ಮೂಡಲಗಿ : ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘವು ೨೦೨೫-೨೬ನೇ ಸಾಲಿನಲ್ಲಿ ೨೬ ಲಕ್ಷ ರೂ. ಲಾಭ ಗಳಿಸಿದೆ ಎಂದು ಸಂಘದ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ ಬೆಳಗಲಿ ತಿಳಿಸಿದರು.
ಮಂಗಳವಾರದಂದು ತಾಲೂಕಿನ ಶಿವಾಪೂರ(ಹ) ಗ್ರಾಮದ ಹಾಲು ಉತ್ಪಾದಕರ ಸಂಘದ ಆವರಣದಲ್ಲಿ ಜರುಗಿದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಮಾತನಾಡಿದ ಅವರು, ಸಂಘದ ಸದಸ್ಯರು ಹಾಗೂ ಸಿಬ್ಬಂದಿಯ ಸಹಕಾರದಿಂದ ಸಂಘವು ಉತ್ತಮ ಪ್ರಗತಿ ಸಾಧಿಸಿದೆ ಎಂದು ಹೇಳಿದರು.
ಸಭೆಯಲ್ಲಿ ಸದಸ್ಯರು ಹಾಗೂ ಆಡಳಿತ ಮಂಡಳಿ ನಡುವೆ ವಿವಿಧ ವಿ?ಯಗಳ ಕುರಿತು ಪ್ರಶ್ನೋತ್ತರ ನಡೆಯುವ ಸಂದರ್ಭದಲ್ಲಿ ಕೆಲಹೊತ್ತು ಮಾತಿನ ಚಕಮಕಿ ಹಾಗೂ ಗದ್ದಲದ ವಾತಾವರಣ ನಿರ್ಮಾಣವಾಯಿತು. ಕೆಲವು ಸದಸ್ಯರು ಸಂಘದ ವ್ಯವಹಾರಗಳು ಹಾಗೂ ಆಡಳಿತಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಿ ಸ್ಪ?ನೆ ಕೋರಿದರು.