Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂವಿಧಾನ ವಿರೋಧಿ ದುಷ್ಟ ಶಕ್ತಿಗಳ ಮಟ್ಟ ಹಾಕುವುದು ಡಿಸಿ, ಸಿಇಒ, ಎಸ್ಪಿಗಳ ಜವಾಬ್ದಾರಿ : ಸಿಎಂ

* ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಲ್ಲಿ ಕನಿಷ್ಟ ಎರಡು ಬಾರಿ ಆಯಾ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಬೇಕು.

* ಜಿಲ್ಲಾಧಿಕಾರಿಗಳು, ಸಿಇಒಗಳು ತಮ್ಮ ಪ್ರವಾಸ ಕಾರ್ಯಕ್ರಮ ಮೊದಲೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು.

* ಮುನ್ಸೂಚನೆ ಇಲ್ಲದೇ ಜಿಲ್ಲೆಯಲ್ಲಿ ಶಾಲೆಗಳು, ಹಾಸ್ಟೆಲ್ಗಳು , ವಸತಿ ಶಾಲೆಗಳ ಭೇಟಿಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸಬೇಕು 

* ಕೆಲವು ಜಿಲ್ಲಾಧಿಕಾರಿಗಳು, ಸಿಇಒಗಳು ಸರಿಯಾಗಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಲಭ್ಯವಾಗದಿರುವ ಬಗ್ಗೆ ದೂರುಗಳು ಬಂದಿವೆ. 

* ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ವಾಸವಿರಬೇಕು.

* ನಿಮ್ಮ ಅಧೀನದಲ್ಲಿರುವ ಇಲಾಖೆಗಳು, ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸುವುದು ನಿಮ್ಮ ಜವಾಬ್ದಾರಿ. 

ಬೆಂಗಳೂರು: ಸಂವಿಧಾನ ವಿರೋಧಿ, ಜನವಿರೋಧಿ ದುಷ್ಟ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಿ.ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ, ಸಿಇಒ, ಎಸ್ಪಿಗಳ ಜವಾಬ್ದಾರಿ ಎಂದು ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಸಿಇಒಗಳಿಗೆ ಎಚ್ಚರಿಕೆ ನೀಡಿದರು.‌


ವಿಧಾನಸೌಧದಲ್ಲಿ ನಡೆಯುತ್ತಿರುವ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆಗಿನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಿಎಂ, ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ, ಸಿಇಒ, ಎಸ್ಪಿಗಳ ಜವಾಬ್ದಾರಿ ತಾನೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.

*ಹಿಂದಿನ ಸಭೆಯಲ್ಲಿ ನೀಡಿದ ಸೂಚನೆಗಳು, ತೆಗೆದುಕೊಂಡ ನಿರ್ಣಯಗಳಲ್ಲಿ ಕೆಲವು ಇಲಾಖೆಗಳು ಶೇ100 ರಷ್ಟು ಪ್ರಗತಿ ತೋರಿಸಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ರಾಜಿ ಇಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ನಿಷ್ಠುರವಾಗಿ ಕ್ರಮ ಕೈಗೊಳ್ಳುವುದು ನಮಗೆ ಅನಿವಾರ್ಯ ಆಗುತ್ತದೆ.

*ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಮತ್ತು ಸಿಇಒ ಗಳು ತಮ್ಮ ಅಹಂ ಬದಿಗೊಟ್ಟಿ ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ. ಈ ಉದ್ದೇಶಕ್ಕೇ ನೀವುಗಳು ಐಎಎಸ್‌ ಮಾಡಿರುವುದು. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

*10-10-1949 ರಂದು ಸಂವಿಧಾನ ಜಾರಿ ಸಭೆಯಲ್ಲಿ ಇಂಡಿಯನ್‌ ಸಿವಿಲ್‌ ಸರ್ವೀಸ್‌ ಬೇಕಾ ಎಂದು ಚರ್ಚೆ ಆಗಿ ಐಎಎಸ್‌ ಬೇಕು ಎನ್ನುವ ನಿರ್ಧಾರಕ್ಕೆ ಬರಲಾಗಿದೆ. ಆ ಸಭೆಯಲ್ಲಿ ವಲ್ಲಭಾಬಾಯಿ ಪಟೇಲರು "ದೇಶವನ್ನು ನೈಜ ಸ್ವಾತಂತ್ರ್ಯ ಹೋರಾಟಗಳ ಆಶಯದಲ್ಲಿ ಮುನ್ನಡೆಸಲು ಐಎಎಸ್‌ ಸೇವೆ ಇರಬೇಕು, ಇದರ ನೈಜ ಕಾಳಜಿಯನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಸಾಮಾಜಿಕ ನ್ಯಾಯ

*ವಲ್ಲಭಬಾಯಿ ಅವರ ಮಾತನ್ನು ನಾವು ಅರ್ಥಮಾಡಿಕೊಳ್ಳಬೇಕು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುವವರ ವಿರುದ್ಧ ಮತ್ತು ಜನಪರ ಆಶಯಗಳಿಗೆ ಸ್ಪಂದಿಸದಿದ್ದರೆ ಅವರ ವಿರುದ್ಧ ನಾವು ಕ್ರಮ ಕೈಗೊಳ್ಳಬೇಕಾಗುತ್ತದೆ. ನೀವೆಲ್ಲಾ ಸಂವಿಧಾನ ಓದಿದ್ದೀರಿ, ಅದರ ಆಶಯಗಳಿಗೆ, ಧ್ಯೇಯೋದ್ದೇಶಗಳಿಗೆ ಬದ್ದರಾಗಿದ್ದೀರಿ ಎಂದು ನಂಬಿದ್ದೇನೆ. ಇದನ್ನು ಕಾರ್ಯ ರೂಪಕ್ಕೆ ತರುವುದರಲ್ಲಿ ವಿಫಲರಾದವರ ವಿರುದ್ಧ ನಾನು ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲು ನಿರ್ಧಿರಿಸಿದ್ದೇನೆ ಎಂದು ಎಚ್ಚರಿಸಿದರು.

*ಸಂವಿಧಾನ ವಿರೋಧಿ, ಜನ ವಿರೋಧಿ ದುಷ್ಟ ಶಕ್ತಿಗಳು ಕೆಲವು ಕಡೆ ಬಾಲ ಬಿಚ್ಚುತ್ತಿವೆ. ಅವರು ಎಷ್ಟೇ ಪ್ರಭಾವಿ ಆಗಿರಲಿ, ಕಾನೂನು ಹಾಳು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ನಿಮ್ಮ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

*ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಇವೆರಡಕ್ಕೂ ನೇರಾ ನೇರಾ ಸಂಬಂಧವಿದೆ.

*ಕಾನೂನು ಸುವ್ಯವಸ್ಥೆ ಹದಗೆಟ್ಟರೆ, ಅಭಿವೃದ್ಧಿ ಕುಂಟಿತವಾದಂತೆ. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ನೇರ ಹೊಣೆ ಎಂದು ಎಚ್ಚರಿಸಿದರು.

*ನಾವು ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ನಾವು ಮತ್ತು ನೀವು ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದು ಜನರ ತೆರಿಗೆ ಹಣದಿಂದ ಎನ್ನುವುದನ್ನು ಮರೆಯಬಾರದು. ಕಾರು, ಮನೆ ಸೇರಿ ಎಲ್ಲಾ ಸವಲತ್ತುಗಳನ್ನು ನಾವು ಕೊಟ್ಟಿರುವುದು ತೆರಿಗೆ ಹಣದಲ್ಲಿ. ಆದ್ದರಿಂದ ಜನಪರ ಧೋರಣೆಯಲ್ಲಿ ಕೆಲಸ ಮಾಡಬೇಕು. ಇದೇ ಪ್ರಜಾಪ್ರಭುತ್ವದ ಮೂಲ ಆಶಯ.

*ಜಿಲ್ಲಾ ಮಟ್ಟದ ಶಾಂತಿ ಸಮಿತಿ ಅಧ್ಯಕ್ಷರು ಜಿಲ್ಲಾಧಿಕಾರಿಗಳೇ ಆಗಿರ್ತಾರೆ. ಶಾಂತಿ ಕಾಪಾಡಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಶಾಂತಿಭಂಗ ಆದ ಮೇಲೆ ಪೋಸ್ಟ್‌ ಮಾರ್ಟಂ ಮಾಡುತ್ತಾ ಕೂರಬಾರದು. ಮೊದಲೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಏನು ಸಮಸ್ಯೆ ನಿಮಗೆ ಎಂದು ಪ್ರಶ್ನಿಸಿದರು.

*ಬಾಲ್ಯ ವಿವಾಹ ಆಗುವುದು ಜಿಲ್ಲಾಧಿಕಾರಿಗಳ ಗಮನಕ್ಕೆ ಏಕೆ ಬರುವುದಿಲ್ಲ? ನಿಮ್ಮ ಕೆಳಗಿನವರು ನಿಮಗೆ ವರದಿ ಮಾಡುವುದಿಲ್ಲವೇ? ಕೆಳಗಿನವರು ನಿಮಗೆ ಹೇಳದಿದ್ದರೆ ನಿಮಗೆ ದಕ್ಷತೆ ಇಲ್ಲ ಎಂದು ಅರ್ಥ. ನಿಮಗೆ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ, ನಿಮ್ಮ ಬಗ್ಗೆ ಅವರಿಗೆ ಭಯ ಇಲ್ಲ ಎಂದೇ ಅರ್ಥ ಎಂದು ತರಾಟೆಗೆ ತೆಗೆದುಕೊಂಡರು.

*ಈ ವರ್ಷ 700 ಬಾಲ್ಯ ವಿವಾಹ ನಡೆದಿದೆ, ಬಾಲ್ಯದಲ್ಲೇ ತಾಯಂದಿರಾದ ಘಟನೆಗಳೂ ವರದಿಗಳಾಗಿವೆ. ಈ ಬಗ್ಗೆ ಹಲವು ಕಡೆ ಎಫ್‌ ಐಆರ್‌ ಕೂಡ ದಾಖಲಾಗಿಲ್ಲ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಸ್ವಾತಂತ್ರ್ಯ ಬಂದು ಇಷ್ಟ ವರ್ಷಗಳಾದರೂ 7೦೦ ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಹೇಗೆ? ಬಾಲ್ಯವಿವಾಹ ತಡೆಗೆ ಕಾಯ್ದೆ, ಕಾನೂನುಗಳಿವೆ. ಆದರೂ ಇದನ್ನು ಪರಿಣಾಮಕಾರಿಯಾಗಿ ಕೆಲವು ಕಡೆ ಬಳಸಿಲ್ಲ. ಇದು ತಪ್ಪಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ