LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ


ಬಳ್ಳಾರಿ,ಆ.21 ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯ ಪರೀಕ್ಷಾ ಕೇಂದ್ರದಲ್ಲಿ ಕರ್ನಾಟಕ ಮುಕ್ತ ಶಾಲೆ(ಕೆಒಎಸ್) ಪೂರಕ ಪರೀಕ್ಷೆಗಳು ಆ.24 ರಿಂದ ಸೆ.03 ರ ವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಹೊರಡಿಸಿದ್ದಾರೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಲಭ್ಯವಿರುವ ಅಧಿಕಾರವನ್ನು ಬಳಸಿ ಈ ಆದೇಶವನ್ನು ಹೊರಡಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.
ಪರೀಕ್ಷೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳು ಕಾರ್ಯನಿರ್ವಹಿಸದಂತೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿಗಳು ಮತ್ತು ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಪ್ರತಿಬಂಧಿಸಲಾಗಿದೆ.
ಈ ನಿಷೇಧಾಜ್ಞೆ ಆದೇಶವು ಪರೀಕ್ಷಾ ಕರ್ತವ್ಯದಲ್ಲಿ ನಿರತರಾಗಿರುವ ಮೇಲ್ವಿಚಾರಕರು ಹಾಗೂ ಸಂಬAಧಪಟ್ಟ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ