LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯದಲ್ಲಿ ದಾಖಲೆಯ 143 ಮಿಲಿಯನ್ ಯೂನಿಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ

 

- ರಾಜ್ಯದ ನವೀಕರಿಸಬಹುದಾದ ಇಂಧನದ ಪಾಲು ಶೇ.75-ಶೇ.85

- ಉಷ್ಣ, ಜಲ ವಿದ್ಯುತ್‌ನಂಥ ಸಾಂಪ್ರದಾಯಿಕ ಇಂಧನ ಅವಲಂಬನೆ ಕಡಿತ

ಬೆಂಗಳೂರು, ಆ, 19, 2025: ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲು ಪ್ರಸ್ತುತ ಶೇ.75 ರಿಂದ ಶೇ.85ಕ್ಕೆ ಏರಿದ್ದು, ಆಗಸ್ಟ್‌ 18ರಂದು ನವೀಕರಿಸಬಹುದಾದದ ಇಂಧನ ಮೂಲಗಳಿಂದ 143 ಮಿಲಿಯನ್‌ ಯೂನಿಟ್‌ ವಿದ್ಯುತ್‌ ಉತ್ಪಾದನೆಯಾಗುವ ಮೂಲಕ ಹೊಸ ದಾಖಲೆ ಬರೆಯಲಾಗಿದೆ.

ಇತ್ತೀಚಿನ ದಿನಗಳಲ್ಲಿ ಉಷ್ಣ, ಜಲ ವಿದ್ಯುತ್‌ನಂಥ ಸಾಂಪ್ರದಾಯಿಕ ಇಂಧನದ ಅವಲಂಬನೆ ಕಡಿತಗೊಂಡಿದ್ದು, ನವೀಕರಿಸಬಹುದಾದದ ಇಂಧನ ಮೂಲಗಳಿಂದ ಆಗಸ್ಟ್‌ 18ರಂದು 143 ಮಿಲಿಯನ್‌ ಯೂನಿಟ್‌ ವಿದ್ಯುತ್‌ ಉತ್ಪಾನೆಯಿಂದಾಗಿ ಗ್ರಿಡ್‌ಗೆ ಶೇ.80ರಷ್ಟು ಹಸಿರು ಇಂಧನ ಪೂರೈಕೆಯಾಗಿದೆ. ಇದು ನವೀಕರಿಸಬಹುದಾದ ಇಂಧನ ಮೂಲಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರಾಮುಖ್ಯತೆಗೆ ಸಾಕ್ಷಿಯಾಗಿದೆ.

ನವೀಕರಿಸಬಹುದಾದ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದನೆ ಸಾಕಷ್ಟು ಹೆಚ್ಚಾಗಿದೆ. ಬೇಡಿಕೆಯ ಶೇ.75ರಿಂದ ಶೇ.85 ರಷ್ಚು ವಿದ್ಯುತ್ ಈ ಮೂಲಗಳಿಂದಲೇ ಉತ್ಪಾದನೆಯಾಗುತ್ತಿದೆ. ಅದರಲ್ಲೂ, ಪವನ ವಿದ್ಯುತ್ ಉತ್ಪಾದನೆ ಗಣನೀಯವಾಗಿ ಹೆಚ್ಚಳ ಕಂಡಿದ್ದು, ಪ್ರಸ್ತುತ ದಿನಕ್ಕೆ ಸರಾಸರಿ 54 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

ನವೀಕರಿಸಬಹುದಾದ ಇಂಧನ ಮೂಲಗಳಿಗೆ ಆದ್ಯತೆ ನೀಡುವ ರಾಜ್ಯ ಸರ್ಕಾರದ ಕಾರ್ಯತಂತ್ರದಿಂದಾಗಿ ಈ ಬೆಳವಣಿಗೆ ಸಾಧ್ಯವಾಗಿದೆ. ಇತರೆ ರಾಜ್ಯಗಳೂ ಹಸಿರು ಇಂಧನ ಪರಿವರ್ತನೆಗೆ ಮುಂದಡಿ ಇಡಲು ಈ ಉಪಕ್ರಮ ಮಾದರಿಯಾಗಿದೆ. ಇದಲ್ಲದೆ, ನವೀಕರಿಸಬಹುದಾದ ಇಂಧನ ಮೂಲಗಳ ವಿದ್ಯುತ್ ಕಡಿಮೆ ದರಕ್ಕೆ ದೊರೆಯುವುದರಿಂದ ಸರ್ಕಾರದ ಮೇಲಿನ ಹೊರೆಯೂ ಕಡಿಮೆಯಾಗುವಂತಾಗಿದೆ.

ಪವನ ವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ: ಪ್ರಸ್ತುತ ವರ್ಷ ಪವನ ವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ಬರೆಯಲಾಗಿದೆ. ಮುಂಗಾರು ಆರಂಭವಾದ ಮೇಲೆ ಪ್ರತಿನಿತ್ಯ ಸರಾಸರಿ 50 ಮಿಲಿಯನ್ ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಈ ಮೂಲಗಳಿಂದ ಉತ್ಪಾದನೆಯಾಗಿದೆ. ಪ್ರಸ್ತುತ 65.80 ಮಿಲಿಯನ್ ಯೂನಿಟ್ ಪವನ ವಿದ್ಯುತ್ ಉತ್ಪಾದನೆಯಾಗುತ್ತಿದೆ.

ಸಾಂಪ್ರದಾಯಿಕ ಇಂಧನ ಅವಲಂಬನೆ ಕಡಿತ: ಇದರಿಂದಾಗಿ ಜಲ ವಿದ್ಯುತ್ ಮತ್ತು ಉಷ್ಣ ವಿದ್ಯುತ್ ಮೇಲಿನ ಅವಲಂಬನೆ ಕಡಿಮೆಯಾಗಿದೆ. ರಾಜ್ಯದ ಒಟ್ಟಾರೆ ವಿದ್ಯುತ್‌ ಉತ್ಪಾದನೆಯಲ್ಲಿಉಷ್ಣ ವಿದ್ಯುತ್‌ ಪಾಲು ಶೇ.15-ಶೇ.25.

ಇಳಿಕೆಯಾದ ವಿದ್ಯುತ್‌ ಬೇಡಿಕೆ: ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿದ್ಯುತ್ ಬಳಕೆ ಪ್ರಮಾಣ ನಿರೀಕ್ಷೆಗೂ ಮೀರಿ ಇಳಿಮುಖವಾಗಿದ್ದು, ಪ್ರಸ್ತುತ ರಾಜ್ಯದಲ್ಲಿ ವಿದ್ಯುತ್ ಬಳಕೆ 179.03 ದಶಲಕ್ಷ ಯೂನಿಟ್ (ಮಿಲಿಯನ್ ಯೂನಿಟ್ )ಗೆ ಇಳಿಕೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ರಾಜ್ಯದ ವಿದ್ಯುತ್ ಬಳಕೆ 200.35 ಮಿಲಿಯನ್ ಯೂನಿಟ್‌ ಇತ್ತು. ಈ ವರ್ಷ ಸರಾಸರಿ ವಿದ್ಯುತ್ ಬಳಕೆ ಪ್ರಮಾಣ ಹಿಂದಿನ ವರ್ಷಕ್ಕಿಂತ ಶೇ. 15ರಿಂದ 15ರಷ್ಟು ಹೆಚ್ಚಿದ್ದರೂ ಪ್ರಸ್ತುತ 21 ದಶಲಕ್ಷ ಯೂನಿಟ್‌ಗಳಷ್ಟು ಕಡಿಮೆ ವಿದ್ಯುತ್ ಬಳಕೆಯಾಗುತ್ತಿದೆ.

ರಾಜ್ಯದಲ್ಲಿ ಜನವರಿ ಅಂತ್ಯದ ವೇಳೆಗೆ ವಿದ್ಯುತ್ ಬೇಡಿಕೆ ಹೆಚ್ಚಾಗಲು ಆರಂಭವಾಯಿತು. ಬೇಸಿಗೆಯಲ್ಲಿ ದೈನಂದಿನ ಬಳಕೆ 350 ಮಿಲಿಯನ್ ಯೂನಿಟ್‌ಗಳನ್ನು ಮೀರುವ ನಿರೀಕ್ಷೆಯಿತ್ತಾದರೂ ಮುಂಗಾರು ಪೂರ್ವ ಮಳೆಯಿಂದ ಬೇಡಿಕೆ 320–330 ಮಿಲಿಯನ್ ಯೂನಿಟ್‌ಗಳ ವ್ಯಾಪ್ತಿಯಲ್ಲಿಯೇ ಇತ್ತು. ಮೇ 16–17ರ ಸುಮಾರಿಗೆ ಪೂರ್ವ ಮುಂಗಾರು ಮಳೆ ಮತ್ತು ನಿಗದಿಗಿಂತ ಮುನ್ನ ಮುಂಗಾರು ಪ್ರವೇಶಿಸಿದ್ದರಿಂದ ವಿದ್ಯುತ್ ಬೇಡಿಕೆ ಕಡಿಮೆಯಾಗಿ ದಿನಕ್ಕೆ 230–240 ಮಿಲಿಯನ್ ಯೂನಿಟ್‌ಗಳಿಗೆ ಇಳಿಯಿತು. ಇದೀಗ ಕನಿಷ್ಟ ಮಟ್ಟಕ್ಕೆ ಬಂದಿದೆ.

ವಿದ್ಯುತ್ ಬೇಡಿಕೆ ಕಡಿಮೆಯಾಗುವುದರ ಜತೆಗೆ ಪವನ ಮತ್ತು ಸೌರ ವಿದ್ಯುತ್ ಉತ್ಪಾದನೆ ಹೆಚ್ಚಿದ್ದರಿಂದ ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳಿಂದ ಖರೀದಿಸುತ್ತಿದ್ದ ವಿದ್ಯುತ್ ಪ್ರಮಾಣವೂ ಕುಸಿದಿದೆ. ಇದರಿಂದಾಗಿ ವಿದ್ಯುತ್ ಖರೀದಿಗೆ ಸರ್ಕಾರ ಮಾಡುವ ವೆಚ್ಚವೂ ಇಳಿಮುಖವಾಗಿದೆ."ನವೀಕರಿಸಬಹುದಾದ ಇಂಧನ ಮೂಲಗಳಿಂದ ಕಡಿಮೆ ವೆಚ್ಚದಲ್ಲಿ ವಿದ್ಯುತ್ ಉತ್ಪಾದಿಸಲು ಸಾಧ್ಯವಾಗುತ್ತದೆ. ಇದರಿಂದ ಸರ್ಕಾರದ ಮೇಲಿನ ಹೊರೆ ಕಡಿಮೆಯಾಗುತ್ತದೆ ಎಂಬ ಕಾರಣಕ್ಕೆ ಸರ್ಕಾರ ಈ ಮೂಲಗಳಿಗೆ ಆದ್ಯತೆ ನೀಡುತ್ತಿದೆ. ಇದರಿಂದ ಜಲ ಮತ್ತು ಉಷ್ಣ ವಿದ್ಯುತ್ ಸ್ಥಾವರಗಳ ಮೇಲಿನ ಹೊರೆ ಕಡಿಮೆಯಾಗಿ ಬೇಸಿಗೆಯಲ್ಲಿ ಈ ಮೂಲಗಳಿಂದ ಹೆಚ್ಚು ವಿದ್ಯುತ್ ಉತ್ಪಾದಿಸಿ ಬೇಡಿಕೆಗೆ ತಕ್ಕಂತೆ ಪೂರೈಸಲು ಅನುಕೂಲವಾಗುತ್ತದೆ," ಎಂದು  ಇಂಧನ ಸಚಿವ  ಕೆ.ಜೆ.ಜಾರ್ಜ್, ಹೇಳಿದ್ದಾರೆ.

"ಕರ್ನಾಟಕವು ಹಲವಾರು ಉಪಕ್ರಮಗಳ ಮೂಲಕ, ವಿಶೇಷವಾಗಿ ಸೌರ ವಿದ್ಯುತ್ ಪಾರ್ಕ್, ಪವನ ವಿದ್ಯುತ್ ಯೋಜನೆಗಳ ಮೂಲ ನವೀಕರಿಸಬಹುದಾದ ಇಂಧನ ಸಾಮರ್ಥ್ಯಗಳನ್ನು ಹೆಚ್ಚಿಸುತ್ತಿದೆ. ನವೀಕರಿಸಬಹುದಾದ ಇಂಧನಕ್ಕಾಗಿ ನಮ್ಮ ಕಾರ್ಯತಂತ್ರಗಳು ಮತ್ತು ಗುರಿ ಸಾಧಿಸಲು ಕೈಗೊಂಡ ಮಹತ್ವಾಕಾಂಕ್ಷಿ ಕ್ರಮಗಳಿಂದಾಗಿ ಇದು ಸಾಧ್ಯವಾಗಿದೆ. ಎಂದು
ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಹೇಳಿದ್ಧಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್