LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಬಿಜೆಪಿಯಿಂದ 25 ಕೋಟಿ ಆಫರ್: ಆಮ್ ಆದ್ಮಿ ಶಾಸಕ ಸ್ಫೋಟಕ ಮಾಹಿತಿ!

ನವದೆಹಲಿ,ಏಪ್ರಿಲ್ 01: ಆಮ್ ಆದ್ಮಿ ಪಕ್ಷದ ಶಾಸಕ ರಿತುರಾಜ್ ಝಾ ಪಕ್ಷಕ್ಕೆ ಸೇರ್ಪಡೆಯಾಗಲು ಬಿಜೆಪಿ 25 ಕೋಟಿ ರೂಪಾಯಿ ಆಫರ್ ನೀಡಿತ್ತು ಎಂದು ಆರೋಪಿಸಿದ್ದಾರೆ. ತಾವು ಮಾತ್ರವಲ್ಲದೇ ತಮ್ಮ ಜೊತೆಗೆ 10 ಶಾಸಕರನ್ನು ಕರೆತರಬೇಕು ಎಂದೂ ಬಿಜೆಪಿ ಕೇಳಿದ್ದಾಗಿ ಹೇಳಿರುವ ಝಾ ಸಂಚಲನ ಮೂಡಿಸಿದ್ದಾರೆ.

ದೆಹಲಿ ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಆಮ್ ಆದ್ಮಿ ಪಕ್ಷದ ಶಾಸಕ, ದೆಹಲಿ ಸರ್ಕಾರವನ್ನು ಬೀಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ದೆಹಲಿ ಸಿಎಂ ಕೇಜ್ರಿವಾಲ್ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ನಾಲ್ಕು ಬಾರಿ ಸೋಲಿಸಿದ್ದಾರೆ. ಬಿಜೆಪಿಯವರು ಅಗ್ಗದ ತಂತ್ರಗಳನ್ನು ಮತ್ತೆ ಹೆಣೆಯುತ್ತಿದ್ದಾರೆ ಎಂದು ಝಾ ಆರೋಪಿಸಿದ್ದಾರೆ.

"ನಿನ್ನೆ, ನಾನು ಭಾರತ ಮಹಾರಾಲಿ ನಂತರ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬವಾನಾದ ದರಿಯಾಪುರಕ್ಕೆ ಹೋಗಿದ್ದೆ. ಕಳೆದ ಮೂರ್ನಾಲ್ಕು ದಿನಗಳಿಂದ ಫೋನ್ ಮೂಲಕ ನನ್ನನ್ನು ಸಂಪರ್ಕಿಸಲು ಕೆಲವರು ಪ್ರಯತ್ನಿಸುತ್ತಿದ್ದರು" ಎಂದು ಝಾ ಹೇಳಿದರು.

ರಾತ್ರಿ 9.15ಕ್ಕೆ ನಾನು ಅಲ್ಲಿಗೆ ತಲುಪಿದಾಗ ಮೂರ್ನಾಲ್ಕು ಜನ ನನ್ನನ್ನು ಒಂದು ಕಡೆ ಕರೆದುಕೊಂಡು ಹೋಗಿ, ‘ಒಪ್ಪದಿದ್ದರೆ ಏನೂ ಸಿಗುವುದಿಲ್ಲ ನೋಡಿ, ರಾಷ್ಟ್ರಪತಿ ಆಳ್ವಿಕೆ ಹೇರಲಾಗುತ್ತದೆ, ನೀವು 10 ಶಾಸಕರನ್ನು ಕರೆತನ್ನಿ, ನಿಮ್ಮಲ್ಲಿ ಪ್ರತಿಯೊಬ್ಬರಿಗೂ 25 ಕೋಟಿ ರೂಪಾಯಿ ಕೊಡುತ್ತೇವೆ, ಬಿಜೆಪಿ ಸರ್ಕಾರದಲ್ಲಿ ನಿಮ್ಮನ್ನು ಮಂತ್ರಿ ಮಾಡಲಾಗುವುದು' ಎಂಬ ಆಮಿಷವೊಡ್ಡಲಾಯಿತು ಎಂದು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್