LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡ

 

ರನ್ನ ಬೆಳಗಲಿ: ಸೆ.೧೮: ಮುಧೋಳ ತಾಲೂಕಿನ ರನ್ನ ಕ್ರೀಡಾಂಗಣದಲ್ಲಿ ಗುರುವಾರ ನಡೆದ ೨೦೨೬ನೇ ಸಾಲಿನ ೧೪ ಮತ್ತು ೧೭ ವ?ದೊಳಗಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ರನ್ನ ಬೆಳಗಲಿಯ ಪಿಎಂ ಶ್ರೀ ಕೆಪಿಎಸ್ ಶಾಲೆಯ ವಿದ್ಯಾರ್ಥಿ ಚೇತನ ಉಮೇಶ ನ್ಯಾಮಗೌಡ ೧೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ಇದೇ ಕ್ರೀಡಾಕೂಟದಲ್ಲಿ ಶಾಲೆಯ ತನುಶ್ರೀ ರಂಗನಾಥ ರಾಠೋಡ ಚಕ್ರ ಎಸೆತದಲ್ಲಿ ತೃತೀಯ ಸ್ಥಾನ ಹಾಗೂ ಆಶಾ ಅಡಿವಪ್ಪ ಚನ್ನಾಳ ೧೦೦ ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಚೇತನ ನ್ಯಾಮಗೌಡ ಸೇರಿದಂತೆ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಾಲೆಯ ಶಿಕ್ಷಕರು ಸನ್ಮಾನಿಸಿ ಅಭಿನಂದಿಸಿದರು. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ರಾಜೇಶ್ವರಿ ಹಗಳಗಾರ ಗುರುಮಾತೆ ಅವರನ್ನು ಸಹ ಅಭಿನಂದಿಸಲಾಯಿತು.ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯ ಆರ್.ಕೆ. ಪಾಟೀಲ, ಎಸ್‌ಡಿಎಂಸಿ ಅಧ್ಯಕ್ಷ ಅಡಿವೆಪ್ಪ ಪೂಜಾರಿ, ಉಪಾಧ್ಯಕ್ಷೆ ರಾಜೇಶ್ವರಿ ಕಣಬೂರ, ಶಿಕ್ಷಕರಾದ ಬಿ.ವಿ. ಹಿರೇಮಠ, ಎಸ್.ಎಸ್. ಕಾಯಿ, ಎಚ್.ಎಸ್. ಕೊಳಚಿ ಹಾಗೂ ಎಸ್‌ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರು ಮತ್ತು ಪಟ್ಟಣದ ಹಿರಿಯರು ಶುಭ ಹಾರೈಸಿ ಅಭಿನಂದಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್