಬಾಂದ್ರಾ (ಪಶ್ಚಿಮ)ದ ಕಟ್ಟಡವೊಂದರಲ್ಲಿರುವ ಫ್ಲಾಟ್, ಮಾಹಿಮ್​ನಲ್ಲಿರುವ ಕಚೇರಿ ಕಟ್ಟಡ, ಮಾಹಿಮ್​ನಲ್ಲಿ ಖಾಲಿ ನಿವೇಶನ, ಸಾಂತಾಕ್ರೂಜ್ (ಪೂರ್ವ) ನಲ್ಲಿರುವ ಖಾಲಿ ನಿವೇಶನ ಮತ್ತು ಫ್ಲಾಟ್, ಕುರ್ಲಾದ ಕಟ್ಟಡವೊಂದರಲ್ಲಿನ ಎರಡು ಫ್ಲಾಟ್​ಗಳು, ಮೊಹಮ್ಮದ್ ಅಲಿ ರಸ್ತೆಯಲ್ಲಿರುವ ಕಚೇರಿ, ಡೊಂಗ್ರಿಯಲ್ಲಿನ ಒಂದು ಅಂಗಡಿ ಮತ್ತು ನಿವೇಶನ, ಮನೀಶ್ ಮಾರ್ಕೆಟ್​ನಲ್ಲಿನ ಮೂರು ಅಂಗಡಿಗಳು ಮತ್ತು ಶೇಖ್ ಮೆಮನ್ ಸ್ಟ್ರೀಟ್​ನಲ್ಲಿರುವ ಕಟ್ಟಡ ಸೇರಿವೆ.


1993ರ ಮಾರ್ಚ್ 12ರಂದು ಮುಂಬೈನ ವಿವಿಧ ಭಾಗಗಳಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 257 ಮಂದಿ ಮೃತಪಟ್ಟು, 700ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಕೇಂದ್ರ ತನಿಖಾ ದಳ (ಸಿಬಿಐ) ಈ ಸ್ಫೋಟ ಪ್ರಕರಣದ ತನಿಖೆ ನಡೆಸಿತ್ತು.


ಕಳೆದ ವಾರ ಮಾರ್ಚ್ 26 ರಂದು ಹೊರಡಿಸಿದ ಆದೇಶದಲ್ಲಿ, ವಿಶೇಷ ಟಾಡಾ ನ್ಯಾಯಾಲಯದ ನ್ಯಾಯಾಧೀಶ ವಿ.ಡಿ.ಕೇದಾರ್ ಅವರು "ಸ್ಥಿರಾಸ್ತಿಗಳ ಸ್ವಾಧೀನವನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸುವ ಅಗತ್ಯವಿದೆ" ಎಂದು ಹೇಳಿದ್ದರು. ಕೇಂದ್ರ ಸರ್ಕಾರವು ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳು ಋಣಭಾರಗಳಿಂದ ಮುಕ್ತವಾಗಿವೆ ಮತ್ತು ಕೇಂದ್ರ ಸರ್ಕಾರವು ಸಕ್ಷಮ ಪ್ರಾಧಿಕಾರದ ಮೂಲಕ ಆ 14 ಸ್ಥಿರಾಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಅರ್ಹವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.








Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡ