LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಳೆ ಆರಂಭವಾಗುತ್ತಿದ್ದಂತೆಯೇ ಡೆಂಗ್ಯೂ ಭೀತಿ: 172 ಡೆಂಗೆ ಪ್ರಕರಣಗಳು ವರದಿ





ಬೆಂಗಳೂರು,17: ಮಳೆ ಆರಂಭವಾಗುತ್ತಿದ್ದಂತೆಯೇ ನಗರದಲ್ಲಿ ಡೆಂಗ್ಯೂ ಭೀತಿ ಹೆಚ್ಚಾಗುತ್ತಿದ್ದು, ಮೇ 1ರಿಂದ 13ರವರೆಗೆ ಒಟ್ಟು 172 ಡೆಂಗೆ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಪೂರ್ವ ವಲಯದ ರಾಮಸ್ವಾಮಿಪಾಳ್ಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್‌ ವಿಕಾಸ್‌ ಕಿಶೋರ್‌ ಅವರು, ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ವಾರ್ಡ್‌ಗಳಲ್ಲಿ ಸೊಳ್ಳೆ ನಿಯಂತ್ರಣ ಕುರಿತು ಅರಿವು ಮೂಡಿಸುವ ಜತೆಗೆ ಔಷಧ ಸಿಂಪಡಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಮಳೆ ಬಂದಾಗ ನೀರು ಸಂಗ್ರಹವಾಗಿ ಸೊಳ್ಳೆಗಳ ಸಂತತಿ ಜಾಸ್ತಿಯಾಗಲಿದ್ದು, ಫಾಗಿಂಗ್‌ ಮತ್ತು ಔಷಧ ಸಿಂಪಡಣೆ ಮೂಲಕ ನಿಯಂತ್ರಿಸಬೇಕಿದೆ. ಹೂವಿನ ಕುಂಡಗಳು, ಬಿಸಾಡಿದ ಟೈರ್‌ಗಳು, ನೀರು ಸಂಗ್ರಹ ತೊಟ್ಟಿ, ನೀರಿನ ಬಾಟಲಿ ಸೇರಿದಂತೆ ಇತರೆಡೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹೀಗಾಗಿ, ಇಂತಹ ಕಡೆ ನೀರು ಸಂಗ್ರಹವಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರತಿಯೊಂದು ವಾರ್ಡ್‌ನಲ್ಲಿ 4 ಔಷಧಿ ಸಿಂಪಡಣೆ ಮಾಡುವ ತಂಡಗಳನ್ನು ನಿಯೋಜನೆ ಮಾಡಿದ್ದು, ತಾತ್ಕಾಲಿಕವಾಗಿ ನೀರು ನಿಲ್ಲುವ ಸ್ಥಳ ಹಾಗೂ ಶಾಶ್ವತವಾಗಿ ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಫಾಗಿಂಗ್‌ ಮತ್ತು ಔಷಧಿ ಸಿಂಪಡಣೆ ಮಾಡಲಾಗುತ್ತದೆ ಎಂದರು.

ಡೆಂಗ್ಯೂ ನಿಯಂತ್ರಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ, ವಾರ್ಡ್‌ ಮಟ್ಟದಲ್ಲಿ ಜಾಗೃತಿ ಜಾಥಾ ಹಾಗೂ ಕಸದ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಜತೆಗೆ, ಮನೆ- ಮನೆಗೆ ಡೆಂಗೆ ನಿಯಂತ್ರಣ ಕುರಿತ ಭಿತ್ತಿಪತ್ರಗಳನ್ನು ವಿತರಿಸಿ, ಪಾಲಿಸಬೇಕಾದ ಕ್ರಮಗಳ ಬಗ್ಗೆಯೂ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್