Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

210 ಕೋಟಿ ರೂಪಾಯಿಗಳ ನೀರಾವರಿ ಯೋಜನೆ ಶೀಘ್ರ ಅನುಷ್ಠಾನ: ಗಣೇಶ ಹುಕ್ಕೇರಿ


ಚಿಕ್ಕೋಡಿ:ಕೆರೂರ, ಕಾಡಾಪುರ ಜೋಡಕುರಳಿ, ಬಸನಾಳಗಡೆ ನನದಿ ಗ್ರಾಮಗಳಿಗೆ ಕೃಷ್ಣಾ ನದಿಯಿಂದ ನೇರವಾಗಿ ಪೈಪ್ಲೈನ್ ಮುಖಾಂತರ ನೀರು ಯೋಜನೆ ಅನುಷ್ಠಾನಕ್ಕಾಗಿ 210 ಕೋಟಿ ರೂಪಾಯಿಗಳ ಅನುದಾನಕ್ಕೆ ಮುಂದಿನ ವಾರದಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಸಭೆಯಲ್ಲಿ ತಾಂತ್ರಿಕ ಅನುಮತಿ ಸಿಗಲಿದೆ, ಮುಂದಿನ ಕೆಲವೇ ದಿನಗಳಲ್ಲಿ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ  ಹಾಗೂ ಪ್ರಕಾಶ ಹುಕ್ಕೇರಿ ಅವರ ನೇತೃತ್ವದಲ್ಲಿ ಶಂಕು ಸ್ಥಾಪನೆ ಮಾಡಲಾಗುವುದು ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು.


2 ಕೋಟಿ 40 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೂರ  ಜೋಡಕುರಳಿ ರಸ್ತೆಯ ಕಾಮಗಾರಿಗೆ  ಹಾಗೂ ಸಂಚಾರಿ ಆರೋಗ್ಯ ಘಟಕದ ಬಸಗೆ ಚಾಲನೆ ನೀಡಿ ಮಾತನಾಡಿದರು. ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಬಹುದು ಎಂದು ಭಯವಿತ್ತು, ಆದರೆ ಸರ್ಕಾರ ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಿದ್ದು, ಸರ್ಕಾರಕ್ಕೆ ಅಭಿನಂದನೆಗಳು ಸಲ್ಲಿಸುತ್ತೇನೆ. ಕೆರೂರ ಗ್ರಾಮದಲ್ಲಿ 33 ಕೆ ವಿ ವಿದ್ಯುತ್ ಸ್ಟೇಷನವನ್ನು 110 ಕೆ ವಿ ಸ್ಟೇಷನ್ ಎಂದು ಮೇಲ್ದೆರ್ಜೆಸಲು ಮಂಜೂರಾಗಿದೆ.


ಅದೇ ರೀತಿ ಪಟ್ಟಣಕೊಡಿಯಲ್ಲಿ ಸಹ 33 ಕೆ ವಿ ದಿಂದ 110 ಕೆ ವಿ ಕೆ ವಿ ಸ್ಟೇಶನ್ ಮೇಲ್ದರ್ಜೆಗೆ ಎರಿಸಲಾಗಿದೆ.ನಾಗರಾಳ ಗ್ರಾಮದಲ್ಲಿ ನೂತನ ವಿದ್ಯುತ್ ಸ್ಟೇಷನ್ ನಿರ್ಮಾಣಕ್ಕಾಗಿ ನಾವು ವೈಯಕ್ತಿಕವಾಗಿ 10 ಎಕರೆ ಭೂಮಿ ನೀಡಿದ್ದೇವೆ. ಎಲ್ಲಾ ನೀರಾವರಿ ಯೋಜನೆಗಳಿಗೆ ವಿದ್ಯುತ್ ಪೂರೈಕೆಗೆ ವ್ಯತ್ಯಯ ಆಗಬಾರದು ಹಾಗೂ ರೈತರಿಗೆ ನಾಗರಿಕರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸಲು ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದರು.


ಮುಖಂಡರಾದ ಮಲ್ಲಿಕಾರ್ಜುನ ಪಾಟಿಲ ಮಾತನಾಡಿ ಕೆರೂರ ಗ್ರಾಮಕ್ಕೆ ಶಾಸಕ ಗಣೇಶ ಹುಕ್ಕೇರಿ ಹಾಗೂ ಎಂಎಲ್ಸಿ ಪ್ರಕಾಶ ಹುಕ್ಕೇರಿ ಅವರು ಐದು ಕೋಟಿ ರೂಪಾಯಿಗಳ ಅನುದಾನ ನೀಡಿದ್ದಾರೆ. ಮುಂದಿನ ದಿನಮಾನಗಳಲ್ಲಿ ಇನ್ನೂ 5 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದರು. ಕೃಷಿ ಪತ್ತಿನ ಬ್ಯಾಂಕುಗಳಿಗೆ 30 ಲಕ್ಷ ರೂಪಾಯಿ ವೆಚ್ಚದಲ್ಲಿ 2 ಗೋದಾಮುಗಳನ್ನ ನಿರ್ಮಿಸಿದ್ದಾರೆ.


ನಿವೃತ್ತ ಶಿಕ್ಷಕ ರಾಜೇಸಾಬ ಸಯ್ಯ ಮಾತನಾಡಿ  ವಿಧಾನಪರಿಷತ ಸದಸ್ಯ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಅವರು ಈ ಭಾಗದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ.ಇಂತಹ ಶಾಸಕರನ್ನು ಪಡೆದಿದ್ದು ನಮ್ಮೆಲ್ಲರ ಭಾಗ್ಯ ಎಂದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ವೀರೇಂದ್ರ ಪಾಟೀಲ,  ರವಿ ಪಾಟೀಲ, ಮಲ್ಲಪ್ಪ ಬಾಗಿ, ವಿಠ್ಠಲ ವಾಳಕೆ, ಶಿವಪ್ಪ ಪೂಜಾರಿ, ವಿಠ್ಠಲ ಬೀಳಗಿ, ಸಂಭಾಜಿ ಹಕ್ಯಾಗೋಳ ಮಹೇಶ ಪಾಟೀಲ, ಖಾನಪ್ಪ ಬಾಡಕರ, ಸೋಮಶೇಖರ  ಸಂಕಪಾಳ , ಸುರೇಶ್ ಬಾಡಕರ,  ಶಿವಾನಂದ ನಾಗನೂರೆ, ಪಿಡಿಓ ವಿನೋದ ಅಸೋದೆ  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ