Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ಮಳಿಗೆಗಳ ಕಾಮಗಾರಿಗೆ ಕಾಶಪ್ಪನವರ ಅಡಿಗಲ್ಲು

ಹುನಗುಂದ; ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ವೇಗದಲ್ಲಿ ನಡೆಯುತ್ತಿವೆ. ಕೆಲವರು ನನ್ನ ಮೇಲೆ ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ತಾಲೂಕಿನ ನಾಗೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಲಾಕರ್ ಉದ್ಘಾಟನೆ ಹಾಗೂ ನೂತನ ಮಳಿಗೆಗಳ ಅಡಿಗಲ್ಲು ಸಮಾರಂಭದ ಅಧ್ಯಕ್ಷ ತೆವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿಯೇ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಗತಿಯತ್ತ ಸಾಗುತ್ತಿದೆ ಜೊತಗೆ ರೈತರಿಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿದೆ. ಹೆಚ್ಚಿನ ಪ್ರಮಾಣದ ಬೆಳೆ ಸಾಲ ನೀಡಲು ಆರ್‌ಬಿಐ ನಿಯಮಗಳು ಅಡ್ಡಿಯಾಗಿವೆ. ಮುಂಬರುವ ದಿನಗಳಲ್ಲಿ ರೈತರಿಗೆ ನೀಡುವ ಬೆಳೆ ಸಾಲವನ್ನು ೫೦ ಸಾವಿರ ದಿಂದ ಒಂದು ಲಕ್ಷಕ್ಕೆ ಹೆಚ್ಚಿಸಲಾಗುವುದು. ಮಳಿಗೆಗಳು ನಿರ್ಮಾಣಕ್ಕೆ ರೂ. ೨೦ ಲಕ್ಷ ಅನುದಾನ ನೀಡಲಾಗುವುದು ಎಂದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕರಿಸಂಗಪ್ಪ ನರಸಾಪೂರ ಮಾತನಾಡಿ ಇತ್ತೀಚಿನ ದಿನಗಳಲ್ಲಿ ನಮ್ಮ ಸಂಘ ಪ್ರಗತಿ ಕಾಣುತ್ತಿದೆ. ಸಂಘದಿಂದ ಬೆಳೆ ಸಾಲ, ಬಂಗಾರ, ಜಾಮೀನು ಸಾಲ ನೀಡಲಾಗುತ್ತಿದೆ. ಉಳಿತಾಯ ಹಣವನ್ನು ಹೆಚ್ಚಿಸಿದ್ದೇವೆ. ಮಳಿಗೆಗಳ ನಿರ್ಮಾಣಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಶಾಸಕರು ಅನುದಾನ ನೀಡಬೇಕು ಎಂದರು.
ಗ್ರಾಮದ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಕೊಠಡಿಗಳ ನಿರ್ಮಾಣ, ದನದ ದವಾಖಾನೆ, ಬಸ್ ನಿಲ್ದಾಣ ನಿರ್ಮಾಣ, ರಸ್ತೆ ದುರಸ್ಥಿ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಯಲ್ಲಿ ವೈದ್ಯರ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿಕೊಂಡರು. ಗ್ರಾಮಸ್ಥರ ಬೇಡಿಕೆಗಳನ್ನು ಒಂದು ವ?ಗಳ ಒಳಗಾಗಿ ಈಡೇರಿಸುವುದಾಗಿ ಬರವಸೆ ನೀಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹುಲಗವ್ವ ಮಾದರ, ಸಂಘದ ಉಪಾಧ್ಯಕ್ಷ ಬಸವರಾಜ ನರಗುಂದ, ಮಹಾಂತೇಶ ನಾಡಗೌಡ, ಹುನಗುಂದ ಬಿಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಬಿ.ಎಸ್. ಪಾಟೀಲ, ಮಹಾಂತೇಶ ಮುರುಡಿ, ಬಸವರಾಜ ಹೊಸಮನಿ, ಸಂಗಪ್ಪ ಹೂಲಗೇರಿ, ಮುಖ್ಯ ಕಾರ್ಯನಿರ್ವಾಹಕ ಮಲ್ಲಪ್ಪ ಹುಬ್ಬಳ್ಳಿ ನಾಗೂರ ಮತ್ತು ಯಡಹಳ್ಳಿ ಗ್ರಾಮದ ಶೇರೂದಾರರು ಭಾಗವಹಿಸಿದ್ದರು ಸ್ವಾಗತವನ್ನು ಮಾಂತೇಶ್ ದ್ಯಾಮನಗುಡಿ ಮಲಕಾಜಗೌಡ ಪರೂತಗೌಡರ ನಿರೂಪಿಸಿ ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ