Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮ ಪಂಚಾಯತಿ ಲೆಕ್ಕ ಪರಿಶೋಧನಾ ಅಭಿಯಾನದ ಅಡಹಾಕ್ ಸಮಿತಿ ಸಭೆ

ಇಂಡಿ : ತಾಲೂಕ ಪಂಚಾಯತ್ ಇಂಡಿ ಸಭಾ ಭವನದಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಾ.ಪಂ ಇಂಡಿ ಶ್ರೀ ಡಾ. ಭೀಮಾಶಂಕರ ಕನ್ನೂರ ಸರ್ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿಗಳ ಲೆಕ್ಕ ಪರಿಶೋಧನಾ ವರದಿಯಲ್ಲಿನ ಆಡಿಟ್ ಆಕ್ಷೇಪಣೆ ಮತ್ತು ವಸೂಲಾತಿ ಕಂಡಿಕೆಗಳ ತಿರುವಳಿಗಾಗಿ ೧೦೦ ದಿನಗಳ ಗ್ರಾಮ ಪಂಚಾಯತಿ ಲೆಕ್ಕ ಪರಿಶೋಧನಾ ಅಭಿಯಾನದ ಅಡಹಾಕ್ ಸಮಿತಿ ಸಭೆ ಜರುಗಿಸಲಾಯಿತು.

೨೦೧೪ -೧೫ ರಿಂದ ೨೦೨೩ - ೨೪ ರ ಅಂತ್ಯದವರೆಗೆ ಲೆಕ್ಕ ಪರಿಶೋಧನಾ ವರದಿಗಳಲ್ಲಿ ಬಾಕಿ ಇರುವ ಆಕ್ಷೇಪಣೆ ಮತ್ತು ವಸೂಲಾತಿ ಕಂಡಿಕೆಗಳನ್ನು ಇತ್ಯರ್ಥಗೊಳಿಸಲು ಅಡಹಾಕ್ ಸಮಿತಿ ಸಭೆ ಜರುಗಿಸಿದ್ದು ಸಭೆಯಲ್ಲಿ ಎಲ್ಲ ದಾಖಲಾತಿಗಳು ಮತ್ತು ಆಡಿಟ್ ವರದಿಗಳನ್ನು ತಾಲೂಕ ನೂಡಲ್ ಅಧಿಕಾರಿಗಳಾದ ಲೆಕ್ಕ ಅಧೀಕ್ಷಕರು ಶ್ರೀ ಸಂತೋಷ್ ದಂದರಗಿ ರವರು ಪರಿಶೀಲಿಸಿದರು.

ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮಾತನಾಡಿ ಬಾಕಿ ಉಳಿದಿರುವ ಆಕ್ಷೇಪಣೆ ಮತ್ತು ವಸೂಲಾತಿ ಕಂಡಿಕೆಗಳನ್ನೂ ನಿರ್ಲಕ್ಷ ವಹಿಸದೆ ಮುಂದಿನ ಸಭೆಯಲ್ಲಿ ಅನುಪಾಲನಾ ವರದಿಯೊಂದಿಗೆ ಸಭೆಗೆ ಹಾಜರಾಗಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಯೋಜನಾಧಿಕಾರಿಗಳು ಶ್ರೀ ನಂದೀಪ ರಾಠೋಡ, ಸಹಾಯಕ ಲೆಕ್ಕಾಧಿಕಾರಿಗಳು ಶ್ರೀ ಶ್ರೀಶೈಲ ಹಡಪದ, ಶ್ರೀ ವೈ ಡಿ ಮನಗೂಳಿ, ಶ್ರೀಮತಿ ರಾಜಶ್ರೀ ಕಂಬಾರ , ತಾಲೂಕಿನ ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕ ಪಂಚಾಯತಿ ಸಿಬ್ಬಂದಿಗಳು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ