Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸಪೇಟೆಯಲ್ಲಿ ದೇವರಾಜ್‌ಅರಸ್ ಭವನ ನಿರ್ಮಾಣಕ್ಕೆ ಆಗ್ರಹಿಸಿ ಮನವಿ

ಹೊಸಪೇಟೆ (ವಿಜಯನಗರ): ಜಿಲ್ಲಾ ಕೇಂದ್ರವಾದ ಹೊಸಪೇಟೆಯಲ್ಲಿ ದೇವರಾಜ್‌ಅರಸ್ ಭವನ ನಿರ್ಮಾಣಕ್ಕೆ ಆಗ್ರಹಿಸಿ ಶಾಸಕರ ಮುಖಾಂತರ ದೇವರಾಜ ಅರಸುವರವ ನೆನಪಿನ ದೇವರಾಜ್ ಅರಸ್ ಭವನ ನಿರ್ಮಾಣ ಮಾಡಲು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.
ದೇವರಾಜ್‌ಅರಸ್ ರವರು ಕ್ರಾಂತಿಕಾರಿ ಭೂ ಸುಧಾರಣಾ ಯೋಜನೆ, ಹಿಂದುಳಿದ ಜಾತಿಗಳಿಗೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ, ಹಿಂದಿನ ಮೈಸೂರು ರಾಜ್ಯಕ್ಕೆ ಕರ್ನಾಟಕ ನಾಮಕರಣ ಎಂದು ಮಾಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ. ಹೀಗಾಗಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ದೇವರಾಜ್ ಅರಸ್ ಭವನ ನಿರ್ಮಿಸಲಾಗಿದೆ, ಅದರಂತೆ ವಿಜಯನಗರ ಕೇಂದ್ರ ಸ್ಥಾನ ಹೊಸಪೇಟೆಯಲ್ಲಿ ಅವರ ಹೆಸರಿನ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ವೈ.ಯಮುನೇಶ್‌ರವರು ಶಾಸಕ ಹೆಚ್.ಆರ್.ಗವಿಯಪ್ಪ ಅವರಿಗೆ ಮನವರಿಕೆ ಮಾಡಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ದೇವರಾಜ ಅರಸು ಭವನ ನಿರ್ಮಾಣದ ಉದ್ದೇಶ

ಸೌಲಭ್ಯ ವಂಚಿತ ಹಿಂದುಳಿದ ಸಮುದಾಯಗಳಿಗೆ ಸರಕಾರದ ಸೌಲಭ್ಯಗಳನ್ನು ಒದಗಿಸಲು ಅರಸು ಭವನದಲ್ಲಿ ತರಬೇತಿ ಶಿಬಿರಗಳು, ವಿಚಾರ ಸಂಕೀರ್ಣ ಏರ್ಪಡಿಸಲು ಅನುಕೂಲವಾಗುತ್ತದೆ.
ಓ.ಬಿ.ಸಿ. ಸಮುದಾಯಗಳ ವಿದ್ಯಾರ್ಥಿಗಳ ಉನ್ನತ ಶಿಕ್ಷಣ, ಉದ್ಯೋಗ ಸೇರ್ಪಡೆಗೆ ಕಾರ್ಯಗಾರ ಸಂಘಟಿಸಲು ಅವರಿಗೆ ಮಾರ್ಗದರ್ಶನ ಮಾಡಲು ಅರಸು ಭವನ ಅತ್ಯಂತ ಅವಶ್ಯಕವಾಗಿದೆ.
ಹಿಂದುಳಿದ ಜಾತಿಗಳು ತಮ್ಮ ಸಾಂಸ್ಕೃತಿಕ, ಶೈಕ್ಷಣಿಕ, ಆರ್ಥಿಕ ಪ್ರಗತಿಯ ಬಗ್ಗೆ ಚರ್ಚಿಸಲು ಸಭೆ ಸಮಾರಂಭ ನಡೆಸಲು ಅರಸು ಭವನ ಅಗತ್ಯವಾಗಿದೆ.

ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಆಂಜನೇಯಲು ಮಾತನಾಡಿ ಭವನ ನಿರ್ಮಾಣದಿಂದ ಹಿಂದುಳಿದ ವರ್ಗಗಳ ಸಚಿವಾಲಯದ ತಾಲೂಕು ಹಾಗೂ ಜಿಲ್ಲಾ ಮಟ್ಟದ ಕಛೇರಿಗಳು ಒಂದೇ ಕಡೆಗೆ ಸ್ಥಾಪನೆ ಆಗುವುದರಿಂದ ಈ ಸಮುದಾಯಗಳ ನಾಗರೀಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಅಲ್ಲದೇ ಹಿಂದುಳಿದ ಜಾತಿಗಳು ರಿಯಾಯಿತಿ ಧರದಲ್ಲಿ ತಮ್ಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಭವನ ನಿರ್ಮಾಣ ಅಗತ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಗೋಪಾಲ್‌ರಾವ್, ರವಿಶಂಕರ್‌ದೇವರಮನಿ, ಪಂಪಣ್ಣ, ವಿರುಪಾಕ್ಷಿ.ಬಿ., ಐಲಿ ಸಿದ್ದಣ್ಣ, ಶಾಂತಪ್ಪ, ಎಂ.ರಾಜಶೇಖರ್, ಗೌಡಪ್ಪನವರ್, ಶ್ರೀನಿವಾಸ್, ನಾಗೇಂದ್ರಪ್ಪ, ತಿಪ್ಪೇಸ್ವಾಮಿ, ವೀರೇಶ್ ಜಿನಗಾರ್, ಬಸವರಾಜ, ರಾಮಲಿ, ಶಂಕ್ರಪ್ಪ, ಶಿವಕುಮಾರ್,ಉಮಾಮಹೇಶ್ವರ್,ರಾಜಕುಮಾರ್, ಯು.ಆಂಜನೇಯಲು ಮುಂತಾದವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ