Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಪೊಲೀಸರ ಕಾರ್ಯಾಚರಣೆ ಕಳೆದುಹೋದ 27 ಮೊಬೈಲ್‌ಗಳು ಮಾಲೀಕರಿಗೆ ಹಸ್ತಾಂತರ

ಜಮಖಂಡಿ ಪೊಲೀಸ್ ಇಲಾಖೆಯಿಂದ ಯಶಸ್ವಿ ಕಾರ್ಯಾಚರಣೆ ನಡೆಸಲಾಗಿದ್ದು, ಹಲವು ದಿನಗಳಿಂದ ಕಳೆದುಹೋಗಿದ್ದ ಸುಮಾರು 27 ಮೊಬೈಲ್‌ಗಳನ್ನು ಪತ್ತೆಹಚ್ಚಿ ಮಾಲೀಕರಿಗೆ ಮರಳಿ ನೀಡಲಾಗಿದೆ.
ಈ ಕಾರ್ಯಾಚರಣೆಗೆ ಸಿಪಿಐ ಮಲ್ಲಪ್ಪ ಮಡ್ಡಿ ಅವರ ನೇತೃತ್ವದಲ್ಲಿ ಪಿಎಸ್‌ಐ ಅನಿಲ್ ಕುಂಬಾರ, ಎಎಸ್‌ಐ ಭೀಮಸಿ ಮದರಕಂಡಿ ಹಾಗೂ ಸಿಬ್ಬಂದಿಗಳಾದ ಪ್ರಕಾಶ್ ಹೊಸಮನಿ ಸೇರಿದಂತೆ ಇತರರು ಸಹಕಾರ ನೀಡಿದರು.
ಕಳೆದುಹೋದ ಮೊಬೈಲ್‌ಗಳ ಕುರಿತು ದೂರು ದಾಖಲಿಸಿದ್ದ ಮಾಲೀಕರನ್ನು ಪೊಲೀಸ್ ಠಾಣೆಗೆ ಕರೆಸಿ, ಅವರ ಮೊಬೈಲ್‌ಗಳನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮೊಬೈಲ್ ಮಾಲೀಕರು, “ನಮ್ಮ ಮೊಬೈಲ್‌ಗಳು ಕಳೆದುಹೋದಾಗ ಜಮಖಂಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದೆವು. ಆಗ ಪೊಲೀಸರು ಮೊಬೈಲ್ ಸಿಕ್ಕ ತಕ್ಷಣ ಮಾಹಿತಿ ನೀಡುತ್ತೇವೆ ಎಂದು ಹೇಳಿದ್ದರು. ಅದೇ ರೀತಿ ಇದೀಗ ಮೊಬೈಲ್‌ಗಳನ್ನು ಪತ್ತೆಹಚ್ಚಿ ನಮಗೆ ಮರಳಿ ನೀಡಿದ್ದಾರೆ. ಜಮಖಂಡಿ ಪೊಲೀಸರ ಕಾರ್ಯಕ್ಕೆ ನಾವು ಧನ್ಯವಾದಗಳನ್ನು ಸಲ್ಲಿಸುತ್ತೇವೆ,” ಎಂದು ಸಂತಸ ವ್ಯಕ್ತಪಡಿಸಿದರು.
ಜಮಖಂಡಿ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ