Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಆರ್ಥಿಕ ಅಭಿವೃದ್ಧಿಗೆ ನಂದಿನಿ ಅರ್ಬನ್ ಸೊಸೈಟಿಯನ್ನು ಸ್ಥಾಪಿಸಿರುವುದು ಶ್ಲಾಘನೀಯ

ರಾಮದುರ್ಗ: ತಾಲೂಕಿನಲ್ಲಿರುವ ಎಲ್ಲ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸೇರಿಸಿ ರೈತರ ಆರ್ಥಿಕ ಅಭಿವೃದ್ಧಿಗೆ ನಂದಿನಿ ಅರ್ಬನ್ ಸೊಸೈಟಿಯನ್ನು ಸ್ಥಾಪಿಸಿರುವುದು ಶ್ಲಾಘನೀಯ. ರೈತರ ಸಹಕಾರದೊಂದಿಗೆ ಸಂಸ್ಥೆಯು ಉತ್ತರೊತ್ತರವಾಗಿ ಬೆಳೆದು ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಲಿ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಪಟ್ಟಣದ ನಂದಿನಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಗೆ ಸೌಹಾರ್ದಯುತವಾಗಿ ಭೇಟಿ ನೀಡಿದ ಅವರು, ರಾಸು ವಿಮೆ ಮತ್ತು ಕಲ್ಯಾಣ ಸಂಘದಿಂದ ಚೆಕ್ಕುಗಳನ್ನು ವಿತರಿಸಿ ಅವರು ಮಾತನಾಡಿದರು.
ರೈತರ ಏಳ್ಗೆಗಾಗಿಯೇ ಹುಟ್ಟುಕೊಂಡಿರುವ ನಂದಿನಿ ಸೊಸೈಟಿ ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ. ರೈತರನ್ನು ಮುಖ್ಯವಾಹಿನಿಗೆ ತರುವುದರ ಜತೆಗೆ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶ, ಕಳಕಳಿಯನ್ನು ಮೆಚ್ಚುವಂತಾಗಿದೆ. ಕಡಿಮೆ ಅವಧಿಯಲ್ಲಿ ೪೦ ಲಕ್ಷ ರೂಪಾಯಿ ವಹೀವಾಟು ನಡೆಸಿರುವ ಈ ಸೊಸೈಟಿ ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ದಿ ಹೊಂದಲಿ ಎಂದರು.
ಜಿಲ್ಲಾ ಹಾಲು ಒಕ್ಕೂಟದಿಂದ ಹೈನುಗಾರ ರೈತರಿಗೆ ಉಪಯುಕ್ತ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಈ ಹಿಂದಿನ ಅವಧಿಯಲ್ಲಿ ಕೇವಲ ೬೮ ಲಕ್ಷ ರೂಪಾಯಿ ಲಾಭದಲ್ಲಿದ್ದ ಇದನ್ನು ನನ್ನ ಅಧಿಕಾರವಧಿಯಲ್ಲಿ ಸುಮಾರು ೧೩ ಕೋಟಿ ರೂಪಾಯಿ ಲಾಭ ಗಳಿಸುವ ಮೂಲಕ ರೈತರ ಸವಾಂಗೀಣ ಅಭಿವೃದ್ಧಿಗೆ ಸಿದ್ಧರಿದ್ದೇವೆ. ಸಹಕಾರಿ ಸಂಘಗಳು ಉಳಿಯಬೇಕು. ಬೆಳೆಯಬೇಕು. ಇದರಿಂದ ರೈತರ ಜೀವನ ಉದ್ಧಾರವಾಗಬೇಕು ಎಂದು ಹೇಳಿದರು.
ರೈತನ ಬದುಕು ಹಸನಾಗಲು ನಮ್ಮ ಕೆಎಂಎಫ್ ಅತೀ ಬದ್ಧತೆಯಿಂದ ಕಾರ್ಯ ನಿರ್ವಹಿಸುತ್ತಿದೆ. ಸಂಘಗಳಿಗೆ ಹಾಲು ಪೂರೈಕೆ ಮಾಡುವ ರೈತರಿಗೆ ೧೦ ದಿನಗಳಲ್ಲಿ ಅವರ ಬ್ಯಾಂಕ್ ಖಾತೆಗಳಿಗೆ ಬಿಲ್ ಸದಾಯ ಮಾಡಲಾಗುತ್ತಿದೆ. ಒಕ್ಕೂಟಕ್ಕೆ ಬಂದ ಲಾಭಾಂಶದಲ್ಲಿ ರೈತರಿಗೆ ಚಾಪ್ ಕಟರ್ ಸೇರಿದಂತೆ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವ ಎಲ್ಲ ಯೋಜನೆಗಳನ್ನು ನೀಡುತ್ತಿದ್ದೇವೆ. ಪ್ರತಿಶತ ೬೦ ರಷ್ಟು ರಿಯಾಯಿತಿ ದರದಲ್ಲಿ ರೈತರಿಗೆ ಉಪಕರಣಗಳನ್ನು ನೀಡುವ ಯೋಜನೆಯನ್ನು ಜಾರಿಗೊಳಿಸಿದ್ದಾಗಿ ಅವರು ಹೇಳಿದರು.
ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ ಪಾಟೀಲ, ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ರಮೇಶ ಅಣ್ಷಿಗೇರಿ, ಡಾ| ಕೆ.ವಿ. ಪಾಟೀಲ, ಜಯಪ್ರಕಾಶ ಸಿಂಧೆ, ನಂದಿನಿ ಸೊಸೈಟಿ ಅಧ್ಯಕ್ಷ ಆರ್.ಜಿ. ಸಿಂಗಾರಗೊಪ್ಪ, ಉಪಾಧ್ಯಕ್ಷ ಶಿವಾನಂದ ಶಿರೂರ, ಆಡಳಿತ ಮಂಡಳಿಯ ಸದಸ್ಯರಾದ ಯಲ್ಲಪ್ಪ ಬೀರಸಿದ್ಧ, ತುಳಸಿಗಿರಿಗೌಡ ಪಾಟೀಲ, ಈರಣ್ಣ ನವರಕ್ಕಿ, ಮುಖ್ಯ ಕಾರ್ಯನಿರ್ವಾಹಕ ವಿನಾಯಕ ನಾಯಿಕರ ಸೇರಿದಂತೆ ಅನೇಕರು

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ