Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿ ಟನ್ ಕಬ್ಬಿಗೆ ೪೦೦೦ ರೂ ನೀಡಬೇಕೆಂದು ಆಗ್ರಹಿಸಿ ರೈತ ಸಂಘ ಮನವಿ

ಇಂಡಿ : ಕಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ ಕಾರ್ಖಾನೆಯವರು ಪ್ರಸಕ್ತ ಹಂಗಾಮಿನಲ್ಲಿ ದರ ೪೦೦೦ ರೂ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಕಾರ್ಯಕರ್ತರು ಆಡಳಿತಸೌಧ ಎದುರು ಪ್ರತಿಭಟನೆ ನಡೆಸಿ ತಹಸೀಲ್ದಾರ ಬಿ.ಎಸ್.ಕಡಕಬಾವಿ ಇವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಅಧ್ಯಕ್ಷ ಎಸ್.ಬಿ.ಕಂಬೋಗಿ ಮಾತನಾಡಿ ತಾಲೂಕಿನಲ್ಲಿ ೪೫ ಸಾವಿರ ಹೇಕ್ಟರ್ ಪ್ರದೇಶದಲ್ಲಿ ಕಬ್ಬು ಬೆಳೆ ಬೆಳೆಯಲಾಗುತ್ತಿದೆ. ಉತ್ಪಾದನೆ ವೆಚ್ಚ ಏರಿಕೆಯಿಂದ ರೈತರು ತೀರ್ವ ಸಂಕಷ್ಟದಲ್ಲಿದ್ದಾರೆ. ಕಳೆದ ವರ್ಷ ನೀಡಿದ ಪ್ರತಿ ಟನ್ ಗೆ ರೂ ೨೭೦೦ ರೂ ರೈತರ ಪರಿಶ್ರಮಕ್ಕೆ ನ್ಯಾಯ ಸಿಗುತ್ತಿಲ್ಲ ಎಂದರು.
ಅದಲ್ಲದೆ ಮಹಾರಾಷ್ಟ್ರದ ಪಕ್ಕದ ಜಿಲ್ಲೆಗಳಾದ ಸೋಲಾಪುರ ಸೇರಿದಂತೆ ಇನ್ನಿತರ ಕಾರ್ಖಾನೆಗಳು ರೂ ನಾಲ್ಕು ಸಾವಿರ ಬೆಳಗಾವಿ ಜಲ್ಲೆಯವರು ರೂ ೩೫೦೦ ಮತ್ತು ಬಾಗಲಕೋಟ ಜಿಲ್ಲೆಯವರು ರೂ ೩೨೦೦ ರೂ ನೀಡುತ್ತಿದ್ದಾರೆ ಎಂದರು.
ಕಬ್ಬಿನ ಬೆಲೆ ಕಾರ್ಖಾನೆ ಪ್ರಾರಂಭಿಸುವ ಮುಂಚೆ ಘೋಷಿಸಬೇಕು. ಇಲ್ಲದಿದ್ದರೆ ಕಾರ್ಖಾನೆ ಎದುರು ಪ್ರತಿಭಟನೆ ಮಾಡಲಾಗುವದೆಂದರು.
ತಮ್ಮರಾಯ ಆಸಂಗಿ, ಸಿದ್ದಣ್ಣ ತಳವಾರ, ಮಲ್ಲಿಕಾರ್ಜುನ ನಾವದಗಿ, ಹಣಮಂತ ಗುಡ್ಲ, ರಫೀಕ ಚೌಧರಿ ಮತ್ತಿತರಿದ್ದರು. -
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ