Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಯೊಬ್ಬರೂ ಸದೃಡ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯವಶ್ಯ : ಡಾ.ಶಿವಾನಂದ ಭಾರತಿ ಸ್ವಾಮಿಜಿ

ಬೈಲಹೊಂಗಲ: ಮಾನವನಿಗೆ ಮನುಷ್ಯ ಜನ್ಮ ಅತ್ಯಂತ ಶ್ರೇಷ್ಠವಾಗಿದ್ದು ಪ್ರತಿಯೊಬ್ಬರೂ ಸದೃಡ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯವಶ್ಯವಾಗಿದೆ ಎಂದು ಸುಕ್ಷೇತ್ರ ಇಂಚಲದ ಡಾ.ಶಿವಾನಂದ ಭಾರತಿ ಸ್ವಾಮಿಜಿ ಹೇಳಿದರು.
ಅವರು ಪಟ್ಟಣದ ಶ್ರೀ ದಾನಮ್ಮದೇವಿ ದೇವಸ್ಥಾನದ ಹತ್ತಿರ ಮಲಪ್ರಭಾ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್ ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಆಹಾರ, ನೀರು, ನಿದ್ರೆ, ಆರೋಗ್ಯ ಸರಿ ಇದ್ದಾಗ ಮಾತ್ರ ಮನುಷ್ಯ ಆರೋಗ್ಯವಂತನಾಗಿರಲು ಸಾಧ್ಯ. ವ್ಯತ್ಯಾಸವಾದರೇ ಆರೋಗ್ಯ ಕ್ಷೀಣವಾಗುತ್ತದೆ,ನಮ್ಮ ಆರೋಗ್ಯವನ್ನು ನಾವೇ ಕಾಪಾಡಿಕೊಳ್ಳಬೇಕು. ಇದನ್ನು ಬೇರೆ ಯಾರಿಂದಲೂ ಸಾಧ್ಯವಿಲ್ಲ. ಮನುಷ್ಯನಿಗೆ ಸಂಪತ್ತುಗಿಂತ ಆರೋಗ್ಯ ಮುಖ್ಯವಾಗಿದೆ. ಈ ಆಸ್ಪತ್ರೆ ಅತ್ಯಾಧುನಿಕ ಸುಸಜ್ಜಿತವಾಗಿ ನಿರ್ಮಾಣವಾಗಿದ್ದು, ಜನತೆಯ ಎಲ್ಲ ರೀತಿಯ ಆರೋಗ್ಯ ಸಮಸ್ಯೆ ದೂರವಾಗಲಿ ಎಂದು ಹಾರೈಸಿದರು.
ಮುರಗೋಡದ ನೀಲಕಂಠ ಸ್ವಾಮಿಜಿ, ಶಾಖಾ ಮೂರುಸಾವಿರಮಠದ ಪ್ರಭುನೀಲಕಂಠ ಸ್ವಾಮಿಜಿ, ಮೌಲಾನಾ ಶೌಕತಅಲಿ ಬಾದಿ ಮಾತನಾಡಿ, ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ಉತ್ತಮ ಆರೋಗ್ಯ ನೀಡುವ ಮೂಲಕ ಜಿಲ್ಲೆಯಲ್ಲಿ ಆಸ್ಪತ್ರೆಯು ಮಾದರಿಯಾಗಲಿ. ಜನತೆಯ ನಂಬಿಕೆಯನ್ನು ವೈದ್ಯರು ಪ್ರಾಮಾಣಿಕತೆಯಿಂದ ನಿರ್ವಹಿಸಲಿ. ವೈದ್ಯರು ದೇವರ ರೂಪವಾಗಿದ್ದು, ಜನತೆಗೆ ನೆಮ್ಮದಿ ಬದುಕು ನೀಡಲು ಪ್ರಾಮಾಣಿಕ ಸೇವೆ ಮಾಡಬೇಕೆಂದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದೆ ಪ್ರೀಯಾಂಕಾ ಜಾರಕಿಹೊಳಿಮಾತನಾಡಿ, ಭವ್ಯವಾದ ಅಸ್ಪತ್ರೆಯ ಮೂಲಕ ನಾಡಿನ ಸೇವೆ ಯುವ ವೈದ್ಯರಿಂದ ಪ್ರಾಮಾಣಿಕವಾಗಿ ನಡೆಯಲಿದೆ. ಚಿಕಿತ್ಸೆ ಕೊಡಿವುದಲ್ಲದೆ ಜನತೆ ಅನಾರೋಗ್ಯಕ್ಕೆ ಈಡಾಗದಂತೆ ಜಾಗೃತಿ ಮೂಡಿಸುವ ಕೆಲಸ ಸಕಲ ವೈದ್ಯರಿಂದ ನಡೆಯಬೇಕೆಂದರು.
ಶಾಸಕ ಬಾಬಾಸಾಹೇಬ ಪಾಟೀಲ ಮಾತನಾಡಿ, ಪಟ್ಟಣಕ್ಕೆ ಅವಶ್ಯಕತೆ ಇದ್ದ ಸುಸಜ್ಜಿತ ಆಸ್ಪತ್ರೆ ಪ್ರಾರಂಭವಾಗಿದೆ. ವೈದ್ಯರು ಜನತೆಗೆ ಮಾತು ಕೊಟ್ಟಂತೆ ಪ್ರಾಮಾಣಿಕತೆಯಿಂದ ಕಡಿಮೆ ವೆಚ್ಚದ ಉತ್ತಮ ಸೌಲಭ್ಯ ನೀಡಿ ಜನಾನುರಾಗಿ ವೈದ್ಯರಾಗಿ ಹೊರಹೊಮ್ಮಬೇಕೆಂದರು.
ಡಾ.ಮಂಜುನಾಥ ಮುದಕನಗೌಡರ ಪ್ರಾಸ್ತಾವಿಕವಾಗಿ ಮಾತನಾಡಿ, ಒಂದೆಸೂರಿನಡಿ,
ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಮತ್ತು ಅತ್ಯಾಧುನಿಕ ಸೌಲಭ್ಯದೊಂದಿಗೆ ಪ್ರಾಮಾಣಿಕವಾಗಿ ಚಿಕಿತ್ಸೆ ನೀಡುವ ಪ್ರಮಾಣ ಮಾಡುವೆವು ಎಂದರು.
ಶಾಸಕ ಮಹಾಂತೇಶ ಕೌಜಲಗಿ ಅಧ್ಯಕ್ಷತೆ ವಹಿಸಿ, ಉದ್ಘಾಟಿಸಿದರು.
ಹಿರಿಯ ವೈದ್ಯರಾದ ಡಾ.ಬಿ.ಎಸ್.ಮಹಾಂತಶೆಟ್ಟಿ, ಡಾ.ಎ.ಎನ್.ಬಾಳಿ ಅವರನ್ನು ಸನ್ಮಾನಿಸಲಾಯಿತು. ಕು. ಅನ್ವಿಷಾ ದೊಡವಾಡ ಭರತನಾಟ್ಯ ಪ್ರದರ್ಶಿಸಿದರು.
ವೇದಿಕೆ ಮೇಲೆ ನಯಾನಗರದ ಅಭಿನವ ಸಿದ್ದಲಿಂಗ ಸ್ವಾಮಿಜಿ, ಧಾರ್ಮಿಕ ದತ್ತಿ ಇಲಾಖೆ ನಿರ್ದೇಶಕ ಮಹಾಂತಯ್ಯ ಶಾಸ್ರ್ತಿ ಆರಾದ್ರಿಮಠ, ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ರಾಜಯೋಗಿನಿ ಬಿ. ಕೆ. ಪ್ರಭಾ ಅಕ್ಕಾ, ಮಾಜಿ ಶಾಸಕ ಮಹಾಂತೇಶ ದೊಡಗೌಡ್ರ, ಮೇಜರ್ ಸಿದ್ದಲಿಂಗಯ್ಯ ಹಿರೇಮಠ, ಕಾಂಗ್ರೇಸ್ ಮುಖಂಡ ಮಲ್ಲಪ್ಪ ಮುರಗೋಡ, ಹಿರಿಯ ನ್ಯಾಯವಾದಿ ಬಿ.ಎಸ್. ಕಿವಡಸನ್ನವರ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಈಶ್ವರಪ್ಪ ಗಡಾದ, ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಯ ಸಿದ್ದನ್ನವರ, ಪುರಸಭೆ ಅಧ್ಯಕ್ಷ ವಿಜಯ ಬೋಳನ್ನವರ,ಮಾಜಿ ಅಧ್ಯಕ್ಷ ಬಸವರಾಜ ಜನ್ಮಟ್ಟಿ, ಉದ್ಯಮಿ ವಿಜಯ ಮೆಟಗುಡ್ಡ, ಜಿಪಂ ಮಾಜಿ ಸದಸ್ಯೆ ರೋಹಿಣಿ ಪಾಟೀಲ, ಮಂಜುಳಾ ದೊಡಗೌಡರ, ಇಂಜನೀಯರ್ ರಾಹುಲ ಪಾಟೀಲ, ಆಸ್ಪತ್ರೆಯ ವೈದ್ಯರಾದ ಡಾ.ಅಶೋಕ ದೊಡವಾಡ ಡಾ.ರವೀಂದ್ರಕುಮಾರ ಜಕನೂರ, ಶೈಲಜಾ ಮುದಕನಗೌಡರ, ಡಾ.ವಿಜಯಲಕ್ಷ್ಮೀ ದೊಡವಾಡ, ಡಾ.ಸಿಂಧು ಅಂಗಡಿ, ಆಡಳಿತಾಧಿಕಾರಿ ಕವಿತಾ ಜಕನೂರ ಅನೇಕರು ಇದ್ದರು.
ಇದೇ ವೇಳೆ ಡಾ.ಶಿವಾನಂದ ಭಾರತಿ ಸ್ವಾಮೀಜಿ ಅವರು ಆಸ್ಪತ್ರೆಯ ವೈದ್ಯರನ್ನು ಸನ್ಮಾನಿಸಿದರು. ಚಿಕ್ಕಮಕ್ಕಳ ತಜ್ಞ ಡಾ.ಶರಣಕುಮಾರ ಅಂಗಡಿ ಸ್ವಾಗತಿಸಿದರು. ಪುರಸಭೆ ಮಾಜಿ ಉಪಾಧ್ಯಕ್ಷ ಮಹಾಂತೇಶ ತುರಮರಿ ನಿರೂಪಿಸಿ, ವಂದಿಸಿದರು. ಸಾವಿರಾರು ನಾಗರೀಕರು ಉಪಸ್ಥಿತರಿದ್ದರು.

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ