LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೇಂದ್ರದಿಂದ 2186 ಕೋಟಿ.ರೂ. ಬಾಕಿ- ಕೋರ್ಟ್ ಮೊರೆ: ಈಶ್ವರ ಖಂಡ್ರೆ

ಬೆಳಗಾವಿ ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು, ಸೆ.10: 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಗ್ರಾಮಪಂಚಾಯತಿಗಳಿಗೆ ಬರಬೇಕಾದ 2186.20 ಕೋಟಿ ರೂ. ಅನುದಾನ ತಡೆಹಿಡಿದಿರುವ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಲು ತೀರ್ಮಾನಿಸಲಾಗಿದೆ.

ಇಂದು ತಮ್ಮ ಕಚೇರಿಯಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಅಧಿಕಾರಿಗಳೊಂದಿಗೆ ಈ ಸಂಬಂಧ ಸಭೆ ನಡೆಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ 2025-26ನೇ ಸಾಲಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಹಂಚಿಕೆ ಮಾಡಿದ್ದ 2186.20 ಕೋಟಿ ರೂ. ಬಿಡುಗಡೆ ಮಾಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆಯಿಂದ ಬರಪರಿಸ್ಥಿತಿ ತಲೆದೋರಿದ್ದು, 710 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. 149 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. 561 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ. ಬಿತ್ತನೆ ಮಾಡಿದ ಬೀಜ ಮೊಳಕೆ ಒಡೆಯದೆ ರೈತರು ಕಂಗಾಲಾಗಿರುವ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಈ ರೀತಿ ನ್ಯಾಯಯುತ ಹಂಚಿಕೆಯನ್ನೇ ಬಿಡುಗಡೆ ಮಾಡದಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವ ಕಾನೂನು ಅಂಶಗಳ ಬಗ್ಗೆ ಚರ್ಚಿಸಿದರು.

ಗ್ರಾಮಪಂಚಾಯತಿ ಚುನಾವಣೆಗೆ ಸಿದ್ಧತೆ:

ರಾಜ್ಯ ಸರ್ಕಾರ ಅವಧಿ ಮುಗಿದ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳನ್ನು ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಎಸ್.ಐ.ಆರ್.ಕಾರ್ಯಕ್ಕೆ ಸರ್ಕಾರಿ ಸಿಬ್ಬಂದಿ ನಿಯೋಜನೆ ಆಗಿದ್ದ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಗ್ರಾ.ಪಂ. ಚುನಾವಣೆಗೆ ಸರ್ಕಾರ ಸಂಪೂರ್ಣ ಸಜ್ಜಾಗಿದ್ದು, ಶೀಘ್ರವೇ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹಾಗೂ ಪಂಚಾಯತಿ ರಾಜ್ ಇಲಾಖೆ ಕಾರ್ಯದರ್ಶಿ ಡಿ.ರಂದೀಪ್ ಅವರೊಂದಿಗೆ ಚುನಾವಣೆ ನಡೆಸುವ ಕುರಿತ ಕಾನೂನು ಅಂಶಗಳ ಬಗ್ಗೆ ಮಾಹಿತಿ ಪಡೆದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
*ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ: ಲಕ್ಷ್ಮೀ ಹೆಬ್ಬಾಳಕರ್*ಅ.12ರಂದು ಅದ್ಧೂರಿಯಾಗಿ ಅಥಣಿ ತಾಲೂಕಿನ  ನಾಗನೂರ ಪಿ.ಕೆ. ಸರ್ಕಾರಿ ಶಾಲೆಗೆ ಶತಮಾನೋತ್ಸವ ಸಂಭ್ರಮ : ಸಚಿವ ಸವದಿ ಅವರೊಂದಿಗೆ ಪೂರ್ವಭಾವಿ ಚರ್ಚೆಸಚಿವ  ಸತೀಶ ಜಾರಕಿಹೋಳಿ ವಿರುದ್ದ ವ್ಯವಸ್ಥಿತ ಷಡ್ಯಂತ್ರವಾಗಿದೆ : ಸುಜಾತಾ ಬೇಟೆಗಾರ.*ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಜಿಲ್ಲೆಯ ಮುಖಂಡರು ಭಾಗಿ*ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ  : ವಿ.ಕೆ.ಬಸಪ್ಪ ಭೋವಿ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯಕ್ಕೆ ಆಗ್ರಹ | ಅ.11ರಂದು ಬಳ್ಳಾರಿಯಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ನೆರವು: ಶಿವಸಂಜೀವಿನಿ ಸುರಗಿರಿ ವತಿಯಿಂದ ಸಹಾಯಧನ ವಿತರಣೆಸಿರುಗುಪ್ಪದಲ್ಲಿ 8ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮ: ಗಡಿನಾಡ ಕನ್ನಡಿಗರ ಸವಾಲು ಮತ್ತು ನಾಡು-ನುಡಿ ರಕ್ಷಣೆಗೆ ಕರೆಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ  ಭಾಜನರಾದ ನಬಿಸಾಬ ಕುದ್ದುನ್ನವರಗಣೇಶೋತ್ಸವದಲ್ಲಿ ಹಳೆ ಸಂಪ್ರದಾಯಕ್ಕೆ ಮರುಜೀವ ನೀಡಿ: ಪಿಎಸ್‌ಐ ಪ್ರೀತಮ್ ನಾಯಕ