LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇನ್ಫೋಸಿಸ್​ನಿಂದ 32,403 ಕೋಟಿ ರೂ ಜಿಎಸ್​ಟಿ ಬಾಕಿ?!

ಬೆಂಗಳೂರು, ಆಗಸ್ಟ್ 1: ವಿದೇಶಗಳಲ್ಲಿರುವ ತನ್ನ ಶಾಖಾ ಘಟಕಗಳಿಂದ ಸೇವೆ ಪಡೆದದ್ದಕ್ಕೆ ಇನ್ಫೋಸಿಸ್ ಜಿಎಸ್​ಟಿ ಪಾವತಿಸಿಲ್ಲ ಎಂದು ತೆರಿಗೆ ಇಲಾಖೆ ಆರೋಪಿಸಿದೆ. 2017ರಿಂದ 2022ರವರೆಗೆ ಐದು ವರ್ಷದಲ್ಲಿ ಬರೋಬ್ಬರಿ 32,403.46 ಕೋಟಿ ರೂ ಮೊತ್ತದ ಐಜಿಎಸ್​ಟಿ ಪಾವತಿಸಬೇಕು ಎಂದು ಇನ್ಫೋಸಿಸ್​ಗೆ ಬೆಂಗಳೂರಿನ ಜಿಎಸ್​ಟಿ ಅಧಿಕಾರಿಗಳು ನೋಟೀಸ್ ಕೊಟ್ಟಿದ್ದಾರೆ.

ಕುತೂಹಲ ಎಂದರೆ ಬಾಕಿ ಇದೆ ಎನ್ನಲಾದ ಇಷ್ಟು ಐಜಿಎಸ್​ಟಿ ಹಣವು ಇನ್ಫೋಸಿಸ್​ನ ಐದು ವರ್ಷದ ಲಾಭಕ್ಕೆ ಸಮ ಎನ್ನಲಾಗಿದೆ. ಇನ್ಫೋಸಿಸ್ ಸಂಸ್ಥೆ ಜಿಎಸ್​ಟಿ ಪ್ರಾಧಿಕಾರದ ಈ ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್ ಬಗ್ಗೆ ಪ್ರತಿಕ್ರಿಯಿಸಿದ್ದು, ತಾನು ಯಾವುದೇ ತೆರಿಗೆ ನಿಯಮ ಉಲ್ಲಂಘಿಸಿಲ್ಲ, ಅಥವಾ ಬಾಕಿ ಉಳಿಸಿಕೊಂಡಿಲ್ಲ ಎಂದು ಷೇರು ವಿನಿಯಮ ಕೇಂದ್ರಕ್ಕೆ ಸಲ್ಲಿಸಿದ ಫೈಲಿಂಗ್​ನಲ್ಲಿ ತಿಳಿಸಿದೆ.

ಇನ್ಫೋಸಿಸ್ ವಿದೇಶಗಳಲ್ಲಿ ಬ್ರ್ಯಾಂಚ್ ಆಫೀಸ್​ಗಳನ್ನು ಸ್ಥಾಪಿಸಿದೆ. ಆ ಶಾಖಾ ಕಚೇರಿಗಳಿಂದ ಪಡೆದ ಸರಬರಾಜುಗಳಿಗೆ ಸಂಸ್ಥೆ ಹಣ ಪಾವತಿಸಿದೆ. 2017ರ ಜುಲೈನಿಂದ ಆರಂಭವಾಗಿ 2021-22ರ ಹಣಕಾಸು ವರ್ಷದವರೆಗೆ ರಿವರ್ಸ್ ಚಾರ್ಜ್ ಮೆಕ್ಯಾನಿಸಂ ಅಡಿಯಲ್ಲಿ ಇನ್ಫೋಸಿಸ್ ಸಂಸ್ಥೆ 32,403.46 ಕೋಟಿ ರೂ ಐಜಿಎಸ್​ಟಿ ಪಾವತಿಸಬೇಕಿತ್ತು… ಇನ್ಫೋಸಿಸ್ ಸಂಸ್ಥೆ ತನ್ನ ಎಕ್ಸ್​ಪೋರ್ಟ್ ಇನ್ವಾಯ್ಸ್ ಅಡಿಯಲ್ಲಿ ಆ ವೆಚ್ಚಗಳನ್ನು ತೋರಿಸಿದೆ ಎಂದು ಕರ್ನಾಟಕ ರಾಜ್ಯ ಜಿಎಸ್​ಟಿ ಪ್ರಾಧಿಕಾರ ತನ್ನ ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್​ನಲ್ಲಿ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ