Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ ಘೋಷಣೆ


ಬಳ್ಳಾರಿ,ಜು.17 : ನಗರದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಜುಲೈ 17 ರಿಂದ 19 ರ ವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 02 ರಿಂದ ಸಂಜೆ 04 ರವರೆಗೆ 2026ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.
ಬಳ್ಳಾರಿ ನಗರದ ಸರ್ಕಾರಿ ಬಾಲಕಿಯರ ಪಿಯು ಕಾಲೇಜು (ಪ್ರೌಢಶಾಲಾ ವಿಭಾಗ) ಪರೀಕ್ಷಾ ಕೇಂದ್ರದಲ್ಲಿ ಈ ಪರೀಕ್ಷೆ ನಡೆಯಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರ ಅಡಿಯಲ್ಲಿ ತಮಗಿರುವ ಅಧಿಕಾರವನ್ನು ಚಲಾಯಿಸಿ ಈ ಆದೇಶವನ್ನು ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರದ ಸುತ್ತಮುತ್ತ ಅನಧಿಕೃತ ವ್ಯಕ್ತಿಗಳು ಹಾಗೂ ವ್ಯಕ್ತಿಗಳ ಗುಂಪುಗಳು ಜಮಾಯಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳು ಹಾಗೂ ಇಂಟರ್ನೆಟ್ ಸೆಂಟರ್‌ಗಳು ಕಾರ್ಯನಿರ್ವಹಿಸದಂತೆ ಕಟ್ಟುನಿಟ್ಟಿನ ಪ್ರತಿಬಂಧಕ ಆದೇಶ ಜಾರಿಗೊಳಿಸಲಾಗಿದೆ.
ಈ ಕಟ್ಟುನಿಟ್ಟಿನ ನಿಯಮಗಳು ಪರೀಕ್ಷೆಯ ಮೇಲ್ವಿಚಾರಣೆ ಹಾಗೂ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ವರ್ಗದವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ