LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ತೈವಾನ್​ ವಾಯು ಸರಹದ್ದಿನಲ್ಲಿ ಕಾಣಿಸಿಕೊಂಡ 18 ಚೀನಿ ಏರ್​​ಕ್ರಾಫ್ಟ್!

ತೈಪೆ, ತೈವಾನ್: ಮಂಗಳವಾರ J-16 ಮತ್ತು KJ-500 ಸೇರಿದಂತೆ 21 ಚೀನಾದ ಮಿಲಿಟರಿ ವಿಮಾನಗಳು ತನ್ನ ವಾಯು ಪ್ರದೇಶದಲ್ಲಿ ಪತ್ತೆಯಾಗಿವೆ ಎಂದು ತೈವಾನ್‌ನ ರಾಷ್ಟ್ರೀಯ ರಕ್ಷಣಾ ಸಚಿವಾಲಯ ತಿಳಿಸಿದೆ. 21 ಪೀಪಲ್ಸ್ ಲಿಬರೇಶನ್ ಆರ್ಮಿ -ಪಿಎಲ್‌ಎ ವಿಮಾನಗಳಲ್ಲಿ ತೈವಾನ್ ಜಲಸಂಧಿಯ ಮಧ್ಯದ ರೇಖೆಯನ್ನು ದಾಟಿ ಉತ್ತರ, ಮಧ್ಯ, ನೈಋತ್ಯ ಮತ್ತು ಪೂರ್ವ ತೈವಾನ್‌ನ ಪೂರ್ವ ವಾಯು ರಕ್ಷಣಾ ಗುರುತಿನ ವಲಯ ಪ್ರವೇಶಿಸಿದೆ ಎಂದು ಅಲ್ಲಿನ ಸಚಿವಾಲಯ ತಿಳಿಸಿದೆ.


"21 PLA ವಿಮಾನಗಳು ವಿವಿಧ ಪ್ರಕಾರಗಳಲ್ಲಿ ಪತ್ತೆಯಾಗಿವೆ. ಅವುಗಳಲ್ಲಿ 18 ವಿಮಾನಗಳು ತೈವಾನ್ ಜಲಸಂಧಿಯ ಮಧ್ಯದ ರೇಖೆಯನ್ನು ದಾಟಿ ಉತ್ತರ, ಮಧ್ಯ, ನೈಋತ್ಯವನ್ನು ಪ್ರವೇಶಿಸಿವೆ ಎಂದು ತೈವಾನ್‌ನ ರಾಷ್ಟ್ರೀಯ ರಕ್ಷಣಾ ಸಚಿವಾಲಯವು X ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ. ಸೋಮವಾರ, ತೈವಾನ್ 9 ಚೀನೀ ಮಿಲಿಟರಿ ವಿಮಾನಗಳು ಮತ್ತು 9 ನೌಕಾ ಹಡಗುಗಳು ತೈವಾನ್ ಸುತ್ತಲೂ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿತ್ತು, ಅದರಲ್ಲಿ 6 ತೈವಾನ್ ಜಲಸಂಧಿಯ ಮಧ್ಯದ ರೇಖೆಯನ್ನು ದಾಟಿ ತೈವಾನ್‌ನ ಪೂರ್ವ ವಾಯು ರಕ್ಷಣಾ ಗುರುತಿನ ವಲಯವನ್ನು ಪ್ರವೇಶಿಸಿವೆ ಎಂದು ತೈವಾನ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಆಗಸ್ಟ್‌ ಆರಂಭದಿಂದ ಇಲ್ಲಿಯವರೆಗೆ 71 ವಿಮಾನ ಗಳು ಹಾಗೂ 36 ಬಾರಿ ಚೀನಾದ ಹಡಗುಗಳನ್ನು ಪತ್ತೆ ಮಾಡಲಾಗಿದೆ ಎಂದು ತೈವಾನ್ ನ್ಯೂಸ್ ವರದಿ ಮಾಡಿದೆ. ಸೆಪ್ಟೆಂಬರ್ 2020 ರಿಂದ ತೈವಾನ್ ಸುತ್ತಲೂ ಚೀನಾದ ಮಿಲಿಟರಿ ವಿಮಾನಗಳು ಮತ್ತು ನೌಕಾ ಹಡಗುಗಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಚೀನಾ ತನ್ನ ಹಿಡಿತವನ್ನು ಸಾಧಿಸುವ ಯತ್ನವನ್ನು ಮತ್ತಷ್ಟು ತೀವ್ರಗೊಳಿಸಿದೆ. ತೈವಾನ್ ನ್ಯೂಸ್ ವರದಿಯ ಪ್ರಕಾರ, ಚೀನಾ ತೈವಾನ್​​ ಅನ್ನು ನೇರವಾಗಿ ತನ್ನ ಹಿಡಿತಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಅದರ ಹಿಡಿತವನ್ನು ಬಿಗಿಗೊಳಿಸಲು ಎಲ್ಲ ಸಿದ್ಧತೆಯನ್ನು ಮಾಡಿಕೊಂಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್