LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಶ್ರೀ ಧನಲಕ್ಷ್ಮೀ ಸಕ್ಕರೆ ಕಾರ್ಖಾನೆಯ ಚುನಾವಣೆ : 24 ರಂದು ಸಭೆ

ರಾಮದುರ್ಗ: ಸೆ. ೧೪ ರಂದು ನಡೆಯಲಿರುವ ಖಾನಪೇಠದ ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಖಾನೆಯ ಸರ್ವ ಶೇರುದಾರರ ಸಭೆಯನ್ನು ಪಟ್ಟಣದ ಶ್ರೀನಿವಾಸ ಸಭಾ ಭವನದಲ್ಲಿ ಆ.೨೪ ರಂದು ಬೆಳಿಗ್ಗೆ ೧೧ ಘಂಟೆಗೆ ಕರೆಯಲಾಗಿದೆ ಎಂದು ಮುಖಂಡ ಬಸವರಾಜ ಹಿರೇರಡ್ಡಿ ಹೇಳಿದರು.
ಪಟ್ಟಣದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ಶೇರುದಾರರ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಕಾರ್ಖಾನೆ ಆಡಳಿತ ಮಂಡಳಿ ಚುನಾವಣೆಗೆ ಸ್ಪರ್ಧೆ ಮಾಡಲು ಮೀಸಲಾತಿ ಅನುಸಾರವಾಗಿ ಪೆನೆಲ್ ರಚನೆ ಸೇರಿದಂತೆ ವಿವಿಧ ವಿಷಯಗಳನ್ನು ಚರ್ಚಿಸಲಾಗುತ್ತಿದೆ. ಕಾರ್ಖಾನೆಯ ಸರ್ವ ಶೇರುದಾರರು ಹಾಗೂ ರೈತ ಮುಖಂಡರು, ಹಿತೈಸಿಗಳು, ಕಬ್ಬು ಬೆಳೆಗಾರರು ಸಭೆಯಲ್ಲಿ ಪಾಲ್ಗೊಂಡು ಸೂಕ್ತ ಸಲಹೆ ಸೂಚನೆ ನೀಡಬೇಕೆಂದು ಅವರು ಮನವಿ ಮಾಡಿದರು.
ಕಳೆದ ಚುನಾವಣೆಯಲ್ಲಿ ಅಂದಿನ ಆಡಳಿತ ಮಂಡಳಿಯ ಪಿತೂರಿಯಿಂದ ೧೯ ಸಾವಿರ ಶೇರುದಾರರ ಪೈಕಿ ಕೇವಲ ೪-೫ ಸಾವಿರ ಶೇರುದಾರರಿಗೆ ಮಾತ್ರ ತಮ್ಮ ಹಕ್ಕು ಚಲಾಯಿಸುವ ಅವಕಾಶ ಇರುವಂತೆ ಮತದಾರರ ಪಟ್ಟಿ ತಯಾರಿಸಲಾಗಿತ್ತು. ಪ್ರಸಕ್ತ ಚುನಾವಣೆಯಲ್ಲಿ ಕಾರ್ಖಾನೆಯ ಸರ್ವ ಶೇರುದಾರರಿಗೆ ತಮ್ಮ ಹಕ್ಕು ಚಲಾಯಿಸುವ ಅವಕಾಶವಿದ್ದು, ಸಹಕಾರ ಇಲಾಖೆಯ ನಿಯಮಗಳ ಅಡಿಯಲ್ಲಿ ನ್ಯಾಯಸಮ್ಮತ ಚುನಾವಣೆ ಜರುಗಲು ಚುನಾವಣಾ ಆಯೋಗ ಸಿದ್ಧತೆ ಮಾಡಿಕೊಂಡಿದೆ. ರೈತರು, ಶೇರುದಾರರು ಕಾರ್ಖಾನೆಯ ಹಿತ ಕಾಯುವ ವ್ಯಕ್ತಿಗಳನ್ನು ಆಡಳಿತ ಮಂಡಳಿಯ ಚುನಾವಣೆಯಲ್ಲಿ ಆಯ್ಕೆ ಮಾಡುವ ಗುರುತರ ಜವಾಬ್ದಾರಿ ದೊರೆತಂತಾಗಿದೆ ಎಂದು ಹೇಳಿದರು.
ಹಿರಿಯ ಮುಖಂಡ ಬಾಬಣ್ಣ ಫತ್ತೇಪೂರ ಮಾತನಾಡಿ, ಸಕ್ಕರೆ ಕಾರ್ಖಾನೆಗೆ ಪ್ರಥಮ ಆಡಳಿತ ಮಂಡಳಿ ಆಯ್ಕೆ ಸಂದರ್ಭದಲ್ಲಿ ಸರ್ವ ಸದಸ್ಯರ ಅಭಿಪ್ರಾಯದಂತೆ ಅವಿರೋಧ ಆಯ್ಕೆ ಮಾಡಲಾಗಿತ್ತು. ತದನಂತರ ದಿನಗಳಲ್ಲಿ ಚುನಾವಣೆಗಳು ನಡೆದವು. ಸಧ್ಯ ಆ.೨೪ ರಂದು ನಡೆಯುವ ಶೇರುದಾರರ ಸಭೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾಣ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯರಾದ ಕಲ್ಲಣ್ಣ ವಜ್ರಮಟ್ಟಿ, ಚಂದ್ರಶೇಖರ ಹಿರೇಮಠ, ಸೋಮಶೇಖರ ಸಿದ್ಲಿಂಗಪ್ಪನವರ, ಜಿ.ಬಿ. ರಂಗನಗೌಡ್ರ, ಗೋಪಾಲ ಸಂಶಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ