Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2024ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ



ಕೊಪ್ಪಳ ಏಪ್ರಿಲ್ 30 :  ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯ ಒದಗಿಸುವಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ನೌಕರರಿಗೆ 2024ನೆ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಏಪ್ರೀಲ್ 30ರಂದು ಜಿಲ್ಲಾಡಳಿತ ಭವನದ ಆಡಿಟೋರಿಂ  ಹಾಲನಲ್ಲಿ ನಡೆಯಿತು.
 2024ನೇ ಸಾಲಿಗೆ ಜಿಲ್ಲಾ ಪಂಚಾಯತಿಯ ಸಹಾಯಕ ಸಾಂಖ್ಯಿಕ ಅಧಿಕಾರಿ ಬಸಪ್ಪ ಮಾರನಬಸರಿ, ಕೊಪ್ಪಳ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೂ ಎಸ್.ಗಂಧದ, ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಎಸ್‌ಡಿಎ ಧರ್ಮಪ್ಪ ಚೌಧರಿ, ಜಿಲ್ಲಾ ಕ್ಷಯರೋಗ ಮತ್ತು ಕುಷ್ಠರೋಗ ನಿಯಂತ್ರಣಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರವಿ ಜಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಜಿಲ್ಲಾ ಅನುಷ್ಠಾನಾಧಿಕಾರಿ ಡಾ.ರವೀಂದ್ರನಾಥ ಎಂ.ಎಚ್., ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ ತಾಂತ್ರಿಕ-1 ಮಹ್ಮದ್ ಮೊಹಿನುಲ್ ಹಸನ್, ಕೊಪ್ಪಳದ ಹಿರಿಯ ಸಹಾಯ ತೋಟಗಾರಿಕೆ ನಿರ್ದೇಶಕರ ಕಚೇರಿಯ ಸಹಾಯಕ ತೋಟಗಾರಿಕೆ ಅಧಿಕಾರಿ ವೆಂಕಟೇಶ ದೇಸಾಯಿ, ಗಂಗಾವತಿ ತಹಶೀಲ್ ಕಚೇರಿಯ ಶಿರಸ್ತೇದಾರ ರವಿಕುಮಾರ ಬಿ.ನಾಯಕವಾಡಿ, ಹನುಮನಾಳ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಶಾಂತ ಹಿರೇಮಠ ಅವರನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ, ಜಿಲ್ಲಾ ಪಂಚಾಯತ್ ಸಿಇಓ ವರ್ಣಿತ್ ನೇಗಿ, ರಾಜ್ಯ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ನಾಗರಾಜ ಆರ್.ಜುಮ್ಮನ್ನವರ ಹಾಗೂ ಇನ್ನೀತರರು ಪ್ರಶಸ್ತಿ ಪ್ರದಾನ ಮಾಡಿದರು.
***
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST