Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ಪಾಲಿಕೆಗೆ 20 ಕೋಟಿ ರೂ. ತಲೆ ದಂಡ; ಡಿಸಿ ನೇತೃತ್ವದಲ್ಲಿ ತನಿಖೆ ನಡೆಸಿ ಕ್ರಮ: ಸಚಿವ ಸತೀಶ್‌ ಜಾರಕಿಹೊಳಿ


ಬೆಳಗಾವಿ: ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಜಮೀನು ಕಳೆದುಕೊಂಡವರಿಗೆ 20 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಧಾರವಾಡ ಹೈಕೋರ್ಟ್ ನೀಡಿರುವ ತೀರ್ಪಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.


ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಶಿವಾಜಿ ಗಾರ್ಡನ್​ನಿಂದ ಓಲ್ಡ್ ಪಿಬಿ ರಸ್ತೆವರೆಗೆ ಸಿಸಿ ರಸ್ತೆ ಕಾಮಗಾರಿಯನ್ನು  ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆದಿತ್ತು. ಈ ವೇಳೆ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿದ್ದು, ರಸ್ತೆ ನಿರ್ಮಿಸುವ ವೇಳೆ ಜಮೀನು ಕಳೆದುಕೊಂಡವರಿಗೆ ಈಗ ಹೈಕೋರ್ಟ್ 20 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಆದೇಶಿಸಿದೆ. ಪ್ರಕರಣದ ತನಿಖೆಯ ವೇಳೆ ಮಹಾನಗರ ಪಾಲಿಕೆಯ ಆಯುಕ್ತರು ಜಿಲ್ಲಾಧಿಕಾರಿಗಳ ಗಮನಕ್ಕೆ ತರದೇ, ಒಪ್ಪಿಗೆ ಸೂಚಿಸಿದ್ದಾರೆ. ಅವರ ವಿರುದ್ಧ ತನಿಖೆಯಾಗಬೇಕು. ಈ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಗ್ರ ತನಿಖೆಯಾಗಬೇಕು ಎಂದು ತಿಳಿಸಿದರು.


ರಸ್ತೆ ನಿರ್ಮಿಸಿದವರು ಸ್ಮಾರ್ಟ ಸಿಟಿಯವರು. ಅವರೇ ಪರಿಹಾರ ನೀಡಬೇಕಾಗಿತ್ತು . ಆದರೇ ಜಿಲ್ಲಾಧಿಕಾರಿಗಳ ಗಮನಕ್ಕೆ ತರದೇ ಸರ್ವಾಧಿಕಾರ ನೀತಿ ಅನುಸರಿಸಿದ್ದಾರೆ. ಈ ಕುರಿತು ಕಾನೂನು ಹೋರಾಟ ನಡೆಸಲಾಗುವುದು. ಇನ್ನು ಇಂತಹ ಪ್ರಕರಣಗಳು ಬಾಕಿ ಇವೆ. ಆಡಳಿತ ಪಕ್ಷದವರು ಪಾಲಿಕೆಯ ಸಭೆಯಲ್ಲಿ ಚರ್ಚಿಸಿ ತಪ್ಪಿತಸ್ಥರನ್ನು ಕಂಡು ಹಿಡಿಯಬೇಕಾಗಿತ್ತು. ನಿನ್ನೆಯ ಸಭೆಯಲ್ಲಿ ಪಾಲಿಕೆಯಲ್ಲಿ ಕೈಗೊಂಡ ನಿರ್ಣಯಕ್ಕೆ ತಮ್ಮ ಸಮ್ಮತಿ ಇಲ್ಲ. ಸ್ಮಾರ್ಟ ಸಿಟಿಯವರೇ ಈ ದಂಡ ತೆತ್ತಬೇಕೆಂಬುದು ನಮ್ಮ ನಿರ್ಣಯವಾಗಿದೆ. ಆಡಳಿತ ಪಕ್ಷದವರು ಪಾಲಿಕೆಯನ್ನು ಉಳಿಸುವ ವಿಚಾರದಲ್ಲಿಲ್ಲ. ಕೇವಲ ತಮ್ಮ ಸುರಕ್ಷತೆಯನ್ನು ನೋಡಿಕೊಳ್ಳುತ್ತಿದ್ದಾರೆ. ಎರಡು ಕಡೆಗಳಲ್ಲಿ ಅವರೇ ಪಾತ್ರಧಾರಿಗಳು ಎಂದ ಅವರು ತಾವೊಬ್ಬರೇ ಜಿಲ್ಲಾ ಉಸ್ತುವಾರಿ ಸಚಿವರಾಗಿ ಈ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ. ಪಾಲಿಕೆಗೆ ನೀಡುವ ಅನುದಾನ ಮತ್ತು ಸ್ಮಾರ್ಟ ಸಿಟಿ ಅನುದಾನ ಸೇರಿದಂತೆ ಪಾಲಿಕೆಗೆ ಬರಬೇಕಾದ ಬಾಕಿ ಹಣವನ್ನು ದಂಡಕ್ಕಾಗಿ ಉಪಯೋಗಿಸಬೇಕಾಗುತ್ತದೆ ಎಂದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*