Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮಸ್ಥರ ಸಮಸ್ಯೆಗಳಿಗೆ ಪಿಡಿಒ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಅಮರಾವತಿ ಗ್ರಾ. ಪಂ.ಗೆ ಬೀಗ ಹಾಕಿ ಪ್ರತಿಭಟನೆ

ಹುನಗುಂದ: ತಾಲೂಕಿನ ಅಮರಾವತಿ ಗ್ರಾಮ ಪಂಚಾಯತಿಯ ಪಿಡಿಒ ಶಿಲ್ಪಾ ರ್‍ಯಾಕಿ ಅವರು ಗ್ರಾಮಸ್ಥರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ, ಗ್ರಾಮ ಪಂಚಾಯಿತಿಗೆ ಗುರುವಾರ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ಗ್ರಾಮಸ್ಥರಾದ ಶರಣಪ್ಪ ಗೋಪಲಪ್ಪನವರ ಮಾತನಾಡಿ, ಕಳೆದ ಒಂದು ವರ್ಷವಾದರು ಗ್ರಾಮದ ಜನರ ಎನ್.ಆರ್.ಜಿ. ಜಾಬ್ ಕಾರ್ಡ ಮಾಡಿಕೊಡದೆ ಜನರನ್ನು ಸತಾಯಿಸುತ್ತಿದ್ದಾರೆ. ಎನ್.ಆರ್.ಜಿ. ಕೆಲಸ ನೀಡುತ್ತಿಲ್ಲ. ಕೆಲಸ ಮಾಡಿದವರ ಕಾರ್ಮಿಕರಿಗೆ ಸರಿಯಾಗಿ ಹಣ ಪಾವತಿಸುತ್ತಿಲ್ಲ, ರೈತರು ದನದ ಕೊಟ್ಟಿಗೆ ನಿರ್ಮಿಸಿದ ಮತ್ತು ಜನತಾ ಮನೆಗಳನ್ನು
ಬಿಲ್ ಸರಿಯಾಗಿ ಪಾವತಿಸುತ್ತಿಲ್ಲ. ಪಿಡಿಒ ಮತ್ತು ಕಂಪೂಟರ್ ಆಪರೇಟರ್ ಕಚೇರಿಗೆ ಸರಿಯಾಗಿ ಬಾರದೆ ಜನರಿಗೆ ಕೈಗೆ ಸಿಗುತ್ತಿಲ್ಲ. ಗ್ರಾಮದಲ್ಲಿ ರಸ್ತೆ, ಚರಂಡಿ, ಶೌಚಾಲಯ ಸರಿಯಾಗಿ ಇಲ್ಲ ಹಾಗೂ ಪಂಚಾಯತಿ ವ್ಯಾಪ್ತಿಯಲ್ಲಿ ಎಲ್ಲ ಅಭಿವೃದ್ದಿ ಕೆಲಸಗಳು ಕುಂಠಿತಗೊಂಡಿವೆ ಆದ್ದರಿಂದ ಅವರ ಕಾರ್ಯವೈಖರಿ ಗ್ರಾಮದ ಜನರಿಗೆ ಬೇಸರ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಪಂ ಮಾಜಿ ಅಧ್ಯಕ್ಷ ಅಮೀನಪ್ಪ ಸಂದಿಗವಾಡ ಮಾತನಾಡಿ, ಪಂಚಾಯತಿ ಅಧ್ಯಕ್ಷ ಮತ್ತು ಸದಸ್ಯರಿಗೆ, ಸಾರ್ವಜನಿಕರಿಗೆ ಪಿಡಿಒ ಗೌರವ ನೀಡುವುದಿಲ್ಲ, ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸುತ್ತಿಲ್ಲಿ. ಗ್ರಾಮದ ಜನರ ಕುಂದುಕೊರತೆಯನ್ನು ಆಲಿಸುತ್ತಿಲ್ಲ. ಪಿಡಿಒ ಮತ್ತು ಕಂಪೂಟರ್ ಆಪರೇಟರ್‌ಗಳನ್ನು ಈ ಪಂಚಾಯತಿಯಿಂದ ಬೇರೆ ಕಡೆಗೆ ವರ್ಗಾವಣೆ ಮಾಡುವವರಿಗೆ ನಮ್ಮ ಹೋರಾಟವನ್ನು ನಿಲ್ಲಿಸುವದಿಲ್ಲ. ಇಲ್ಲವಾದರೆ ಜಿಪಂ ಮುಖ್ಯಕಾರ್ಯನಿರ್ವಾಹಕರು ಪಂಚಾಯತಿಗೆ ಆಗಮಿಸುವವರೆಗೆ ಪ್ರತಿಭಟನೆಯನ್ನು ಹಿಂತೆಗೆಯುವುದಿಲ್ಲ ಕಚೇರಿ ಬಾಗಿಲು ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದರು. ನಂತರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುಳೀಧರ ದೇಶಪಾಂಡೆ ಆಗಮಿಸಿ ಜಿಪಂ ಮುಖ್ಯಕಾರ್ಯನಿರ್ವಾಹಕರು ಅವರಿಗೆ ದೂರವಾಣಿ ಮೂಲಕ ತಿಳಿಸಿದಾಗ ತಾತ್ಕಾಲಿಕವಾಗಿ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.
ಗ್ರಾಮಸ್ಥರಾದ ಮೃತ್ಯುಂಜಯ ಕಪರದ, ಮಹಾಂತೇಶ ಚಿತ್ತವಾಡಗಿ, ಮಂಜುನಾಥ ಹುನಕುಂಟಿ, ಆನಂದ ಹುನಕುಂಟಿ, ಮುತ್ತುರಾಜ ಗೌಡರ್, ಅಜಯ ಕಂಬಳಿ, ಶಿವು ಗೌಡರ, ಬಸವರಾಜ ಗೋಲಪ್ಪನವರ, ಚಂದಪ್ಪ ಗೂಳಿ, ಶಶಿಕುಮಾರ ಗೋಲಪ್ಪನವರ ಸೇರಿದಂತೆ ಗ್ರಾಮದ ಜನರು ಪಾಲ್ಗೊಂಡಿದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ