ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸಿ, ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಘಟಿಸಿದೆ. ಅತಿ ವೇಗವಾಗಿ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಪೊಲೀಸರು ಮೃತದೇಹಗಳನ್ನು ಗುರುತಿಸುತ್ತಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಹಲವರ ಪರಿಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.